ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

Date:

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಬೆಂಕಿ ಅವಘಡವು ದೊಡ್ಡ ಪ್ರಮಾಣದ ಆರ್ಥಿಕ ನಷ್ಟಕ್ಕೆ ಕಾರಣವಾಗಿದೆ. ಶುಕ್ರವಾರ ಬೆಳಿಗ್ಗೆ ಸುಮಾರು 5 ಗಂಟೆಯ ವೇಳೆಗೆ ಸಂಭವಿಸಿದ ಈ ದುರಂತದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಗ್ರಿಗಳು ಸುಟ್ಟು ಕರಕಲಾಗಿವೆ.

- Advertisement -

ರಾಜಕುಮಾರ್ ನಾಮದೇವ ದೊಡ್ಡಮನಿ ಭೋಸಗಾ ಅವರಿಗೆ ಸೇರಿದ ಈ ಕೆಫೆಯನ್ನು ಇತ್ತೀಚೆಗಷ್ಟೇ ಆರಂಭಿಸಲಾಗಿತ್ತು. ಸುಮಾರು 18 ಲಕ್ಷ ರೂಪಾಯಿ ಬಂಡವಾಳ ಹೂಡಿ, ಆಧುನಿಕ ಸೌಲಭ್ಯಗಳೊಂದಿಗೆ ಕೆಫೆ ಆರಂಭಿಸಿದ್ದ ಅವರು, ಉತ್ತಮ ವ್ಯವಹಾರದ ನಿರೀಕ್ಷೆಯಲ್ಲಿದ್ದರು. ಆದರೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಬೆಂಕಿಯಿಂದ ಅಂದಾಜು 7 ರಿಂದ 8 ಲಕ್ಷ ರೂಪಾಯಿ ಮೌಲ್ಯದ ಅಡುಗೆ ಉಪಕರಣಗಳು, ಫರ್ನಿಚರ್, ವಿದ್ಯುತ್ ಸಾಧನಗಳು ಸೇರಿದಂತೆ ಅನೇಕ ಸಾಮಗ್ರಿಗಳು ಸಂಪೂರ್ಣವಾಗಿ ಹಾನಿಗೀಡಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಬದುಕು ಕಟ್ಟಿಕೊಳ್ಳುವ ಕನಸು ಕ್ಷಣಾರ್ಧದಲ್ಲಿ ಭಸ್ಮ”

ಈ ದಿನ.ಕಾಮ್‌ ಜತೆ ಮಾತನಾಡಿದ ರಾಜಕುಮಾರ್ ತಮ್ಮ ನೋವನ್ನು ಹಂಚಿಕೊಂಡರು. “ನಾನು ಕಡು ಬಡತನದ ಕುಟುಂಬದಲ್ಲಿ ಜನಿಸಿದ್ದೇನೆ. ಪದವಿ ಪಡೆದಿದ್ದರೂ ಉದ್ಯೋಗ ಸಿಗದೆ ಸಂಕಷ್ಟ ಅನುಭವಿಸುತ್ತಿದ್ದೆ. ಜೀವನದಲ್ಲಿ ಏನಾದರೂ ಸಾಧಿಸಬೇಕು ಎಂಬ ಉದ್ದೇಶದಿಂದ ಫೈನಾನ್ಸ್ ಸಂಸ್ಥೆಗಳು ಹಾಗೂ ಸಂಘ-ಸಂಸ್ಥೆಗಳಿಂದ ಸಾಲ ಪಡೆದು ಸ್ವಂತ ಉದ್ಯಮ ಆರಂಭಿಸಿದ್ದೆ. ಆದರೆ ಬದುಕು ಸುಧಾರಣೆಯಾಗುವ ಮುನ್ನವೇ ಬೆಂಕಿ ಅವಘಡ ಸಂಭವಿಸಿದೆ” ಎಂದು ಕಣ್ಣೀರಿಟ್ಟರು.

1519040

“ಬೆಂಕಿಯಿಂದ ನಾಲ್ಕು ಫ್ರಿಜ್‌, ಲೈಟಿಂಗ್ ವ್ಯವಸ್ಥೆ, ಎಂಟು ಸಿಸಿ ಟಿವಿ ಕ್ಯಾಮೆರಾಗಳು, ಇನ್ವೆರ್‌ಟರ್‌, ಟಿವಿ, ಕುರ್ಚಿಗಳು ಹಾಗೂ ಇತರೆ ಅಡುಗೆ ಮತ್ತು ಎಲೆಕ್ಟ್ರಿಕಲ್ ಸಾಮಗ್ರಿಗಳು ಸುಟ್ಟು ಹೋಗಿವೆ” ಎಂದು ಅವರು ತಿಳಿಸಿದರು.

