ಮೈಸೂರು ದಸರಾ ಹಬ್ಬದಲ್ಲಿ ಕಂಬಳ ಕ್ರೀಡೆ ಸೇರ್ಪಡೆ: ಡಿಸಿಎಂ ಡಿ.ಕೆ.ಶಿವಕುಮಾರ್

Date:

ಮುಂಬರುವ ನಾಡಹಬ್ಬ ಮೈಸೂರು ದಸರಾ ಹಬ್ಬದಲ್ಲಿ ಕಂಬಳ ಕ್ರೀಡೆಯನ್ನು ಸೇರ್ಪಡೆ ಮಾಡಲು ನಾವು ತೀರ್ಮಾನ ಮಾಡುತ್ತೇವೆ. ಈ ಬಗ್ಗೆ ಮುಖ್ಯಮಂತ್ರಿಯವರು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ಬಳಿ ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

- Advertisement -

ದ್ವಿತೀಯ ವರ್ಷದ ಹೊನಲು ಬೆಳಕಿನ ಮೂಳೂರು- ಅಡ್ಡೂರು ಜೋಡುಕೆರೆ ಕಂಬಳ ಸಮಾರಂಭದಲ್ಲಿ ಶನಿವಾರ ಭಾಗವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

“ಈ ಬಾರಿಯ ದಸರಾ ಸಮಿತಿಯ ಉಪಾಧ್ಯಕ್ಷನಾಗಿದ್ದೇನೆ. ದಸರಾ ಹಬ್ಬದಲ್ಲಿ ಇನ್ನು ಮುಂದೆ ಕಂಬಳ ದಕ್ಷಿಣ ಕನ್ನಡದ ಪರಂಪರೆಯಗಿ ಮುಂದುವರೆಯಲಿದೆ. ಮೂರು ಎಕರೆ ಪ್ರದೇಶದಲ್ಲಿ ಕಂಬಳ ಕೆರೆ ನಿರ್ಮಾಣ ಮಾಡುವ ಆಲೋಚನೆಯಿದೆ. ಇದರಿಂದ 25 ಸಾವಿರಕ್ಕೂ ಹೆಚ್ಚು ‌ಜನ ಕಂಬಳ ವೀಕ್ಷಣೆ ಮಾಡಬಹುದು. ನೀವೆಲ್ಲರು ಸೇರಿದರೆ ಸರ್ಕಾರದಿಂದ ಸಹಕಾರ ನೀಡಲಾಗುವುದು. ಕಂಬಳವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಎಲ್ಲರು ಬೆಳೆಸೋಣ” ಎಂದು ತಿಳಿಸಿದರು.

“ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಾಪನೆಯಾದ ಬ್ಯಾಂಕ್ ಗಳಿಂದ ಇಡೀ ದೇಶಕ್ಕೆ ಆರ್ಥಿಕ ಅಡಿಪಾಯ ಸೃಷ್ಟಿಯಾಯಿತು. ಸಾಂಸ್ಕೃತಿಕ, ಶೈಕ್ಷಣಿಕ, ಧಾರ್ಮಿಕವಾದ ಶ್ರೀಮಂತಿಕೆ ಯಾವ ಜಿಲ್ಲೆಯಲ್ಲಿಯೂ ಇಲ್ಲ. ಕಂಬಳದ ಮೂಲಕ ಇಡೀ ದೇಶದಲ್ಲಿಯೇ ಸಾಂಸ್ಕೃತಿಕವಾಗಿ ಸಾಕ್ಷಿಗುಡ್ಡೆಯನ್ನು ಕಂಬಳ ಕ್ರೀಡೆ ನಿರ್ಮಾಣ ಮಾಡಿದೆ” ಎಂದರು.

“ಈ ಜಿಲ್ಲೆಯ ಧಾರ್ಮಿಕಯೇ ನಿಮ್ಮ ಶಕ್ತಿ. ಹಲವಾರು ಎಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳು ಈ ಜಿಲ್ಲೆಯಲ್ಲಿವೆ. ಈ ಜಿಲ್ಲೆಯ ಯುವಕರ ಬುದ್ಧಿವಂತಿಕೆ ಬೇರೆ ದೇಶಗಳಿಗೆ ಹೋಗುತ್ತಿದೆ. ಇದು ತಪ್ಪಬೇಕು. ಈ ಜಿಲ್ಲೆಗೆ ಪ್ರವಾಸಿ ಕ್ಷೇತ್ರದಲ್ಲಿ ಅತ್ಯಂತ ಅವಕಾಶವಿದೆ. ಇತ್ತೀಚೆಗೆ ಸದನದಲ್ಲಿ ಮಾತನಾಡುತ್ತ ಈ ಭಾಗದ ಶಾಸಕರ ಜೊತೆ ಚರ್ಚೆ ಮಾಡುವಂತೆ ತಿಳಿಸಿದ್ದೆ. ಇಡೀ ದೇಶದ ಯಾವ ರಾಜ್ಯಗಳಿಗೂ ಇಲ್ಲದ ಅತ್ಯಂತ ಉದ್ದದ ಕರಾವಳಿ ನಿಮಗಿದೆ. ಸದ್ಯದಲ್ಲಿಯೇ ಎರಡು ಜಿಲ್ಲೆಗಳ ಶಾಸಕರ ಸಭೆ ನಡೆಸಲಾಗುವುದು” ಎಂದು ಹೇಳಿದರು.

