ಇಳಕಲ್ | 20 ದಿನಗಳಿಂದ ನೀರಿಲ್ಲದೆ ಹಾಹಾಕಾರ: 2 ದಿನಗಳಲ್ಲಿ ಪೂರೈಸದಿದ್ದರೆ ಧರಣಿ ಎಚ್ಚರಿಕೆ

Date:

ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ 3ನೇ ವಾರ್ಡ್‌ಗೆ ಕಳೆದ 20 ದಿನಗಳಿಂದ ಕುಡಿಯುವ ನೀರು ಸರಬರಾಜು ಸ್ಥಗಿತಗೊಂಡಿದ್ದು, ಮುಂದಿನ ಎರಡು ದಿನಗಳೊಳಗೆ ನೀರು ಪೂರೈಕೆ ಆರಂಭಿಸದಿದ್ದರೆ ನಗರಸಭೆ ಕಚೇರಿ ಎದುರು ಪ್ರತಿಭಟನೆ ಹಾಗೂ ಧರಣಿ ನಡೆಸಲಾಗುವುದು ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ.

- Advertisement -

ನೀರು ಪೂರೈಸುವಂತೆ ಆಗ್ರಹಿಸಿ ನಗರಸಭೆ ಎದುರು ಮಹಿಳೆಯರು ಸೇರಿದಂತೆ ನೂರಾರು ನಾಗರಿಕರು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

“3 ಮತ್ತು 4ನೇ ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಪೂರೈಕೆ ಕಡೆಗಣಿಸುತ್ತಿದ್ದಾರೆ. ಓವರ್‌ಹೆಡ್ ಟ್ಯಾಂಕ್ ಕಾಮಗಾರಿಯನ್ನೂ ಸ್ಥಗಿತಗೊಳಿಸಿದ್ದಾರೆ. ನಮಗೆ ಕುಡಿಯುವ ನೀರಿಲ್ಲದೆ ಕೆಲಸ ಕಾರ್ಯಗಳನ್ನು ಬಿಟ್ಟು ನೀರಿಗಾಗಿ ಬಿಂದಿಗೆಗಳನ್ನು ಹಿಡಿದು ಪರದಾಡುವಂತಾಗಿದೆ” ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿದ್ದೀರಾ? ಅಕಾಲಿಕ ಮಳೆ: ‘ಕೈಗೆ ಬಂದ ತುತ್ತು ಬಾಯಿಗಿಲ್ಲ’; ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ ರೈತ ಸ್ಥಿತಿ

“ನಮಗೆ ತಿಂಗಳಿಂದ ನೀರಿಲ್ಲ. ನಿದ್ದೆ ಇಲ್ಲ. ಕೆಲಸವೂ ಇಲ್ಲ. ನೀರಿಗಾಗಿ ಕಾದು ಕುಳಿತು ನಮಗೆ ಸಾಕಾಗಿದೆ. ನೀರಿಗಾಗಿ ಇನ್ನೊಂದು ದಿನ ಕಾಯುತ್ತೇವೆ, ನೀರು ಪೂರೈಕೆ ಮಾಡದಿದ್ದರೆ ನಗರಸಭೆ ಎದುರು ಕುಳಿತು ತೀವ್ರ ಹೋರಾಟ ಮಾಡುತ್ತೇವೆ” ಎಂದು ಮಹಿಳೆಯೊಬ್ಬರು ಎಚ್ಚರಿಕೆ ನೀಡಿದರು.

ಮಹಿಳೆಯರು ಖಾಲಿ ಕೊಡ ಪ್ರದರ್ಶಿಸಿ, ನಗರಸಭೆ ಸಿಬ್ಬಂದಿ ವಿರುದ್ಧ ಹರಿಹಾಯ್ದರು. ನೀರು ಸರಬರಾಜು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ನಾಳೆಯೊಳಗೆ ನೀರು ಪೂರೈಸುವುದಾಗಿ ಭರವಸೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಬಡ ಮಕ್ಕಳಿಗೂ ಪ್ರತಿಷ್ಠಿತ ಶಾಲೆಗಳಲ್ಲಿ ಕಲಿಯುವ ಅವಕಾಶ ನೀಡಿ: ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ

ಆರ್ಥಿಕ ಸಂಕಷ್ಟ ಮತ್ತು ಸಾಮಾಜಿಕ ಹಿಂದುಳಿದಿರುವಿಕೆಯ ಕಾರಣಕ್ಕೆ ಮಕ್ಕಳ ಶಿಕ್ಷಣದ ಅವಕಾಶಗಳು...

ಕಾಸಿಗಾಗಿ ಹುದ್ದೆ ಮಾರಾಟ: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ ಇಡಿ ವಶಕ್ಕೆ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಸಿಸಿ) ನಡೆದಿದೆ ಎನ್ನಲಾದ ಬೃಹತ್ ನೇಮಕಾತಿ ಅಕ್ರಮ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಗದಗ | ಕಳಸಾಪೂರ ಬಸವ ಕೇಂದ್ರದಲ್ಲಿ 1633ನೇ ವಾರದ ಶಿವಾನುಭವ ಕಾರ್ಯಕ್ರಮ

ಗದಗ ತಾಲೂಕ ಕಳಸಾಪೂರ ಗ್ರಾಮದ ಬಸವ ಕೇಂದ್ರದಲ್ಲಿ 1633ನೇ ವಾರದ ಶಿವಾನುಭವದಲ್ಲಿ...