ಕಲಬುರಗಿ | ಸಿಇಸಿ ಜ್ಞಾನೇಶಕುಮಾರ ವಜಾಗೆ ಆಗ್ರಹಿಸಿ ಪ್ರತಿಭಟನೆ

Date:

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್‌ ಅವರನ್ನು ವಜಾ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.

- Advertisement -

ನಗರದ ಜಗತ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಸಮಿತಿಯ ಪ್ರಮುಖರು ʼಎಸ್‌ಐಆರ್ʼ ರದ್ದತಿಗೆ ಆಗ್ರಹಿಸಿದರು. ಬಳಿಕ ರಾಷ್ಟ್ರಪತಿಗಳ ಹೆಸರಿಗೆ ಬರೆದ ಮನವಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಕಾನೂನು ಉಲ್ಲಂಘನೆ ಮಾಡಲಾಗಿದ್ದು, ಇದಕ್ಕೆ ಕಾರಣರಾದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರನ್ನು ವಜಾಗೊಳಿಸಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು” ಎಂದು ಒತ್ತಾಯಿಸಿದರು .

ಚುನಾವಣಾ ಆಯೋಗವು ಕೈಗೊಂಡಿರುವ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಹಲವು ಲೋಪದೋಷಗಳಿದ್ದು, ಮತದಾರರ ಹಕ್ಕುಗಳಿಗೆ ಧಕ್ಕೆಯಾಗುವ ಆತಂಕ ಎದುರಾಗಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ಅವರು ಇತರ ಇಬ್ಬರು ಚುನಾವಣಾ ಆಯುಕ್ತರ ಅರಿವು ಮತ್ತು ಸಮ್ಮತಿಯಿಲ್ಲದೆ ಏಕಪಕ್ಷೀಯವಾಗಿ ನಿರ್ಧಾರಗಳನ್ನು ಕೈಗೊಂಡಿದ್ದಾರೆ ಎಂಬ ಆರೋಪಗಳು ಮಾಧ್ಯಮ ವರದಿಗಳ ಮೂಲಕ ಬಹಿರಂಗವಾಗಿವೆ” ಸಮಿತಿ ಆರೋಪಿಸಿದೆ.

ದೇಶದಾದ್ಯಂತ 13 ಕೋಟಿಗೂ ಹೆಚ್ಚು ಮತದಾರರ ಹಕ್ಕುಗಳಿಗೆ ಧಕ್ಕೆಯಾಗಿದೆ. ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಲೋಪದೋಷಗಳ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ಹಿನ್ನೆಲೆಯಲ್ಲಿ ಸಮಗ್ರ ಪರಿಶೀಲನೆ ನಡೆಸಿ, ಮತದಾರರ ಹಕ್ಕುಗಳನ್ನು ರಕ್ಷಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ಅವರನ್ನು ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಎಸ್‌ಐಆರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು. ಮುಂಬರುವ ಚುನಾವಣೆಗಳನ್ನು ತಡೆಹಿಡಿಯಬೇಕು. 2023ರ ಚುನಾವಣಾ ಆಯುಕ್ತರ ನೇಮಕಾತಿ ಕಾಯ್ದೆಯನ್ನು ರದ್ದುಗೊಳಿಸಿ, ಸ್ವತಂತ್ರ ಮತ್ತು ವಿಶ್ವಾಸಾರ್ಹ ಆಯ್ಕೆ ಪ್ರಕ್ರಿಯೆ ರೂಪಿಸಬೇಕು ಎಂದು ಸಮಿತಿ ಒತ್ತಾಯಿಸಿದೆ.

ಇದನ್ನೂ ಓದಿ : ₹3 ಲಕ್ಷ ಲಂಚ: ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಚಾಲಕ ಬಂಧನ

ಪ್ರತಿಭಟನೆಯಲ್ಲಿ ಸಂಘಟನೆ ರಾಜ್ಯ ಸಂಚಾಲಕ ಡಿ.ಜಿ.ಸಾಗರ್‌ ಮುಖಂಡರಾದ ಸುರೇಶ ಹಾದಿಮನಿ, ಉಮೇಶ ನರೋಣಾ, ರೇವಣಸಿದ್ಧ ಜಾಲಿ, ಕೃಷ್ಣಪ್ಪ ಕರಣಿಕ, ಸುಭಾಷ ಡಾಂಗೆ, ದೇವೆಂದ್ರ ದೊಡ್ಡಮನಿ, ಮೈಲಾರಿ ದೊಡಮನಿ, ರಮೇಶ ಪಾಳಾ ಸೇರಿದಂತೆ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಅಂಕಿತಾ ಹತ್ಯೆ ಶಂಕಿತರಿಗೆ ಸಾಂವಿಧಾನಿಕ ಹುದ್ದೆ ಸರಿಯೇ?

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿದ್ದ ವಿಐಪಿ ದುಶ್ಯಂತ್‌ ಅವರ ಮೇಲಿನ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...