“ಪ್ರವಾಸೋದ್ಯಮ, ಧಾರ್ಮಿಕ ಕ್ಷೇತ್ರದಲ್ಲಿ ಹೊಸ ಪಾಲಿಸಿಗಳನ್ನು ತಂದು ಯುವಕರ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗುವುದು. ಇದು ಒಂದು ಪಕ್ಷದ ಜಾತಿಯ,‌ ಧರ್ಮದ ವಿಚಾರವಲ್ಲ. ಇಡೀ ಜಿಲ್ಲೆಯ ಜನರ ಬದುಕಿನ ವಿಚಾರ. ನೀರಿಗೆ, ಭೂಮಿಗೆ, ಬೆಳಕಿಗೆ ಯಾವುದೇ ಜಾತಿಯಿಲ್ಲ” ಎಂದರು.

“ಮನುಷ್ಯ ಸೋಲುವುದು ಕಲಿತಾಗ ಮಾತ್ರ ಗೆಲ್ಲಲು ಸಾಧ್ಯ. ಕ್ರೀಡೆಯಲ್ಲಿ ಮನುಷ್ಯನ ಗಾತ್ರ ಮುಖ್ಯವಲ್ಲ, ಹೃದಯವಂತಿಕೆ ಮುಖ್ಯ. ಕೋಣಗಳ ಮನಸ್ಸನ್ನು ಗೆದ್ದರೆ ಮಾತ್ರ ಸ್ಪರ್ಧಿ ಕಂಬಳ ಗೆಲ್ಲಲು ಸಾಧ್ಯ. ಕಂಬಳಕ್ಕೆ ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಲು ನಾವು ಬದ್ದ. ಕಂಬಳಕ್ಕೆ ಯಾವುದೇ ಜಾತಿ,‌ಧರ್ಮವಿಲ್ಲ ಇಲ್ಲಿರುವುದು ಧಾರ್ಮಿಕ ಆಚರಣೆ, ಕ್ರೀಡೆ ಹಾಗೂ ಸಂಸ್ಕೃತಿ” ಎಂದು ಹೇಳಿದರು.

“ಕಳೆದ ವರ್ಷ ಶಾಸಕರಾದ ಅಶೋಕ್ ರೈ ಅವರು ಬೆಂಗಳೂರು ಕಂಬಳವನ್ನು ಆಯೋಜಿಸಿ ಇತಿಹಾಸ ಸೃಷ್ಟಿಸಿದ್ದರು. ಇನಾಯತ್ ಅಲಿ ಅವರು ಸರ್ವಧರ್ಮಗಳನ್ನು ಸೇರಿಸಿ ಕಂಬಳದಲ್ಲಿ ಇತಿಹಾಸ ಸೃಷ್ಟಿ ಮಾಡಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ರದ್ದತಿಗೆ ಅ.2ರಂದು ಬೃಹತ್ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸುವುದು, ಪಟ್ಟಿಯಿಂದ...

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ...

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...

ಉಡುಪಿ | ಶಾರ್ಜಾದಲ್ಲಿ ಹತ್ಯೆಗೀಡಾದ ಅಲ್ವಿನ್ ಪ್ರಕಾಶ್ ಕುಂದರ್‌ಗೆ ಹುಟ್ಟೂರಿನಲ್ಲಿ ಅಂತಿಮ ನಮನ

ಶಾರ್ಜಾದಲ್ಲಿ ಕಳೆದ ಜುಲೈನಲ್ಲಿ ನಿಗೂಢವಾಗಿ ಹತ್ಯೆಗೀಡಾದ ಕುಂದಾಪುರ ಪುರಸಭೆ ವ್ಯಾಪ್ತಿಯ ಹೊನ್ನನಕೇರಿ...