ಜಾಮೀನು ಕೊಡಲು ಲಂಚ ಪಡೆದ ಆರೋಪ; ನ್ಯಾಯಾಧೀಶರ ಬಂಧನ

Date:

ವಂಚನೆ ಪ್ರಕರಣದಲ್ಲಿ ಜಾಮೀನು ನೀಡಲು 5 ಲಕ್ಷ ರೂ.ಗೆ ಬೇಡಿಕೆಯಿಟ್ಟ ಆರೋಪದ ಮೇಲೆ ಮಹಾರಾಷ್ಟ್ರದ ಸತಾರಾ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರನ್ನು ಬಂಧಿಸಲಾಗಿದೆ. ನ್ಯಾಯಾಧೀಶ ಧನಂಜಯ್ ಮತ್ತು ಇತರ ಮೂವರು ಆರೋಪಿಗಳನ್ನು ಮಹಾರಾಷ್ಟ್ರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಂಧಿಸಿದೆ.

- Advertisement -

ಉದ್ಯೋಗ ಕೊಡಿಸುವುದಾಗಿ 41 ಲಕ್ಷ ರೂ. ಹಣ ವಸೋಲಿ ಮಾಡಿ ವಂಚಿಸಿದ್ದ ಆರೋಪಿಗೆ ಜಾಮೀನು ಕೊಡಲು ಆರೋಪಿಯ ಮಗಳ ಬಳಿ ನ್ಯಾಯಾಧೀಕರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. “ಉದ್ಯೋಗದ ಆಮಿಷವೊಡ್ಡಿ ವಂಚನೆ ಪ್ರಕರಣದಲ್ಲಿ ಆರೋಪಿಗೆ ಜಾಮೀನು ನೀಡಲು ಆತನ ಮಗಳು, 24 ವರ್ಷದ ಯುವತಿ ಬಳಿ 5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ನ್ಯಾಯಾಧೀಶರು ಮತ್ತು ಇತರ ಮೂವರು ಲಂಚಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಯುವತಿ ದೂರು ದಖಲಿಸಿದ್ದರು” ಎಂದು ಪುಣೆ ಉಪ ಪೊಲೀಸ್ ವರಿಷ್ಠಾಧಿಕಾರಿ ದಯಾನಂದ ಗಾವಡೆ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಯುವತಿ ಡಿಸೆಂಬರ್ 2ರಂದು ಎಸಿಬಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಗ್ಗೆ ಡಿಸೆಂಬರ್ 3ರಿಂದ 9ರವೆಗೆ ಪರಿಶೀಲಿನೆ ನಡೆಸುತ್ತಿದ್ದೆವು. ಡಿಸೆಂಬರ್ 9ರಂದು ಸತಾರಾ ನ್ಯಾಯಾಲಯದ ಸಂಕೀರ್ಣದ ಹೊರಗೆ ಯುವತಿಯನ್ನು ನ್ಯಾಯಾಧೀಶರು ಭೇಟಿಯಾಗಿದ್ದರು. ಕಾರಿನಲ್ಲಿ ಕುಳಿತು ಮಧ್ಯವರ್ತಿಗಳೊಂದಿಗೆ ಲಂಚದ ಒಪ್ಪಂದದ ಬಗ್ಗೆ ಚರ್ಚಿಸಿದ್ದರು” ಎಂದು ಎಸಿಬಿ ದಾಖಲಿಸಿರುವ ಎಫ್‌ಐಆರ್‌ನಲ್ಲಿ ವಿವರಿಸಲಾಗಿದೆ.

“ಒಪ್ಪಂದದ ಬಳಿಕ ಇಬ್ಬರು ಮಧ್ಯವರ್ತಿಗಳು ಹೋಟೆಲ್‌ನಲ್ಲಿ ಲಂಚ ಸ್ವೀಕರಿಸಲು ಯೋಜಿಸಿದ್ದರು. ಅಲ್ಲಿ, ನ್ಯಾಯಾಧೀಶರ ಪರವಿದ್ದ ಮಧ್ಯವರ್ತಿಗಳು ಹಣವನ್ನು ಕೊಡುವಂತೆ ಯುವತಿಯ ಬಳಿ ಕೇಳಿದರು. ಆ ವೇಳೆ, ಯುವತಿಯೊಂದಿಗೆ ಎಸಿಬಿ ಸಾಕ್ಷಿಯೊಬ್ಬರು ಜೊತೆಗಿದ್ದರು” ಎಂದು ಎಸಿಬಿ ವಿವರಿಸಿದೆ.

ಆರೋಪಿ ನ್ಯಾಯಾಧೀಶರು ಮತ್ತು ಇತರ ಮೂವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7, 7-ಎ, 12 ಹಾಗೂ ಐಪಿಸಿ ಸೆಕ್ಷನ್ 3(5) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ರದ್ದತಿಗೆ ಅ.2ರಂದು ಬೃಹತ್ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸುವುದು, ಪಟ್ಟಿಯಿಂದ...

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ...

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...

ಉಡುಪಿ | ಶಾರ್ಜಾದಲ್ಲಿ ಹತ್ಯೆಗೀಡಾದ ಅಲ್ವಿನ್ ಪ್ರಕಾಶ್ ಕುಂದರ್‌ಗೆ ಹುಟ್ಟೂರಿನಲ್ಲಿ ಅಂತಿಮ ನಮನ

ಶಾರ್ಜಾದಲ್ಲಿ ಕಳೆದ ಜುಲೈನಲ್ಲಿ ನಿಗೂಢವಾಗಿ ಹತ್ಯೆಗೀಡಾದ ಕುಂದಾಪುರ ಪುರಸಭೆ ವ್ಯಾಪ್ತಿಯ ಹೊನ್ನನಕೇರಿ...