ಹಾಸನ | ಮದುವೆಗೆ ಬಂದಿದ್ದ ಯುವತಿ ನಾಪತ್ತೆ

Date:

ಮದುವೆ ಕಾರ್ಯಕ್ರಮಕ್ಕೆ ಬಂದಿದ್ದ 29 ವರ್ಷದ ಮಹಿಳೆ ನಿಗೂಢವಾಗಿ ಕಣ್ಮರೆಯಾಗಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ನಡೆದಿದೆ.

- Advertisement -

ಹಾಸನ ತಾಲ್ಲೂಕಿನ ಕಲ್ಕೆರೆ ಗ್ರಾಮದ ಬಳಿ ಮಹಿಳೆಯ ಒಳ ಉಡುಪು, ಚಪ್ಪಲಿ ಹಾಗೂ ವ್ಯಾನಿಟಿ ಬ್ಯಾಗ್‌ ಪತ್ತೆಯಾಗಿದ್ದು, ಸಮೀಪದಲ್ಲಿರುವ ಕೆರೆಯಲ್ಲಿ ಶವ ಎಸೆದಿರುವ ಶಂಕೆಯ ಮೇರೆಗೆ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಮಹಿಳೆ ಮೂಲತಃ ಬೇಲೂರು ತಾಲೂಕಿನವರಾಗಿದ್ದು, ತುಮಕೂರು ಜಿಲ್ಲೆ ಕುಣಿಗಲ್ ಮೂಲದ ರುದ್ರೇಶ್ ಅವರೊಂದಿಗೆ ವಿವಾಹವಾಗಿದ್ದ ಪ್ರಿಯಾಂಕ (29), ಫೆ.12 ರಂದು ಚಿಕ್ಕಮಗಳೂರಿನ ಮದುವೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಅದೇ ದಿನ ಸಂಜೆ 7.30ರ ವೇಳೆಗೆ ಕುಟುಂಬ ಸದಸ್ಯರಿಗೆ ಕರೆ ಮಾಡಿದ ಪ್ರಿಯಾಂಕ, ಪರಿಚಯಸ್ಥರ ಜೊತೆ ಇರುವುದಾಗಿ ತಿಳಿಸಿ ಫೋನ್ ಕಟ್ ಮಾಡಿದ್ದರು. ರಾತ್ರಿ 8 ಗಂಟೆಯ ಬಳಿಕ ಮೊಬೈಲ್‌ ಸ್ವಿಚ್‌ ಆಫ್‌ ಆಗಿದ್ದು, ನಂತರದಿಂದ ಅವರ ಸಂಪರ್ಕ ಕಡಿತವಾಗಿದೆ. ಪ್ರಿಯಾಂಕ ಸುಮಾರು 30 ಲಕ್ಷ ರೂ. ಮೌಲ್ಯದ ಒಡವೆ ಧರಿಸಿದ್ದರೆಂದು ಕುಟುಂಬಸ್ಥರು ತಿಳಿಸಿದ್ದಾರೆ. ಒಡವೆಗಾಗಿ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಸಾಧ್ಯತೆ ಇರುವುದಾಗಿ ಕುಟುಂಬದವರು ಶಂಕೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕುಟುಂಬಸ್ಥರು ನೀಡಿದ ಮಾಹಿತಿಯಂತೆ, ಫೆ. 12ರ ರಾತ್ರಿ ಪ್ರಿಯಾಂಕ ಬೇಲೂರು ಬಸ್ ನಿಲ್ದಾಣದಿಂದ ನಿಗೂಢವಾಗಿ ಕಣ್ಮರೆಯಾಗಿದ್ದಾರೆ. ತಕ್ಷಣವೇ ಅರೇಹಳ್ಳಿ ಹಾಗೂ ಬೇಲೂರು ಪೊಲೀಸರಿಗೆ ದೂರು ನೀಡಲು ಮುಂದಾದರೂ, ದೂರು ಸ್ವೀಕರಿಸಿ ತನಿಖೆ ಆರಂಭಿಸಲು ವಿಳಂಬವಾಯಿತು ಎಂಬ ಆರೋಪ ಕೇಳಿಬಂದಿದೆ. “ನಿನ್ನೆ ದೂರು ಸ್ವೀಕರಿಸಿ ತಕ್ಷಣ ಹುಡುಕಾಟ ನಡೆಸಿದ್ದರೆ ನಮ್ಮ ಮಗಳು ಬದುಕಿ ಸಿಗುತ್ತಿದ್ದಳೋ ಏನೋ,” ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿದ್ದೀರಾ?ಹಾಸನ | ಸೈಟ್ ಹೋರಾಟ: ನ್ಯಾಯಾಲಯ ಮಹತ್ವದ ಆದೇಶ

ಘಟನಾ ಸ್ಥಳಕ್ಕೆ ಹಾಸನ ಜಿಲ್ಲಾ ಪೊಲೀಸ್‌ ಅಧೀಕ್ಷಕಿ ಶುಭಾನ್ವಿತಾ ಭೇಟಿ ನೀಡಿ ಖುದ್ದು ಪರಿಶೀಲನೆ ನಡೆಸಿದರು. ಕುಟುಂಬಸ್ಥರ ಆಕ್ರೋಶಕ್ಕೆ ಸ್ಪಂದಿಸಿದ ಅವರು, “ತಪ್ಪು ನಡೆದಿದ್ದರೆ ಖಂಡಿತ ಕಠಿಣ ಕ್ರಮ ಕೈಗೊಳ್ಳುತ್ತೇನೆ. ಮಹಿಳೆ ಮೃತಪಟ್ಟಿಲ್ಲ ಎನ್ನುವುದು ನಮ್ಮ ನಂಬಿಕೆ. ತನಿಖೆಗೆ ಸಹಕಾರ ನೀಡಿ,” ಎಂದು ಭರವಸೆ ನೀಡಿದ್ದಾರೆ. ಸ್ಥಳದ ಪಕ್ಕದಲ್ಲಿರುವ ಕೆರೆಯಲ್ಲಿ ಶವ ಎಸೆದಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದರು. ಆದರೆ ಇದುವರೆಗೆ ಯಾವುದೇ ಮೃತದೇಹ ಪತ್ತೆಯಾಗಿಲ್ಲ. ಬಳಿಕ ಪೊಲೀಸ್‌ ಪ್ರೋಣ್‌ ತಂಡ ಆಗಮಿಸಿ ಕೆರೆಯ ಸುತ್ತಮುತ್ತ ಹಾಗೂ ಬಟ್ಟೆ ಪತ್ತೆಯಾದ ಪ್ರದೇಶದಲ್ಲಿ ವಿಸ್ತ್ರತ ಹುಡುಕಾಟ ಕೈಗೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...