“ಒಂದು ಕಡೆ ಲಕ್ಷಾಂತರ ರೂಪಾಯಿ ಸಾಲದ ಹೊರೆ, ಮತ್ತೊಂದು ಕಡೆ ಕುಟುಂಬದ ನೋಡಿಕೊಳ್ಳುವ ಜವಾಬ್ದಾರಿ ರಾಜಕುಮಾರ್ ಅವರ ಮೇಲೆ ಇರುವುದರಿಂದ ಅವರ ಪರಿಸ್ಥಿತಿ ಅತ್ಯಂತ ಸಂಕಷ್ಟಕರವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಹಾಗೂ ದಾನಿಗಳಿಂದ ತಕ್ಷಣ ಆರ್ಥಿಕ ನೆರವು ನೀಡಬೇಕು” ಎಂದು ಸಾರ್ವಜನಿಕರು ಮಾಧ್ಯಮಗಳ ಮೂಲಕ ಮನವಿ ಮಾಡಿದ್ದಾರೆ.

ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಸಿಬ್ಬಂದಿ ತಕ್ಷಣ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಸಮಯಕ್ಕೆ ಸರಿಯಾಗಿ ಕಾರ್ಯಾಚರಣೆ ನಡೆಸಿದ ಪರಿಣಾಮ ಬೆಂಕಿ ಇನ್ನಷ್ಟು ವ್ಯಾಪಿಸದೇ ತಡೆಯಲಾಯಿತು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

1519041

ಘಟನೆಯ ಮಾಹಿತಿ ತಿಳಿದು ಕೆಕೆಆರ್‌ಟಿಸಿ ಅಧ್ಯಕ್ಷ ಅರುಣಕುಮಾರ್ ಎಂ ವೈ ಪಟೀಲ್ ಸೇರಿದಂತೆ ಸ್ಥಳೀಯ ಮುಖಂಡರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೋಟೆಲ್ ಮಾಲೀಕರಿಗೆ ಸಾಂತ್ವನ ಹೇಳಿ ಅಗತ್ಯ ನೆರವು ಒದಗಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ತನಿಖೆ ಮುಂದುವರಿಕೆ

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಗ್ನಿ ಅವಘಡದ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರೆಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆ ವ್ಯಕ್ತವಾಗಿದೆ.

ಹೊಸ ಉದ್ಯಮ ಆರಂಭಿಸಿ ಬದುಕು ಕಟ್ಟಿಕೊಳ್ಳುವ ಕನಸು ಕಂಡಿದ್ದ ಯುವ ಉದ್ಯಮಿಯ ಬದುಕಿಗೆ ಈ ದುರಂತ ದೊಡ್ಡ ಹೊಡೆತ ನೀಡಿದ್ದು, ಸರ್ಕಾರ ಹಾಗೂ ಸಮಾಜದಿಂದ ನೆರವು ದೊರೆಯುತ್ತದೆಯೇ ಎಂಬ ನಿರೀಕ್ಷೆಯಲ್ಲಿ ಕುಟುಂಬ ಕಾದು ನೋಡುತ್ತಿದೆ.

WhatsApp Image 2026 05 02 at 12.01.27 e1777704270988
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಸಿಗಾಗಿ ಹುದ್ದೆ ಮಾರಾಟ: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ ಇಡಿ ವಶಕ್ಕೆ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಸಿಸಿ) ನಡೆದಿದೆ ಎನ್ನಲಾದ ಬೃಹತ್ ನೇಮಕಾತಿ ಅಕ್ರಮ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಗದಗ | ಕಳಸಾಪೂರ ಬಸವ ಕೇಂದ್ರದಲ್ಲಿ 1633ನೇ ವಾರದ ಶಿವಾನುಭವ ಕಾರ್ಯಕ್ರಮ

ಗದಗ ತಾಲೂಕ ಕಳಸಾಪೂರ ಗ್ರಾಮದ ಬಸವ ಕೇಂದ್ರದಲ್ಲಿ 1633ನೇ ವಾರದ ಶಿವಾನುಭವದಲ್ಲಿ...

ವಿಜಯಪುರ | ಸದೃಢ ಸಮಾಜ ನಿರ್ಮಾಣಕ್ಕೆ ಹಿರಿಯರ ಮಾರ್ಗದರ್ಶನ ಅಗತ್ಯ: ಅರವಿಂದ ಹಾಗರಗಿ

ವಯಸ್ಸು ಬದುಕಿನ ಅಂತ್ಯವಲ್ಲ; ಅದು ಅನುಭವ, ಜ್ಞಾನ ಮತ್ತು ಬದುಕಿನ ಪಾಠಗಳ...