ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

Date:

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ ಹಂತವಾಗಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಆಲೂರು ತಾಲ್ಲೂಕಿನ ಅಡಿಬೈಲು ಗ್ರಾಮದ ಬಿಜೆಪಿ ಮುಖಂಡ ದಿನೇಶ್ ಗೌಡ ವಿರುದ್ಧ ಮಂಗಳೂರು ಮೂಲದ ರಂಗಭೂಮಿ ಕಲಾವಿದೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.

- Advertisement -

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂತ್ರಸ್ತ ಮಹಿಳೆ, 2018ರಲ್ಲಿ ಬೆಂಗಳೂರಿನಲ್ಲಿ ನಾಟಕ ಮತ್ತು ನಟನಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ದಿನೇಶ್ ಗೌಡ ಅವರ ಪರಿಚಯವಾಗಿತ್ತು. ಪರಿಚಯ ಕ್ರಮೇಣ ಆತ್ಮೀಯತೆಗೆ ತಿರುಗಿ, ಇಬ್ಬರ ನಡುವೆ ಪ್ರೇಮ ಸಂಬಂಧ ಬೆಳೆದಿತ್ತು. ಈ ಸಂದರ್ಭದಲ್ಲಿ ತನಗೆ ಈಗಾಗಲೇ ವಿವಾಹವಾಗಿದ್ದು, ಮಗಳಿದ್ದಾಳೆ ಹಾಗೂ ಪತಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿರುವುದಾಗಿ ಸ್ಪಷ್ಟವಾಗಿ ತಿಳಿಸಿದ್ದರೂ, ದಿನೇಶ್ ಗೌಡ ಅವರು ತನ್ನನ್ನೇ ವಿವಾಹವಾಗುವುದಾಗಿ ನಂಬಿಸಿ ಭರವಸೆ ನೀಡಿದ್ದರು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ನಂತರ ವಿಚಾರಿಸಿದಾಗ ದಿನೇಶ್ ಗೌಡ ಅವರಿಗೆ ಈಗಾಗಲೇ ವಿವಾಹವಾಗಿದ್ದು, ಇಬ್ಬರು ಮಕ್ಕಳಿರುವ ಸಂಗತಿ ತಿಳಿದುಬಂದಿತ್ತು. ಈ ವಿಚಾರವಾಗಿ ಪ್ರಶ್ನಿಸಿದಾಗ ಪತ್ನಿಗೆ ವಿಚ್ಛೇದನ ನೀಡಿ ತನ್ನನ್ನು ವಿವಾಹವಾಗುವುದಾಗಿ ಭರವಸೆ ನೀಡಿ ಸಂಬಂಧವನ್ನು ಮುಂದುವರಿಸಿದ್ದರು ಎಂದು ಆರೋಪಿಸಿದರು.

ಕೊರೊನಾ ಸಾಂಕ್ರಾಮಿಕದ ಅವಧಿಯಲ್ಲಿ ಹಂದಿ ಸಾಕಾಣಿಕೆ ಫಾರಂ ಆರಂಭಿಸುವುದಾಗಿ ಹೇಳಿ ಆರ್ಥಿಕ ನೆರವು ಕೇಳಿದ್ದರು. ಅವರ ಮಾತುಗಳನ್ನು ನಂಬಿ ವಿವಿಧ ಹಂತಗಳಲ್ಲಿ ಹಣ ನೀಡಿದ್ದು, ಒಟ್ಟಾರೆಯಾಗಿ ಸುಮಾರು 27 ಲಕ್ಷ ರೂ.ಗಳನ್ನು ಪಡೆದಿದ್ದಾರೆ. ಆದರೆ ಈವರೆಗೆ ಕೇವಲ 10 ಲಕ್ಷ ರೂ.ಗಳನ್ನು ಮಾತ್ರ ಹಿಂದಿರುಗಿಸಿದ್ದು, ಉಳಿದ ಹಣವನ್ನು ವಾಪಸ್ ನೀಡದೆ ಸತಾಯಿಸುತ್ತಿದ್ದಾರೆ ಎಂದು ದೂರಿದರು.

