ಕಲಬುರಗಿ | ಎಸ್‌ಐಆರ್ ರದ್ದತಿಗೆ ಅ.2ರಂದು ಬೃಹತ್ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

Date:

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸುವುದು, ಪಟ್ಟಿಯಿಂದ ಹೊರಗುಳಿದಿರುವ ಅರ್ಹ ಮತದಾರರ ಹೆಸರುಗಳನ್ನು ಮರುಸೇರ್ಪಡೆಗೊಳಿಸುವುದು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 2ರಂದು ನಗರದಲ್ಲಿ ಪ್ರತಿಭಟನೆ ನಡೆಸಲು ನಾಗರಿಕರ ಹಕ್ಕುಗಳ ರಕ್ಷಣಾ ಆಂದೋಲನ ಕರೆ ನೀಡಿದೆ.

- Advertisement -

ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಂದೋಲನದ ಸಂಚಾಲಕ ಡಾ. ಮಹೇಶಕುಮಾರ ರಾಠೋಡ, ‘ಎಸ್‌ಐಆರ್ ಪ್ರಕ್ರಿಯೆಯಿಂದ ಯಾವುದೇ ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳಬಾರದು. ತಪ್ಪಾಗಿ ಮತದಾರರ ಪಟ್ಟಿಯಿಂದ ಕೈಬಿಡಲಾದವರ ಹೆಸರುಗಳನ್ನು ತಕ್ಷಣ ಮರು ಸೇರ್ಪಡೆಗೊಳಿಸಬೇಕು’ ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಸಾರ್ವಜನಿಕರಲ್ಲಿ ಮೂಡಿರುವ ಅನುಮಾನಗಳಿಗೆ ಸ್ಪಷ್ಟನೆ ನೀಡಬೇಕು. ಆಯೋಗದ ಸ್ವಾಯತ್ತತೆ ಹಾಗೂ ಪ್ರಜಾಸತ್ತಾತ್ಮಕ ಕಾರ್ಯನಿರ್ವಹಣೆಯನ್ನು ಬಲಪಡಿಸುವ ಜೊತೆಗೆ ಚುನಾವಣಾ ಆಯುಕ್ತರ ನೇಮಕಾತಿ ಪ್ರಕ್ರಿಯೆಯಲ್ಲಿ ಅಗತ್ಯ ಬದಲಾವಣೆ ತರಬೇಕು ಎಂದು ಆಗ್ರಹಿಸಿದರು.

ಚುನಾವಣಾ ಆಯೋಗದ ಮೂವರು ಆಯುಕ್ತರ ಪೈಕಿ ಇಬ್ಬರು ಕೆಲವು ನಿರ್ಧಾರಗಳಿಗೆ ಆಕ್ಷೇಪ ವ್ಯಕ್ತಪಡಿಸಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿರುವುದನ್ನು ಉಲ್ಲೇಖಿಸಿದ ಅವರು, ಈ ಬೆಳವಣಿಗೆ ಆಯೋಗದ ಆಂತರಿಕ ಕಾರ್ಯವೈಖರಿ ಮತ್ತು ನಿರ್ಧಾರ ಪ್ರಕ್ರಿಯೆಯ ಪಾರದರ್ಶಕತೆ ಕುರಿತು ಚರ್ಚೆಗೆ ಕಾರಣವಾಗಿದೆ ಎಂದರು.

‘ಅ.2ರಂದು ಬೆಳಿಗ್ಗೆ 11.30ಕ್ಕೆ ಜಗತ್ ವೃತ್ತದಲ್ಲಿ ಧರಣಿ ಸತ್ಯಾಗ್ರಹ ನಡೆಯಲಿದೆ. ಬಳಿಕ ಮಧ್ಯಾಹ್ನ 2.30ಕ್ಕೆ ಸೂಪರ್ ಮಾರ್ಕೆಟ್‌ನಿಂದ ಜಗತ್ ವೃತ್ತದವರೆಗೆ ಮೆರವಣಿಗೆ ನಡೆಸಿ, ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುವುದು’ ಎಂದು ಅವರು ತಿಳಿಸಿದರು.

ಧರಣಿ ಹಾಗೂ ಮೆರವಣಿಗೆಯಲ್ಲಿ ಯುವಕರು, ಪ್ರಗತಿಪರ ಚಿಂತಕರು, ವಿಚಾರವಂತರು, ವಿದ್ಯಾರ್ಥಿ-ಯುವಜನರು, ಮಹಿಳೆಯರು ಹಾಗೂ ಎಸ್‌ಐಆರ್ ಪ್ರಕ್ರಿಯೆಯಿಂದ ಮತದಾರರ ಪಟ್ಟಿಯಿಂದ ಹೊರಗುಳಿದಿರುವವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಂದೋಲನದ ಮುಖಂಡರು ಮನವಿ ಮಾಡಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಶವ ಪತ್ತೆ; ಕೊಲೆ ಶಂಕೆ

ಸುದ್ದಿಗೋಷ್ಠಿಯಲ್ಲಿ ಅಫಝಲ್ ಮಹಿಮೂದ್, ಸಲೀಂ ಅಹಮದ್ ಚಿತಾಪೂರಿ, ಮಹೇಶ ಎಸ್.ಬಿ., ಶರಣಬಸಪ್ಪ ಮಮಶೆಟ್ಟಿ, ಎಸ್.ಎಂ. ಶರ್ಮಾ, ಮುಬೀನ್ ಅಹಮದ್, ಸಂಧ್ಯಾರಾಜ್ ಸ್ಯಾಮುಯೆಲ್ ಸೇರಿದಂತೆ ಆಂದೋಲನದ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬಣಕಲ್; ಸ.ಮಾ.ಹಿ ಪ್ರಾ. ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಸರ್ಕಾರಿ ಮಾದರಿ ಹಿರಿಯ...

ಬರಕ್ಕೆ ಮಾನದಂಡ ಮುಖ್ಯವೋ, ಬದುಕು ಮುಖ್ಯವೋ?: ಸಿ. ಬೈರೇಗೌಡರ ಪ್ರಶ್ನೆ ಇಂದಿಗೂ ಪ್ರಸ್ತುತ

ಬರ ಮೊದಲು ರೈತನ ಹೊಲದಲ್ಲಿ ಕಾಣಿಸುತ್ತದೆ. ನಂತರ ಅವನ ಸಾಲ, ಮನೆಯ...

ಚಿಕ್ಕಮಗಳೂರು | ಕಸ್ತೂರಿ ರಂಗನ್ ವಿರೋಧಿಸಿ ನಾಳೆ ಬಾಳೆಹೊನ್ನೂರು ಬಂದ್ 

ಕಸ್ತೂರಿ ರಂಗನ್ ವರದಿ ಜಾರಿಯಿಂದ ಮಲೆನಾಡು ಭಾಗದಲ್ಲಿ ಸಮಸ್ಯೆ ಹಿನ್ನಲೆಯಲ್ಲಿ ಮಲೆನಾಡು...

ಗುಜರಾತ್‌ | ಕಲಬೆರಕೆ ಪಶು ಆಹಾರ ಮಾರಿದರೆ ಜೈಲು; ಕೋಳಿ, ಜಾನುವಾರು ಆಹಾರ ಉತ್ಪಾದನೆಗೆ ಲೈಸೆನ್ಸ್‌ ಕಡ್ಡಾಯ

ಜಾನುವಾರು ಮತ್ತು ಕೋಳಿಗಳಿಗೆ ನೀಡುವ ಆಹಾರದ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ...