ಪೊಲೀಸ್ ಠಾಣೆಗಳು ರಿಯಲ್ ಎಸ್ಟೇಟ್ ‘ಸೆಟಲ್‌ಮೆಂಟ್’ ಕೇಂದ್ರಗಳಾಗಿವೆ: ಹೈಕೋರ್ಟ್ ಅಸಮಾಧಾನ

Date:

Advertisements

ಪೊಲೀಸ್ ಠಾಣೆಗಳಲ್ಲಿ ಸಿವಿಲ್‌ ವ್ಯಾಜ್ಯಗಳನ್ನು ‘ಸೆಟಲ್‌ಮೆಂಟ್‌’ ಮಾಡುವ ಪೊಲೀಸರ ಧೋರಣೆಯನ್ನು ಮತ್ತೊಮ್ಮೆ ಕಟುವಾಗಿ ಟೀಕಿಸಿರುವ ಹೈಕೋರ್ಟ್‌, “ಠಾಣೆಗಳು ರಿಯಲ್‌ ಎಸ್ಟೇಟ್‌ ದಂಧೆಯ ಒಪ್ಪಂದ ಕೇಂದ್ರಗಳಾಗಿ ಪರಿವರ್ತನೆಗೊಂಡಿವೆ” ಎಂದು ಅಸಮಾಧಾನ ಹೊರಹಾಕಿದೆ.

‘ಈ ಬಗ್ಗೆ ಕೋರ್ಟ್ ಪದೇ ಪದೇ ಸೂಚನೆ ನೀಡುತ್ತಿದ್ದರೂ ಪೊಲೀಸ್ ಠಾಣೆಗಳು ಮಾತ್ರ ನ್ಯಾಯಾಲಯದ ಸೂಚನೆಯನ್ನು ಉಲ್ಲಂಘಿಸುತ್ತಲೇ ಇವೆ’ ಎಂದು ಖಡಕ್ ಅಭಿಪ್ರಾಯ ನೀಡಿದೆ.

‘ಖಾಸಗಿ ವ್ಯಕ್ತಿಗಳು ನನ್ನಿಂದ ಹಣ ವಸೂಲಿ ಮಾಡಲು ಪ್ರಯತ್ನಿಸುತ್ತಿದ್ದು, ಅದಕ್ಕೆ ಬಾಣಸವಾಡಿ ಠಾಣಾ ಪೊಲೀಸರು ನೆರವು ನೀಡುತ್ತಿದ್ದಾರೆ’ ಎಂದು ಆರೋಪಿಸಿ ಬೆಂಗಳೂರಿನ ಗೆದ್ದಲಹಳ್ಳಿ ನಿವಾಸಿ ಜುವಿತ್ತಾ ರವಿ ಎಂಬುವವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಹೀಗೆ ತರಾಟೆಗೆ ತೆಗೆದುಕೊಂಡಿದೆ.

Advertisements

ಬಾಣಸವಾಡಿ ಎಸಿಪಿ ಖುದ್ದು ಹಾಜರಾಗಲು ಸೂಚಿಸಿದ ಹೈಕೋರ್ಟ್‌
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ‘ಸಿವಿಲ್‌ ವ್ಯಾಜ್ಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಅರ್ಜಿದಾರರಿಗೆ ಪೊಲೀಸರು ವಿನಾ ಕಾರಣ ಕಿರುಕುಳ ನೀಡುತ್ತಿದ್ದಾರೆ’ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್‌, “ಠಾಣೆಗಳು ರಿಯಲ್‌ ಎಸ್ಟೇಟ್‌ ವ್ಯವಹಾರಸ್ಥರ ಸೆಟಲ್‌ಮೆಂಟ್‌ ಮಾಡುವ ಕೇಂದ್ರಗಳಾಗಿ ಪರಿವರ್ತನೆಗೊಂಡಿವೆ. ಸಿವಿಲ್‌ ವ್ಯಾಜ್ಯಗಳಲ್ಲಿ ಮಧ್ಯಪ್ರವೇಶ ಮಾಡದಂತೆ ಸುಪ್ರೀಂಕೋರ್ಟ್‌ ಹಾಗೂ ಹೈಕೋರ್ಟ್‌ ಪದೇ ಪದೇ ಆದೇಶಿಸಿದ್ದರೂ ಪೊಲೀಸರು ಮಾತ್ರ ಅದನ್ನು ಉಲ್ಲಂಘಿಸುತ್ತಲೇ ಇದ್ದಾರೆ” ಎಂದು ಅಸಮಾಧಾನ ಹೊರಹಾಕಿತು.

