ಕೆನಡಾದಲ್ಲಿ ಗುಂಡಿನ ದಾಳಿ: ಭಾರತೀಯ ವಿದ್ಯಾರ್ಥಿನಿ ಸಾವು

Date:

ಕೆನಡಾದ ಹ್ಯಾಮಿಲ್ಟನ್‌ನ ಒಂಟಾರಿಯೊ ಪಟ್ಟಣದಲ್ಲಿ ಭಾರತೀಯ ವಿದ್ಯಾರ್ಥಿನಿಯೊಬ್ಬರು ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

- Advertisement -

ಹರ್ಸಿಮ್ರತ್ ರಾಂಧವಾ(21) ಮೃತ ವಿದ್ಯಾರ್ಥಿನಿ. ಇವರು ಒಂಟಾರಿಯೊದ ಹ್ಯಾಮಿಲ್ಟನ್‌ನಲ್ಲಿರುವ ಮೊಹಾಕ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಟೊರೊಂಟೊದಲ್ಲಿರುವ ಭಾರತದ ರಾಯಭಾರಿ ಕಚೇರಿ ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಒಂಟಾರಿಯೊದ ಹ್ಯಾಮಿಲ್ಟನ್‌ನಲ್ಲಿ ಭಾರತೀಯ ವಿದ್ಯಾರ್ಥಿ ಹರ್ಸಿಮ್ರತ್ ರಾಂಧವಾ ಅವರ ದುರಂತ ಸಾವಿನಿಂದ ನಾವು ತೀವ್ರವಾಗಿ ದುಃಖಿತರಾಗಿದ್ದೇವೆ. ಸ್ಥಳೀಯ ಪೊಲೀಸರ ಪ್ರಕಾರ, ಎರಡು ವಾಹನಗಳ ನಡುವೆ ನಡೆದ ಗುಂಡಿನ ಚಕಮಕಿ ವೇಳೆ ಗುರಿ ತಪ್ಪಿದ ಬುಲೆಟ್ ವಿದ್ಯಾರ್ಥಿನಿಗೆ ತಗುಲಿದೆ. ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ. ನಾವು ಅವರ ಕುಟುಂಬದ ಜೊತೆ ನಿಕಟ ಸಂಪರ್ಕದಲ್ಲಿದ್ದೇವೆ ಮತ್ತು ಅಗತ್ಯವಿರುವ ಎಲ್ಲಾ ಸಹಾಯವನ್ನು ನೀಡಲು ಬದ್ಧರಾಗಿದ್ದೇವೆ ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹುಬ್ಬಳ್ಳಿ, ಮಂಗಳೂರು ಅತ್ಯಾಚಾರ ಪ್ರಕರಣ; ಪೊಲೀಸ್‌ ಇಲಾಖೆ ಎಚ್ಚೆತ್ತುಕೊಳ್ಳಬೇಕು

ಘಟನೆಯ ವೀಡಿಯೊವನ್ನು ಪರಿಶೀಲಿಸಿದಾಗ ಕಪ್ಪು ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಬಿಳಿ ಸೆಡಾನ್ ಕಾರಿನಲ್ಲಿದ್ದವರ ಮೇಲೆ ಗುಂಡಿನ ದಾಳಿ ನಡೆಸಿ ಕ್ಷಣ ಮಾತ್ರದಲ್ಲಿ ಸ್ಥಳದಿಂದ ಪರಾರಿಯಾಗಿದೆ. ಈ ಕುರಿತು ಕೆನಡಾ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಕಳೆದ 4 ತಿಂಗಳುಗಳಲ್ಲಿ ಕೆನಡಾದಲ್ಲಿ ನಾಲ್ವರು ಭಾರತೀಯರು ಪ್ರತ್ಯೇಕ ಘಟನೆಗಳಲ್ಲಿ ಕೊಲೆಯಾಗಿದ್ದಾರೆ. ಇವರಲ್ಲಿ ಮೂವರು ವಿದ್ಯಾರ್ಥಿಗಳಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಲೆಹರಾ ದೋ ತಿರಂಗಾ’ ಮಾರ್ಚ್‌ಗೆ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರಿಂದ ವಶಕ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ...

ಸಿಎಂಆರ್‌ಎಲ್ ಲಂಚ ಪ್ರಕರಣ: ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್‌ಗೆ ಇ.ಡಿ ಸಮನ್ಸ್

ಬಹುಚರ್ಚಿತ ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಅಕ್ರಮ ಹಣ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...