ಕಲಬುರಗಿ | ₹3 ಸಾವಿರ ಲಂಚ ಸ್ವೀಕಾರ: ಪೊಲೀಸ್ ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ

Date:

ಜಾಮೀನು ಪಡೆದ ವ್ಯಕ್ತಿಯ ಹಾಜರಾತಿ ದಾಖಲಿಸುವ ವಿಚಾರದಲ್ಲಿ ₹3 ಸಾವಿರ ಲಂಚ ಸ್ವೀಕರಿಸಿದ ಆರೋಪದ ಮೇಲೆ ಚಿಂಚೋಳಿ ತಾಲೂಕಿನ ಸುಲೇಪೇಟ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಅನಿಲಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಬೀಳಿಸಿದ್ದಾರೆ.

- Advertisement -

ಚಿಂಚೋಳಿ ತಾಲೂಕಿನ ಸುಲೇಪೇಟ ಪೊಲೀಸ್ ಠಾಣೆ ವ್ಯಾಪ್ತಿಯ ಗಡಿಕೇಶ್ವರ ಗ್ರಾಮದ ಚಂದ್ರಕಾಂತ ರಂಗನೂರು ನೀಡಿದ ದೂರಿನ ಆಧಾರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ದೂರುದಾರ ಚಂದ್ರಕಾಂತ ರಂಗನೂರು ಅವರು ನ್ಯಾಯಾಲಯದಿಂದ ಜಾಮೀನು ಪಡೆದಿದ್ದು, ಪ್ರತಿ ತಿಂಗಳು ಸುಲೇಪೇಟ ಪೊಲೀಸ್ ಠಾಣೆಯ ತನಿಖಾಧಿಕಾರಿ ಮುಂದೆ ಹಾಜರಾಗಿ ಸಹಿ ಮಾಡುವಂತೆ ನ್ಯಾಯಾಲಯ ಸೂಚಿಸಿತ್ತು ಎನ್ನಲಾಗಿದೆ. ಆದರೆ, ಠಾಣೆಯ ರೈಟರ್ ಆಗಿದ್ದ ಕಾನ್‌ಸ್ಟೆಬಲ್ ಅನಿಲ್ ಕುಮಾರ್ ಅವರು ಪ್ರತಿ ಭಾನುವಾರ ಠಾಣೆಗೆ ಬಂದು ಹಾಜರಾತಿ ದಾಖಲಿಸಿಕೊಳ್ಳುವಂತೆ ಒತ್ತಾಯಿಸಿದ್ದರು. ಅಲ್ಲದೆ, ಠಾಣೆಗೆ ಹಾಜರಾಗದಿದ್ದರೆ ಜಾಮೀನು ರದ್ದುಪಡಿಸಿ ಮತ್ತೆ ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ : ಕಲಬುರಗಿ | SIR ಎಡವಟ್ಟು: ಬದುಕಿರುವವರಿಗೂ ಮತದಾರರ ಪಟ್ಟಿಯಲ್ಲಿ ‘Death’ ಮುದ್ರೆ?

ಹಾಜರಾತಿ ದಾಖಲಿಸುವ ವಿಚಾರದಲ್ಲಿ ₹3 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು, ದೂರುದಾರರಿಂದ ಲಂಚದ ಹಣ ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಕಾನ್‌ಸ್ಟೆಬಲ್ ಅನಿಲ್ ಕುಮಾರ್ ಅವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಲೇಖಕರಿಂದ ಗಟ್ಟಿ ಸಾಹಿತ್ಯ ಹೊರಬರಲಿ: ವಿಜಯಕುಮಾರ ಸೋನಾರೆ

ಪುಸ್ತಕಗಳ ನಿರಂತರ ಓದಿನಿಂದ ಬೌದ್ಧಿಕ ಪ್ರಬುದ್ಧತೆ ಬೆಳೆಯುತ್ತದೆ. ಬೀದರ್ ಜಿಲ್ಲೆಯಲ್ಲಿರುವ ಪ್ರತಿಭಾನ್ವಿತ...

ಪಾಕಿಸ್ತಾನಿ ಜಾಲದ ಹನಿಟ್ರ್ಯಾಪ್‌ಗೆ ಬಿದ್ದ ಭಾರತೀಯ ನೌಕಾಪಡೆ ಸೈನಿಕನಿಂದ ಗೌಪ್ಯ ಮಾಹಿತಿ ಸೋರಿಕೆ; ಬಂಧನ

ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆಯ ಗುಪ್ತ ಮಾಹಿತಿಗಳನ್ನು ಸೋರಿಕೆ ಮಾಡುತ್ತಿದ್ದ ಭಾರತೀಯ ನೌಕಾಪಡೆಯ...

ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...