ಸುರಂಗ ಘಟನೆ | ಕಾರ್ಮಿಕನ ಕುಟುಂಬದ ದುಸ್ಥಿತಿ ಬಗ್ಗೆ ವರದಿ ಮಾಡಿದ ಪತ್ರಕರ್ತರ ವಿರುದ್ಧ ಎಫ್ಐಆರ್!

Date:

Advertisements

ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ ಜಾರ್ಖಂಡ್‌ನ ಕಾರ್ಮಿಕನೋರ್ವನ ಕುಟುಂಬವೊಂದರ ದುಸ್ಥಿತಿಯನ್ನು ವರದಿ ಮಾಡಿದ್ದ ಇಬ್ಬರು ಪತ್ರಕರ್ತರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.

ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಜಾರ್ಖಂಡ್‌ನ ಸ್ಥಳೀಯ ಇಬ್ಬರು ಪತ್ರಕರ್ತರ ವಿರುದ್ಧ ಖುಂತಿ ಜಿಲ್ಲೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಬ್ಲಾಕ್ ಡೆವಲಪ್‌ಮೆಂಟ್ ಅಧಿಕಾರಿ ಸ್ಮಿತಾ ನಾಗೇಸಿಯಾ ಮತ್ತು ವೃತ್ತ ಅಧಿಕಾರಿ ವಂದನಾ ಭಾರತಿ ಅವರ ದೂರಿನ ಆಧಾರದ ಮೇಲೆ ಕರ್ರಾ ಪೊಲೀಸ್ ಠಾಣೆಯಲ್ಲಿ ಪತ್ರಕರ್ತ ಸೋನು ಅನ್ಸಾರಿ ಮತ್ತು ಯೂಟ್ಯೂಬರ್ ಗುಂಜನ್ ಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತೋರ್ಪಾ ಉಪವಿಭಾಗೀಯ ಪೊಲೀಸ್ ಅಧಿಕಾರಿ ಓಂಪ್ರಕಾಶ್ ತಿವಾರಿ ಮಾಹಿತಿ ನೀಡಿದ್ದಾರೆ.

Advertisements

‘ಅವರು ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ್ದಾರೆ ಮತ್ತು ಅಧಿಕಾರಿಗಳೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಅಧಿಕಾರಿಗಳು ಕಾರ್ಮಿಕನ ಮನೆಗೆ ಭೇಟಿ ನೀಡಿದಾಗ, ಇಬ್ಬರು ವರದಿಗಾರರು ಆಗಲೇ ಅಲ್ಲಿದ್ದರು. ಅವರು ಸತ್ಯವನ್ನು ಪರಿಶೀಲಿಸದೆ ರೆಕಾರ್ಡಿಂಗ್ ಪ್ರಾರಂಭಿಸಿದರು. ಸತ್ಯಾಸತ್ಯತೆಯನ್ನು ಪರಿಶೀಲಿಸುವಂತೆ ಕೇಳಿದಾಗ ಅವರು ನಮ್ಮ ಕೆಲಸಕ್ಕೆ ಅಡ್ಡಿಪಡಿಸಿ ನಮ್ಮೊಂದಿಗೆ ಅನುಚಿತವಾಗಿ ವರ್ತಿಸಿದರು’ ಎಂದು ನ.30ರಂದು ದಾಖಲಿಸಿದ ಪೊಲೀಸ್ ದೂರಿನಲ್ಲಿ ಆರೋಪಿಸಲಾಗಿದೆ.

SILKYARA

ಸಿಆರ್‌ಪಿಸಿಯ ನಿಬಂಧನೆಗಳ ಪ್ರಕಾರ ಇಬ್ಬರಿಗೂ ನೋಟಿಸ್ ನೀಡಲಾಗುವುದು ಮತ್ತು ಅವರ ಹೇಳಿಕೆಗಳನ್ನು ದಾಖಲಿಸಲಾಗುತ್ತಿದೆ. ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿವಾರಿ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಸುರಂಗದಲ್ಲಿ ಸಿಕ್ಕಿಬಿದ್ದ ಕಾರ್ಮಿಕರು ಬದುಕಿದ್ದೇವೆಂದು ತಿಳಿಸಲು ಕಳಿಸಿದ್ದು ಈ ‘ಜಲಸಂದೇಶ’!

ಅನ್ಸಾರಿ ಮತ್ತು ಕುಮಾರ್ ತಮ್ಮ ವರದಿಗಳ ಮೂಲಕ ವಿಜಯ್ ಹೊರೋ ಕುಟುಂಬದ ದುಸ್ಥಿತಿಯನ್ನು ಎತ್ತಿ ತೋರಿಸಿದ್ದರು. ನ.12ರಂದು ಸುರಂಗ ಕುಸಿತದ ಎರಡು ವಾರಗಳ ನಂತರ ಆಡಳಿತವು ಬಡ ಕುಟುಂಬಕ್ಕೆ ಪಡಿತರವನ್ನು ಒದಗಿಸಿಲ್ಲ ಎಂದು ಅವರು ತಮ್ಮ ವರದಿಗಳಲ್ಲಿ ಆರೋಪಿಸಿದ್ದರು.

jharkhand cm 1
ಸಿಲ್ಕ್ಯಾರಾ ಸುರಂಗದಿಂದ ರಕ್ಷಿಸಲ್ಪಟ್ಟ ಕಾರ್ಮಿಕರೊಮದಿಗೆ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್

ಎಫ್‌ಐಆರ್ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ಪತ್ರಕರ್ತ ಗುಂಜನ್‌, ‘ವಿಜಯ್‌ ಕುಟುಂಬದ ಪರಿಸ್ಥಿತಿಯನ್ನು ಹೊರಜಗತ್ತಿಗೆ ತಿಳಿಸಲು ವರದಿ ಮಾಡಿದ್ದೇವೆ. ಸುರಂಗ ಕುಸಿತವಾದ ಎರಡು ವಾರಗಳ ನಂತರ ಬಡ ಕುಟುಂಬಕ್ಕೆ ಅಧಿಕಾರಿಗಳು ಪಡಿತರ ಒದಗಿಸಿದ್ದರು’ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಚಾರ್‌ಧಾಮ್ ಸರ್ವಋತು ರಸ್ತೆ ಯೋಜನೆಯಡಿ ಉತ್ತರಾಖಂಡದ ಉತ್ತರಕಾಶಿಯಲ್ಲಿ ನಿರ್ಮಿಸುತ್ತಿದ್ದ ಸುರಂಗದ ಕೆಳಭಾಗಗಳು ನ.12ರಂದು ಕುಸಿದು 41 ಕಾರ್ಮಿಕರು ಸುರಂಗದೊಳಗೆ ಸಿಲುಕಿದ್ದರು. ಈ ಘಟನೆ ನಡೆದ 17 ದಿನಗಳ ನಂತರ ನ.28ರಂದು ಕಾರ್ಮಿಕರನ್ನು ರಕ್ಷಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X