ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯ ಪಾಕೀಜಾ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದ ಮೇಲೆ 19 ವರ್ಷದ ಯುವಕನನ್ನು ಪೊಲೀಸರು ವಶಕ್ಕೆ ಪಡೆದು, ವೈದ್ಯಕೀಯ ಪರೀಕ್ಷೆಯ ವರದಿ ಆಧರಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.
ಸೋನಿಯಾ ಕಾಲೊನಿಯ ನಿವಾಸಿ ಮಹ್ಮದ್ ಸರ್ಫರಾಜ್ (19) ಬಂಧಿತ ಆರೋಪಿ. ಅಕ್ಟೋಬರ್ 21ರಂದು ಪೊಲೀಸರು ಕಾರ್ಯಾಚರಣೆ ನಡೆಸಿ ಆತನನ್ನು ವಶಕ್ಕೆ ಪಡೆದಿದ್ದರು. ಬಳಿಕ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಐಪಿಎಸ್ ಅವರ ನಿರ್ದೇಶನದಂತೆ, ಉಪ ಪೊಲೀಸ್ ಆಯುಕ್ತರಾದ ಪ್ರವೀಣ್ ಎಚ್. ನಾಯಕ್ ಮತ್ತು ಶಾಲೂ ಐಪಿಎಸ್ ಹಾಗೂ ಉತ್ತರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶಿವನಗೌಡ ಪಾಟೀಲ ಅವರ ಮಾರ್ಗದರ್ಶನದಲ್ಲಿ ರೋಜಾ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ದಿಲೀಪಕುಮಾರ ಸಾಗರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತು. ಸಿಬ್ಬಂದಿ ಯಲ್ಲಪ್ಪ ಸಿ. ಅವರೂ ತಂಡದಲ್ಲಿದ್ದರು.
ಇದನ್ನು ಓದಿದ್ದೀರಾ? ಕಲಬುರಗಿ | 20 ಪ್ರಕರಣಗಳ ಆರೋಪಿಗೆ ಗುಂಡಾ ಕಾಯ್ದೆ ಅಡಿ ಬಂಧನ
ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.





