ಹಾವೇರಿ | ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆಯ ಬೃಹತ್ ನ್ಯಾಯ ಸಮಾವೇಶಕ್ಕೆ ಡಿವೈಎಫ್ಐ ಬೆಂಬಲ

Date:

Advertisements

“ಧರ್ಮಸ್ಥಳ ಪ್ರದೇಶ ವ್ಯಾಪ್ತಿಯಲ್ಲಿ ಅಸಹಜ ಸಾವು, ಮಹಿಳೆಯರ ನಾಪತ್ತೆ, ಕೊಲೆ, ಭೂ ಆಕ್ರಮಗಳು, ಮಿತಿಮೀರಿದ ಬಡ್ಡಿ ವ್ಯವಹಾರ, ದಲಿತರ ಭೂಮಿ ಪ್ರಶ್ನೆಗಳನ್ನು ಮುಂದಿಟ್ಟುಕೊಂಡು ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆಯು ಸೆಪ್ಟೆಂಬರ್ 25 ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಆಯೋಜಿಸಿರುವ ಬೃಹತ್ ನ್ಯಾಯ ಸಮಾವೇಶವನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಕರ್ನಾಟಕ ರಾಜ್ಯ ಸಮಿತಿಯು ಬೆಂಬಲಿಸುತ್ತದೆ ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ತಿಳಿಸಿದ್ದಾರೆ.

 ಹಾವೇರಿ ಪಟ್ಟಣದಲ್ಲಿ ಶುಕ್ರವಾರ ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿದ ಅವರು, “ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ನೂರಾರು ಅಸಹಜ ಸಾವು, ಅತ್ಯಾಚಾರ, ಹಲ್ಲೆ, ಕೊಲೆ ಹುಡುಗಿಯರ ನಾಪತ್ತೆ ಪ್ರಕರಣಗಳನ್ನು ಎಸ್ಐಟಿ ಸಮಗ್ರ ತನಿಖೆಗೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

“ಧರ್ಮಸ್ಥಳದ ಅಶೋಕನಗರ, ಮುಂಡ್ರುಪಾಡಿಯ ದಲಿತ ಕುಟುಂಬಗಳಿಗೆ ಮೂಲಭೂತಸೌಕರ್ಯ ನೀಡಿ, ಹಕ್ಕು ಪತ್ರ ಒದಗಿಸಿ, ತಲಾ ಒಂದು ಎಕರೆ ಜಮೀನು ನೀಡಲು ಒತ್ತಾಯಿಸಿ, ಧರ್ಮಸ್ಥಳದ ಭೂ ಅಕ್ರಮ, ಭೂ ಕಬಳಿಕೆ, ಬಡ್ಡಿ ವ್ಯವಹಾರಗಳನ್ನು ತನಿಖೆ ಮಾಡಬೇಕು. ಪದ್ಮಲತಾ ವೇದವಲ್ಲಿ, ನಾರಾಯಣ ಮಾವುತ, ಯಮುನಾ, ಸೌಜನ್ಯ ಸಾವಿಗೆ ನ್ಯಾಯ ಒದಗಿಸುವಂತೆ ಡಿವೈಎಫ್ಐ ರಾಜ್ಯ ಸಮಿತಿಯು ಆಗ್ರಹಿಸುತ್ತದೆ” ಎಂದು ಹೇಳಿದ್ದಾರೆ.

“ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆಯು ಈ ಸಮಾವೇಶವನ್ನು ಆಯೋಜಿಸಿದ್ದು, ಅಂದು ಬೆಳಿಗ್ಗೆ 10.30 ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ಸಮಾನ ಮನಸ್ಕ ಪಕ್ಷಗಳು, ಎಡ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ, ಸಾಂಸ್ಕೃತಿಕ ಸಂಘಟನೆಗಳನ್ನೊಳಗೊಂಡ ಪ್ರಗತಿಪರ ಜನಮುಖೀ ಚಿಂತಕರು, ರಾಷ್ಟ್ರೀಯ ಮಹಿಳಾ ನಾಯಕರು, ಸ್ವಾತಂತ್ರ್ಯ ಹೋರಾಟಗಾರ್ತಿ‌ ಕ್ಯಾಫ್ಟನ್ ಲಕ್ಷ್ಮಿ ಸೆಹಗಲ್ ರವರ ಮಗಳು ಸುಭಾಷಿಣಿ ಅಲಿಯವರು, ರಾಜ್ಯದ ಜೀವಪರ ಚಿಂತಕರು, ರೈತ ಮುಖಂಡರು, ಕಾರ್ಮಿಕ ಮುಖಂಡರು, ಹೋರಾಟಗಾರರು ಹಾಗೂ ಸಾಹಿತಿಗಳು ಈ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ದಾವಣಗೆರೆ | ರೈತರ ದಾರಿಗೆ ಪ್ರಭಾವಿಗಳ ಅಡ್ಡಿ: ಸೂಕ್ತ ದಾರಿ ಗುರುತಿಸುವಂತೆ ರೈತ ಸಂಘ ಒತ್ತಾಯ

ರೈತರು ಜಮೀನಿಗೆ ಬರಲು 70-80 ವರ್ಷಗಳಿಂದ ಬಳಸುತ್ತಿದ್ದ ದಾರಿಗೆ ಖಾಸಗಿ ಮತ್ತು...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X