ಕರ್ನಾಟಕದಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಕಠಿಣ ಕ್ರಮ: ಸಚಿವ ಸಂಪುಟ ಉಪಸಮಿತಿ ವರದಿ ಅನುಮೋದನೆ

Date:

Advertisements

ಕರ್ನಾಟಕ ರಾಜ್ಯದಲ್ಲಿ 2006 ರಿಂದ 2011ರವರೆಗೆ ನಡೆದ ಭಾರಿ ಪ್ರಮಾಣದ ಅಕ್ರಮ ಗಣಿಗಾರಿಕೆಯಿಂದ ರಾಜ್ಯದ ಸಂಪತ್ತಿಗೆ ಉಂಟಾದ ಲೂಟಿಯನ್ನು ತಡೆಗಟ್ಟಲು ರಾಜ್ಯ ಸರ್ಕಾರವು ಕಠಿಣ ಕ್ರಮಗಳನ್ನು ಕೈಗೊಂಡಿದೆ. ಈ ಸಂಬಂಧ ರಚಿಸಲಾಗಿದ್ದ ಸಚಿವ ಸಂಪುಟದ ಉಪಸಮಿತಿಯ ವರದಿಯನ್ನು ದಿನಾಂಕ ಆ. 19 ರಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅನುಮೋದಿಸಲಾಗಿದೆ.

ಲೋಕಾಯುಕ್ತರ ವರದಿಯ ಪ್ರಕಾರ, ‘ಬಿ’ ವರ್ಗದ 60 ಕಬ್ಬಿಣದ ಅದಿರಿನ ಗಣಿ ಗುತ್ತಿಗೆಗಳಿಂದ 9.37 ಕೋಟಿ ಟನ್ ಮತ್ತು ‘ಸಿ’ ವರ್ಗದ 51 ಗಣಿ ಗುತ್ತಿಗೆಗಳಿಂದ 9.70 ಕೋಟಿ ಟನ್ ಕಬ್ಬಿಣದ ಅದಿರು ಅಕ್ರಮವಾಗಿ ತೆಗೆಯಲಾಗಿದೆ. ಒಟ್ಟಾರೆ, 19.07 ಕೋಟಿ ಮೆಟ್ರಿಕ್ ಟನ್ ಅದಿರು ಅಕ್ರಮವಾಗಿ ರಫ್ತಾಗಿದ್ದು, ರಾಜ್ಯಕ್ಕೆ ರೂ. 78,245 ಕೋಟಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಈ ಅಕ್ರಮದಲ್ಲಿ ರಾಜಕಾರಣಿಗಳು, ವ್ಯಾಪಾರಸ್ಥರು, ಅಧಿಕಾರಿಗಳು ಮತ್ತು ಇತರರು ಶಾಮೀಲಾಗಿದ್ದಾರೆ ಎಂಬುದು ಲೋಕಾಯುಕ್ತ ತನಿಖೆಯಿಂದ ದೃಢಪಟ್ಟಿದೆ.

ಸರ್ಕಾರದ ಕ್ರಮಗಳು
2013-2018ರ ಅವಧಿಯಲ್ಲಿ ರಾಜ್ಯ ಸರ್ಕಾರವು ಅಕ್ರಮ ಗಣಿಗಾರಿಕೆಯನ್ನು ತಡೆಗಟ್ಟಲು ಹಲವು ಕ್ರಮಗಳನ್ನು ಕೈಗೊಂಡಿತ್ತಾದರೂ, ಸರ್ಕಾರ ಬದಲಾದ ನಂತರ ಈ ಕ್ರಮಗಳಿಗೆ ಹಿನ್ನಡೆಯಾಯಿತು. ಪ್ರಸ್ತುತ ಸರ್ಕಾರವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಸಚಿವ ಎಚ್.ಕೆ. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಉಪಸಮಿತಿಯನ್ನು ದಿನಾಂಕ 05.07.2025 ರಂದು ರಚಿಸಿತು. ಈ ಸಮಿತಿಯು 13.08.2025 ರಂದು ಸಲ್ಲಿಸಿದ ವರದಿಯ ಶಿಫಾರಸ್ಸುಗಳನ್ನು ಸರ್ಕಾರವು ಒಪ್ಪಿಕೊಂಡಿದೆ.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಹೇಶ್‌ ಶೆಟ್ಟಿ ತಿಮರೋಡಿ ಬಂಧನ; ಜನರ ಪ್ರಶ್ನೆಗಳಿಗೆ ಸರ್ಕಾರದ ಉತ್ತರ ಏನು?

ಪ್ರಮುಖ ತೀರ್ಮಾನಗಳು:

ನಷ್ಟ ವಸೂಲಾತಿಗೆ ಕಾನೂನು ಚೌಕಟ್ಟು: ಅಕ್ರಮ ಗಣಿಗಾರಿಕೆಯಿಂದ ಉಂಟಾದ ಆರ್ಥಿಕ ನಷ್ಟವನ್ನು ವಸೂಲಿಗಾಗಿ ‘ಕರ್ನಾಟಕ ಅಕ್ರಮ ಗಣಿಗಾರಿಕೆ ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತನ್ನು ವಶಪಡಿಸಿಕೊಳ್ಳುವ ಕಾಯ್ದೆ’ಯ ಕರಡು ಮಸೂದೆಯನ್ನು ಸಚಿವ ಸಂಪುಟವು ಅನುಮೋದಿಸಿದೆ. ಇದಕ್ಕಾಗಿ ವಸೂಲಾತಿ ಆಯುಕ್ತರನ್ನು ನೇಮಿಸಲಾಗುವುದು.