ಈ ಪ್ರಕರಣದಲ್ಲಿ ದಿನೇಶ್ ಗೌಡ ಅವರ ಪತ್ನಿ ಪೂರ್ಣಿಮಾ ಅವರೂ ಭಾಗಿಯಾಗಿದ್ದಾರೆ ಎಂಬುದು ಮಹಿಳೆಯ ಆರೋಪವಾಗಿದೆ. ಈ ಸಂಬಂಧ ನ್ಯಾಯಕ್ಕಾಗಿ ಆಲೂರು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಲು ಪ್ರಯತ್ನಿಸಿದಾಗ ಆರಂಭದಲ್ಲಿ ಪೊಲೀಸರು ದೂರು ಸ್ವೀಕರಿಸಲು ನಿರಾಕರಿಸಿದ್ದರು. ಬಳಿಕ ಹಿರಿಯ ಪೊಲೀಸ್ ಅಧಿಕಾರಿಗಳ ಸೂಚನೆಯ ಮೇರೆಗೆ ಶೂನ್ಯ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿದ್ದೀರಾ?ಹಾಸನ | ನಡು ರಸ್ತೆಯಲ್ಲೇ ಮಹಿಳೆಯರ ಹೊಡೆದಾಟ 

ತದನಂತರ ಪ್ರಕರಣ ಆಲೂರು ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದು, ತನಿಖೆಗೆ ಪೂರಕವಾಗುವಂತಹ ಅಗತ್ಯ ದಾಖಲೆಗಳು ಹಾಗೂ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಒದಗಿಸಿದ್ದರೂ, ಪ್ರಕರಣದ ತನಿಖೆಯಲ್ಲಿ ನಿರೀಕ್ಷಿತ ಪ್ರಗತಿ ಕಂಡುಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ತಮ್ಮನ್ನು ಮದುವೆಯಾಗುವುದಾಗಿ ನಂಬಿಸಿ ಭಾವನಾತ್ಮಕವಾಗಿ ಬಳಸಿಕೊಂಡು, ಆರ್ಥಿಕವಾಗಿಯೂ ಸಂಕಷ್ಟಕ್ಕೆ ದೂಡಲಾಗಿದೆ ಎಂದು ಆರೋಪಿಸಿದ ಮಹಿಳೆ, ಇಷ್ಟೊಂದು ಗಂಭೀರ ಆರೋಪಗಳಿದ್ದರೂ ತನಿಖೆ ವಿಳಂಬವಾಗುತ್ತಿರುವುದು ನ್ಯಾಯದ ನಿರೀಕ್ಷೆಯಲ್ಲಿರುವ ತಮ್ಮನ್ನು ಮತ್ತಷ್ಟು ಆತಂಕಕ್ಕೀಡು ಮಾಡಿದೆ ಎಂದು ಅಳಲು ತೋಡಿಕೊಂಡರು.

ಪೊಲೀಸ್ ಇಲಾಖೆ ಇನ್ನು ಮುಂದಾದರೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಲಭ್ಯವಿರುವ ದಾಖಲೆಗಳು, ಹಣಕಾಸಿನ ವಹಿವಾಟು ಹಾಗೂ ಸಂಬಂಧಪಟ್ಟ ವ್ಯಕ್ತಿಗಳ ಪಾತ್ರದ ಕುರಿತು ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ತಮ್ಮಿಂದ ಪಡೆಯಲಾಗಿದೆ ಎನ್ನಲಾದ ಬಾಕಿ ಹಣವನ್ನು ಮರಳಿ ಕೊಡಿಸುವುದರ ಜೊತೆಗೆ ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನುಬದ್ಧ ಕ್ರಮ ಕೈಗೊಂಡು ನ್ಯಾಯ ಒದಗಿಸಬೇಕು ಎಂದು ಮಹಿಳೆ ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

ಚಿಕ್ಕಮಗಳೂರು | ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ವಾರ್ಷಿಕ ಕ್ರೀಡಾಕೂಟ

ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನವೆಂಬರ್ ೧೮ ರಂದು ಬೆಳಿಗ್ಗೆ 8.೦೦...