ಹಾಸನ | ಹೈ ವೋಲ್ಟೇಜ್‌ ಕ್ಷೇತ್ರದಲ್ಲಿ ಸ್ವರೂಪ್‌ ಜಯಬೇರಿ; ಪ್ರೀತಂ ಗೌಡಗೆ ಮುಖಭಂಗ

Date:

Advertisements

ರಾಜ್ಯ ವಿಧಾನಸಭೆ ಚುನಾವಣೆಯ ಮತ ಎಣಿಕೆ ತ್ವರಿತವಾಗಿ ಸಾಗುತ್ತಿದೆ. ಹಾಸನ ಜಿಲ್ಲೆಯ ಜಿದ್ದಾಜಿದ್ದಿನ ಹೈವೋಲ್ಟೇಜ್‌ ಕ್ಷೇತ್ರವಾಗಿದ್ದ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಸ್ವರೂಪ್‌ ಪ್ರಕಾಶ್‌ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಸಾಶಕ ಪ್ರೀತಂ ಗೌಡ ಸೋಲುಂಡಿದ್ದು, ಮುಖಭಂಗ ಅನುಭವಿಸಿದ್ದಾರೆ.

ಜೆಡಿಎಸ್ ಟಿಕೆಟ್‌ ಹಂಚಿಕೆಯಲ್ಲಿ ಗೊಂದಲಕ್ಕೊಳಗಾಗಿದ್ದ ಹಾಸನ ಕ್ಷೇತ್ರದಲ್ಲಿ ಕೊನೆ ಹಂತದಲ್ಲಿ ಗೌಡರ ಕುಟುಂಬದಿಂದ ಸ್ವರೂಪ್‌ ಪ್ರಕಾಶ್‌ ಅವರಿಗೆ ಟಿಕೆಟ್‌ ಘೋಷಣೆ ಮಾಡಿದ್ದರು. ಬಳಿಕ ಗೌಡರ ಕುಟುಂಬ ಬಿಜೆಪಿಯನ್ನು ಈ ಬಾರಿ ಸೋಲಿಸಿ ಹಾಸನ ಭದ್ರಕೋಟೆಯನ್ನು ಉಳಿಸಿಕೊಳ್ಳಲೇಬೇಕೆಂದು ಟೊಂಕಕಟ್ಟಿ ನಿಂತಿತ್ತು.

ಇನ್ನೊಂದೆಡೆ ಬಿಜೆಪಿ ಅಭ್ಯರ್ಥಿ ಪ್ರೀತಂಗೌಡ, “ನಾನು ಒಂದು ಲಕ್ಷ ಮತಗಳ ಅಂತರದಲ್ಲಿ ಗೆಲ್ಲುತ್ತೇನೆ. ನಾನು ತುಂಬಾ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ನನ್ನ ಗೆಲುವಿನ ಜೈಕಾರ ಹೊಳೆನರಸೀಪುರದ ವರೆಗೂ ಕೇಳುತ್ತದೆ” ಎಂದು ಪರೋಕ್ಷವಾಗಿ ಗೌಡರ ಕುಟುಂಕ್ಕೆ ಸವಾಲು ಹಾಕಿದ್ದರು.

Advertisements

ಒಟ್ಟಾರೆಯಾಗಿ ಮೂರು ಬಾರಿ ಶಾಸಕರಾಗಿದ್ದ ದಿವಂಗತ‌ ಎಚ್.ಎಸ್‌. ಪ್ರಕಾಶ ಅವರ ಪುತ್ರ ಸ್ವರೂಪ್ ಸುಮಾರು 8 ಸಾವಿರ ಮತಗಳಿಂದ ಗೆಲುವು‌ ಸಾಧಿಸಿದ್ದಾರೆ. ಅನುಕಂಪ, ಆಡಳಿತ‌ ವಿರೋಧಿ ಅಲೆ ಕ್ಷೇತ್ರದಲ್ಲಿ‌ ಕೆಲಸ ಮಾಡಿದೆ.

ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ ಅವರಿಗೆ ಹಿನ್ನಡೆಯಾಗಿದ್ದು, ಮುಖಭಂಗವಾಗಿದೆ. ಅತಿಯಾದ ಆತ್ಮವಿಶ್ವಾಸ, ಅನಗತ್ಯ ಹೇಳಿಕೆಗಳಿಂದ ಗೊಂದಲ ಸೃಷ್ಟಿಸಿಕೊಂಡ ಪ್ರೀತಂ ಗೌಡ ಅವರನ್ನು ಕ್ಷೇತ್ರದ ಮತದಾರರು ತಿರಸ್ಕರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗೆಲುವಿನ ಖಾತೆ ತೆರೆದ ಕಾಂಗ್ರೆಸ್, ಹಾಸನದಲ್ಲಿ ಜೆಡಿಎಸ್‌ನ ಸ್ವರೂಪ್‌ ಗೆಲುವು; ಚಾಮರಾಜನಗರದಲ್ಲಿ ಸೋಮಣ್ಣಗೆ ಸೋಲು

ದಾಸ ಒಕ್ಕಲಿಗ ಸಮುದಾಯದ ಮತಗಳು ಬಿಜೆಪಿ, ಜೆಡಿಎಸ್‌ಗೆ ಹಂಚಿಕೆಯಾಗಿದ್ದು, ಅಲ್ಪಸಂಖ್ಯಾತರ ಮತಗಳು ಸಂಪೂರ್ಣವಾಗಿ ಜೆಡಿಎಸ್ ಪರ ಬಂದಿದ್ದರಿಂದ ಸ್ವರೂಪ್ ಗೆಲುವು ಸುಲಭವಾಯಿತು.

ಸ್ವರೂಪ್‌ಗೆ ಟಿಕೆಟ್ ಕೊಡಲು ಆರಂಭದಲ್ಲಿ ಅಪಸ್ವರ ಎತ್ತಿದ್ದ ಎಚ್.ಡಿ.ರೇವಣ್ಣ ಕುಟುಂಬ ಸ್ವರೂಪ ಪರ ನಿಂತಿದ್ದು ಹಾಗೂ ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡರ ಭಾವನಾತ್ಮಕ ಪ್ರಚಾರಗಳು ಸ್ವರೂಪ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿವೆ ಎನ್ನಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X