ತ್ವರಿತ ನ್ಯಾಯಾಲಯಗಳ ಸ್ಥಾಪನೆ: ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗುವುದು.

ತನಿಖೆಯ ಮರುಪರಿಶೀಲನೆ: ವಿಶೇಷ ತನಿಖಾ ತಂಡವು ಸಲ್ಲಿಸಿದ 29 ‘ಬಿ’ ರಿಪೋರ್ಟ್‌ಗಳನ್ನು ಮರುಪರಿಶೀಲಿಸಲು ಮತ್ತು 8 ಪ್ರಕರಣಗಳ ‘ಬಿ’ ರಿಪೋರ್ಟ್‌ಗಳನ್ನು ನ್ಯಾಯಾಲಯದಿಂದ ಹಿಂಪಡೆಯಲು ತೀರ್ಮಾನಿಸಲಾಗಿದೆ.
ಅರಣ್ಯ ಇಲಾಖೆಗೆ ನಷ್ಟದ ಮೌಲ್ಯಮಾಪನ: ಅಕ್ರಮ ಗಣಿಗಾರಿಕೆಯಿಂದ ಅರಣ್ಯ ಇಲಾಖೆಗೆ ಉಂಟಾದ ನಷ್ಟವನ್ನು ಅಂದಾಜಿಸಲು ವಿಶೇಷ ತನಿಖಾ ತಂಡವನ್ನು ರಚಿಸಲಾಗುವುದು.

ಸಿಬಿಐ ತನಿಖೆಗೆ ವೇಗ: ಕಳೆದ 10 ವರ್ಷಗಳಿಂದ ಸಿಬಿಐನಲ್ಲಿ ಬಾಕಿಯಿರುವ ಪ್ರಕರಣಗಳ ತನಿಖೆಯನ್ನು ತ್ವರಿತಗೊಳಿಸಲು ಅಥವಾ ರಾಜ್ಯದ ವಿಶೇಷ ತನಿಖಾ ತಂಡಕ್ಕೆ ವಾಪಸ್ ವರ್ಗಾಯಿಸಲು ಕೇಂದ್ರ ಸರ್ಕಾರವನ್ನು ಕೋರಲಾಗುವುದು.
ಕಾನೂನು ತಂಡದ ರಚನೆ: ಗಣಿಗಾರಿಕೆ ವಿಷಯದಲ್ಲಿ ಪರಿಣಿತಿ ಹೊಂದಿರುವ ಕಾನೂನು ಅಧಿಕಾರಿಗಳ ತಂಡವನ್ನು ರೂಪಿಸಲಾಗುವುದು.

ಅಧಿಕಾರಿಗಳ ವಿರುದ್ಧ ಕ್ರಮ: ಅಕ್ರಮ ಗಣಿಗಾರಿಕೆಗೆ ಸಹಕರಿಸಿದ ಸರ್ಕಾರಿ ಅಧಿಕಾರಿಗಳು, ಮಧ್ಯವರ್ತಿಗಳು ಮತ್ತು ಖಾಸಗಿ ವ್ಯಕ್ತಿಗಳ ವಿರುದ್ಧ ಲೋಕಾಯುಕ್ತ ಶಿಫಾರಸ್ಸಿನಂತೆ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಉಪಗ್ರಹ ಚಿತ್ರಗಳ ಆಧಾರದಲ್ಲಿ ಅಂದಾಜು
ಕರ್ನಾಟಕ ರಾಜ್ಯ ಬಾಹ್ಯಾಕಾಶ ಅನ್ವಯಿಕ ಕೇಂದ್ರ (KSRSAC) ಯ 2006-07 ಮತ್ತು 2018-19ರ ಉಪಗ್ರಹ ಚಿತ್ರಗಳ ಆಧಾರದಲ್ಲಿ, ‘ಬಿ’ ವರ್ಗದ 60 ಗಣಿಗಳಿಂದ 9.37 ಕೋಟಿ ಟನ್ ಮತ್ತು ‘ಸಿ’ ವರ್ಗದ 51 ಗಣಿಗಳಿಂದ 9.70 ಕೋಟಿ ಟನ್ ಕಬ್ಬಿಣದ ಅದಿರು ಹೆಚ್ಚುವರಿಯಾಗಿ ತೆಗೆಯಲಾಗಿದೆ ಎಂದು ಅಂದಾಜಿಸಲಾಗಿದೆ.

ಸರ್ಕಾರದ ಬದ್ಧತೆ
ರಾಜ್ಯ ಸರ್ಕಾರವು ಸಾರ್ವಜನಿಕ ಸಂಪತ್ತಿನ ಲೂಟಿಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದು, ಅಕ್ರಮ ಗಣಿಗಾರಿಕೆ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಮತ್ತು ರಾಜ್ಯಕ್ಕೆ ಉಂಟಾದ ನಷ್ಟವನ್ನು ವಸೂಲಾತಿ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X