ಹಮಾಸ್ ಹಾಗೂ ಇಸ್ರೇಲ್ ನಡುವಿನ ಸಂಘರ್ಷದಲ್ಲಿ ಗಾಝಾದ ಮೇಲೆ ನಿರಂತರವಾಗಿ ಬಾಂಬ್ ಸುರಿದು ನಾಗರಿಕರನ್ನು ಹತ್ಯೆಗೈಯ್ಯುತ್ತಿರುವ ಇಸ್ರೇಲ್ ನಡೆಯನ್ನು ಖಂಡಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ.
ಗಾಝಾದ ಜನರೊಂದಿಗೆ ಒಗ್ಗಟ್ಟಿನ ಪ್ರದರ್ಶನದಲ್ಲಿ, ಹಮಾಸ್ ವಿರುದ್ಧ ಇಸ್ರೇಲ್ ಕ್ರಮಗಳನ್ನು ಖಂಡಿಸಲು ಪ್ರತಿಭಟನಾಕಾರರು ದೆಹಲಿಯ ಐತಿಹಾಸಿಕ ಜಂತರ್ ಮಂತರ್‌ನಲ್ಲಿ ಜಮಾಯಿಸಿದ್ದರು.
ಪ್ರತಿಭಟನೆಯಲ್ಲಿದ್ದ ಕನಿಷ್ಠ 50 ಮಂದಿ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಎಡಪಂಥೀಯ ಅಖಿಲ ಭಾರತ ವಿದ್ಯಾರ್ಥಿಗಳ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆಯನ್ನು ಆಯೋಜಿಸಿದ್ದು, ನಡೆಯುತ್ತಿರುವ ಸಂಘರ್ಷದ ಬಗ್ಗೆ ತಮ್ಮ ಕಳವಳ ವ್ಯಕ್ತಪಡಿಸಲು ಒಗ್ಗೂಡಿ ಪ್ರತಿಭಟನೆ ನಡೆಸುತ್ತಿದ್ದರು.
Pro-Palestine protest disallowed even at Jantar Mantar. We have been detained. Delhi Police is taking us to an unknown location. Zionist-Hindutva bonhomie down down. We stand with #Palestine. ✊ pic.twitter.com/NK44qqYlIZ
— Akash | आकाश। আকাশ। (@akash_awaam) October 16, 2023
ಪ್ರತಿಭಟನೆಯಲ್ಲಿ ಇಸ್ರೇಲ್‌ಗೆ ಬೆಂಬಲ ನೀಡುತ್ತಿರುವ ಅಮೆರಿಕದ ಅಧ್ಯಕ್ಷ ಜೋ ಬೈಡನ್ ವಿರುದ್ಧವೂ ಘೋಷಣೆ ಕೂಗಿದ ಪ್ರತಿಭಟನಾಕಾರರು, ಯುದ್ಧ ನಿಲ್ಲಿಸಬೇಕು, ಇಸ್ರೇಲ್ ವಿರುದ್ಧ ವಿಶ್ವಸಂಸ್ಥೆಯು ಯುದ್ಧಾಪರಾಧದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ್ದಕ್ಕಾಗಿ ಬಂಧಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.