ಕಲಾದಗಿ | ಗ್ರಾಮ ಪಂಚಾಯಿತಿ ಚುನಾವಣೆ ನಡೆಸದಿದ್ದರೆ ಬೀದಿಗಿಳಿದು ಹೋರಾಟ

Date:

ಗ್ರಾಮ ಪಂಚಾಯಿತಿ ಚುನಾವಣೆ ನಡೆಸದಿದ್ದರೆ ರಾಜ್ಯಾದ್ಯಂತ ಸಾರ್ವಜನಿಕರೊಡಗೂಡಿ ಬೀದಿಗಿಳಿದು ಪ್ರತಿಭಟನೆ ಮಾಡಲಾಗುವುದು ಎಂದು ಕಲಾದಗಿ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ಜಿಲ್ಲಾಧ್ಯಕ್ಷ ಪ್ರವೀಣ ಅರಕೇರಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಬಾಗಲಕೋಟೆ ಗ್ರಾಮದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ‘ಪತ್ರಿಕಾಗೋಷ್ಠಿ’ಯಲ್ಲಿ ಮಾತನಾಡಿ, “ಜಿಪಂ ತಾಪಂ ಹಾಗೂ ಗ್ರಾಪಂಗಳಿಗೆ ಚುನಾವಣೆ ಕುರಿತು ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ. ಸಂವಿಧಾನದ ಆಶಯ ಹತ್ತಿಕ್ಕುವ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ತುಳಿಯುವ ಕೆಲಸ ಮಾಡುತ್ತಿದೆ. ಅನುದಾನದ ಕೊರತೆಯಿಂದ ಅಗತ್ಯ ಸೇವೆಗಳನ್ನು ಒದಗಿಸಲು ಗ್ರಾಪಂ ಸಿಬ್ಬಂದಿಗಳು ಹೆಣಗಾಡುತ್ತಿದ್ದರೆ, ಸಾರ್ವಜನಿಕರಿಂದ ಬಂದ ಅಹವಾಲು ಕಸದ ಬುಟ್ಟಿ ಸೇರುತ್ತಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಒಕ್ಕೂಟದ ರಾಜ್ಯ ಸಮಿತಿ ಸದಸ್ಯ ಪ್ರದೀಪ ಪಾಟೀಲ ಮಾತನಾಡಿ, “ನಮ್ಮೆಲ್ಲಾ ಆಡಳಿತ ಪಕ್ಷದ ಹಾಗೂ ವಿರೋಧ ಪಕ್ಷದ ಶಾಸಕರು, ಸಂಸದರು ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವ ಬಗ್ಗೆ ಮಾತನಾಡದಿರುವುದು ನಿಜಕ್ಕೂ ದುರಂತ. ಇದರಲ್ಲಿಯೂ ರಾಜಕಾರಣ ಮಾಡುವುದನ್ನು ಬಿಟ್ಟು ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಕೂಡಲೇ ನಡೆಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ;...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಮುಂಬರುವ ಜುಲೈ ತಿಂಗಳಿನಲ್ಲಿ ತುಮಕೂರಿನಲ್ಲಿ ಗ್ರಾಪಂ ಸದಸ್ಯರ ಒಕ್ಕೂಟದಿಂದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಸರ್ಕಾರದ ಪ್ರಜಾಪ್ರಭುತ್ವ ನಡೆ ವಿರುದ್ದ ಹೋರಾಟದ ನಿರ್ಣಯ ತೆಗೆದುಕೊಳ್ಳಲಾಗುವುದು. ಜನರು ಬೀದಿಗಿಳಿದು ಹೋರಾಟ ಮಾಡುವ ಮುನ್ನವೇ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಸರ್ಕಾರ ಮುಂದಾಗಬೇಕು” ಎಂದು ಒತ್ತಾಯಿಸಿದರು.

ಒಕ್ಕೂಟದ ಸದಸ್ಯರಾದ ಸದಾಶಿವ ಬದ್ನಿ, ಭೀಮಸಿ ಕರಡಿಗುಡ್ಡ, ರಮೇಶ ಜಮಖಂಡಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಶಾರ್ಜಾದಲ್ಲಿ ಹತ್ಯೆಗೀಡಾದ ಅಲ್ವಿನ್ ಪ್ರಕಾಶ್ ಕುಂದರ್‌ಗೆ ಹುಟ್ಟೂರಿನಲ್ಲಿ ಅಂತಿಮ ನಮನ

ಶಾರ್ಜಾದಲ್ಲಿ ಕಳೆದ ಜುಲೈನಲ್ಲಿ ನಿಗೂಢವಾಗಿ ಹತ್ಯೆಗೀಡಾದ ಕುಂದಾಪುರ ಪುರಸಭೆ ವ್ಯಾಪ್ತಿಯ ಹೊನ್ನನಕೇರಿ...

ಹಾಸನ |‘ನಾಸ್ತಿಕತೆ ಎಂದರೆ ಧರ್ಮವಿರೋಧವಲ್ಲ’; ಸಿಪಿಐಎಂ ಧರ್ಮೇಶ್ 

ಹಾಸನ ಜಿಲ್ಲೆಯ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರೊಬ್ಬರು ‘ಆಸ್ತಿಕತೆ ಮತ್ತು ನಾಸ್ತಿಕತೆ ವೈಯಕ್ತಿಕ ವಿಚಾರವೇ...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿ: ವಿರೋಧಿಸಿ ಬೃಹತ್ ಪಾದಯಾತ್ರೆ 

ಮಲೆನಾಡಿನ ಜನರ ಪಾಲಿಗೆ 'ಮರಣಶಾಸನ'ವಾಗಿ ಪರಿಣಮಿಸಿರುವ ಅರಣ್ಯ ಕಾಯ್ದೆಗಳಲ್ಲೊಂದಾದ ಕಸ್ತೂರಿ ರಂಗನ್...

ಬಾಗಲಕೋಟೆ | ಸವಿತಾ ಸಮಾಜ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬಾಗಲಕೋಟೆಯ ಸವಿತಾ ಸಮಾಜ ಹಾಗೂ ಅದರ ಉಪಜಾತಿಗಳಿಗೆ ಸೇರಿದ ನಿರುದ್ಯೋಗಿಗಳು ಮತ್ತು...