ಇಸ್ರೋ ಐತಿಹಾಸಿಕ ಸಾಧನೆ : ಚಂದ್ರನ ಮೇಲೆ ಯಶಸ್ವಿಯಾಗಿ ಇಳಿದ ‘ವಿಕ್ರಮ್ ಲ್ಯಾಂಡರ್’

Date:

Advertisements

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿಗಳು ಕಳೆದ ಜುಲೈ 14 ರಂದು ಉಡಾವಣೆ ಮಾಡಿದ್ದ ಚಂದ್ರಯಾನ-3 ನೌಕೆಯ ‘ವಿಕ್ರಮ್ ಲ್ಯಾಂಡರ್’ ಯಶಸ್ವಿಯಾಗಿ ಚಂದ್ರನ ಮೇಲೆ ಇಳಿದಿದೆ.

ಆ ಮೂಲಕ ಕೋಟ್ಯಂತರ ಭಾರತೀಯರ ಪ್ರಾರ್ಥನೆ ಫಲಿಸಿದೆ. ಈ ಐತಿಹಾಸಿಕ ಕ್ಷಣಕ್ಕೆ ಇಡೀ ವಿಶ್ವವೇ ಸಾಕ್ಷಿಯಾಯಿತು.

ಸಂಜೆ 6:03ಕ್ಕೆ ‘ವಿಕ್ರಮ್ ಲ್ಯಾಂಡರ್’ ಅನ್ನು ಯಶಸ್ವಿಯಾಗಿ ಚಂದ್ರನ ದಕ್ಷಿಣ ಧ್ರುವ ಮೇಲ್ಮೈನಲ್ಲಿ ಇಳಿದಿದೆ. ಈ ಮೂಲಕ ಭಾರತ ಐತಿಹಾಸಿಕ ಸಾಧನೆ ಮಾಡಿದೆ.

Advertisements

ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಕಂಟ್ರೋಲ್ ಸೆಂಟರ್‌ನಲ್ಲಿ ಮಾತನಾಡಿದ ಇಸ್ರೋ ಅಧ್ಯಕ್ಷ ಸೋಮನಾಥ್, ‘ಚಂದಿರನಲ್ಲಿ ಈಗ ಭಾರತವಿದೆ’ ಎಂದು ಘೋಷಿಸಿದರು.

chandrayana 3 1

ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅಲ್ಲಿಂದಲೇ ಈ ಪ್ರಕ್ರಿಯೆಯನ್ನು ವರ್ಚುವಲ್ ಮೂಲಕ ವೀಕ್ಷಿಸಿದರು.

ಬಳಿಕ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ‘ಇದೊಂದು ಐತಿಹಾಸಿಕ ಕ್ಷಣ. ಈಗ ಭಾರತ ಚಂದ್ರನ ಮೇಲಿದೆ. ಇಸ್ರೋ ವಿಜ್ಞಾನಿಗಳು ಇತಿಹಾಸ ಸೃಷ್ಟಿಸಿದ್ದಾರೆ. ಐತಿಹಾಸಿಕ ಕ್ಷಣಕ್ಕೆ ನಾವೆಲ್ಲರೂ ಸಾಕ್ಷಿಯಾಗಿದ್ದೇವೆ’ ಎಂದು ಹೇಳಿದರು.

‘ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡ್ ಮಾಡಿದ ಮೊದಲ ದೇಶ ಎಂಬ ಹೆಗ್ಗಳಿಕೆ ಭಾರತದ ಪಾಲಾಗಿದೆ’ ಎಂದು ಚಂದ್ರಯಾನ-3 ಪ್ರಾಜೆಕ್ಟ್​ ನಿರ್ದೇಶಕ ವೀರ ಮುತ್ತುವೇಲ್​ ಹೇಳಿದರು.

ಪ್ರತಿಯೊಬ್ಬ ಭಾರತೀಯನಿಗೂ ಇದು ಹೆಮ್ಮೆಯ ಕ್ಷಣ : ಸಿಎಂ ಸಿದ್ದರಾಮಯ್ಯ

ಪ್ರತಿಯೊಬ್ಬ ಭಾರತೀಯನಿಗೂ ಇದು ಹೆಮ್ಮೆಯ ಕ್ಷಣ : ಸಿಎಂ ಸಿದ್ದರಾಮಯ್ಯ

ಇಸ್ರೋ ಸಾಧನೆ ಪ್ರತಿಯೊಬ್ಬ ಭಾರತೀಯನಿಗೂ ಇದು ಹೆಮ್ಮೆಯ ಕ್ಷಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

‘ದೇಶದ ವಿಜ್ಞಾನಿಗಳ ನಿರಂತರ ಪ್ರಯತ್ನ ಮತ್ತು ದಶಕಗಳ ಪರಿಶ್ರಮ ಇಂದು ಫಲನೀಡಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-3 ರ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಇಳಿಯುವ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸಾಧನೆಯನ್ನು ಜಗತ್ತು ಬೆರಗುಗಣ್ಣಿನಿಂದ ನೋಡುವಂತೆ ಮಾಡಿದೆ. ಪ್ರತಿಯೊಬ್ಬ ಭಾರತೀಯನಿಗೂ ಇದು ಹೆಮ್ಮೆಯ ಕ್ಷಣ. ಇಂಥದ್ದೊಂದು ಅಸಾಧಾರಣ ಸಾಧನೆಗೈದ ನಾಡಿನ ವಿಜ್ಞಾನಿಗಳಿಗೆ ಅಭಿನಂದನೆಗಳು’ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಭಾರತದ ಸಾಧನೆಯನ್ನು ನೋಡಿ ಬೆರಗಾದ ವಿಶ್ವ!
    ಇಸ್ರೋದ ವಿಜ್ಞಾನಿಗಳಿಗೆ ಅಭಿನಂದನೆಗಳು. 🙏

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X