ಅಲ್ಲದೆ, ಪ್ರಕರಣ ಕುರಿತಂತೆ ಬಾಣಸವಾಡಿ ಸಹಾಯಕ ಪೊಲೀಸ್‌ ಆಯುಕ್ತರು ನವೆಂಬರ್ 29ರಂದು ಮಧ್ಯಾಹ್ನ 2.30ಕ್ಕೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗಿ ವಿವರಣೆ ನೀಡಬೇಕು ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿತು.

ಏನಿದು ಪ್ರಕರಣ?
ಕೆಲವು ಖಾಸಗಿ ವ್ಯಕ್ತಿಗಳು ನನ್ನಿಂದ 12 ಲಕ್ಷ ಹಣ ವಸೂಲಿ ಮಾಡಲು ಪ್ರಯತ್ನಿಸುತ್ತಿದ್ದಾರೆ. ಈ ಸಂಬಂಧ ಬಾಣಸವಾಡಿ ಪೊಲೀಸರು 2023ರ ನವೆಂಬರ್ 21ರಂದು ಠಾಣೆಗೆ ಕರೆದೊಯ್ದು ಹಣ ಪಾವತಿಸಲು ಸೂಚಿಸುತ್ತಿದ್ದರು.

ನವೆಂಬರ್ 25ರಂದು ಚೆಕ್‌ ಸಮೇತ ಠಾಣೆಗೆ ಹಾಜರಾಗಿ ಹಣ ಪಾವತಿಸುವಂತೆ ಸೂಚಿಸಿದ್ದಾರೆ. ಕೋರ್ಟಿನಲ್ಲಿ ಆಗಬೇಕಾದ ಕಾರ್ಯವನ್ನು ಪೊಲೀಸರೇ ಮುಂದಾಳತ್ವ ವಹಿಸಿ ಮಾಡುತ್ತಿದ್ದಾರೆ. ಇದು ಗಂಭೀರ ಪ್ರಕರಣವಾಗಿದ್ದು, ಪೊಲೀಸರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡುತ್ತಿದ್ದಾರೆ ಎಂದು ಅರ್ಜಿದಾರರು ದೂರಿದ್ದಾರೆ.

ಸಿವಿಲ್‌ ಹಾಗೂ ಹಣಕಾಸಿಗೆ ಸಂಬಂಧಿಸಿದ ಪ್ರಕರಣಗಳನ್ನು ಠಾಣೆಯಲ್ಲಿ ‘ಸೆಟಲ್‌ಮೆಂಟ್‌’ ಮಾಡುವ ಪೊಲೀಸರ ಕಾರ್ಯವೈಖರಿಯಿಂದ ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗುತ್ತಿದೆ. ಆದ್ದರಿಂದ ಪ್ರಕರಣ ಸಂಬಂಧ ಅರ್ಜಿದಾರರು ನವೆಂಬರ್ 22ರಂದು ನೀಡಿರುವ ಮಾಹಿತಿ ಪರಿಗಣಿಸಿ, ಕಾನೂನು ಪ್ರಕಾರ ಕ್ರಮ ಜರುಗಿಸುವಂತೆ ರಾಜ್ಯ ಸರ್ಕಾರ ಮತ್ತು ನಗರ ಪೊಲೀಸ್‌ ಆಯುಕ್ತರಿಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ನ್ಯಾಯಾಲಯವನ್ನು ಕೋರಿದ್ದಾರೆ.

ಅರ್ಜಿ ಇತ್ಯರ್ಥವಾಗುವರೆಗೆ ಅರ್ಜಿದಾರರರು ಅಥವಾ ಅವರ ಕುಟುಂಬ ಸದಸ್ಯರ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಪೊಲೀಸರಿಗೆ ನಿರ್ದೇಶಿಸಬೇಕು ಎಂದು ಮಧ್ಯಂತರ ಮನವಿ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X