ಕರ್ನಾಟಕದ ಅಂತಿಮ ಮತದಾರರ ಪಟ್ಟಿ ಪ್ರಕಟ; 99.32 ಲಕ್ಷ ಹೆಸರುಗಳು ಔಟ್‌!

Date:

ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಬಳಿಕ ಕರ್ನಾಟಕದ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಪರಿಷ್ಕರಣೆಗೆ ಮೊದಲು ರಾಜ್ಯದಲ್ಲಿ 5,54,32,314 ಮತದಾರರಿದ್ದು, ಅಂತಿಮ ಪಟ್ಟಿಯಲ್ಲಿ 4,55,00,011 ಮತದಾರರು ಮಾತ್ರ ಉಳಿದಿದ್ದಾರೆ. ಈ ಮೂಲಕ ಬರೋಬ್ಬರಿ ಒಟ್ಟು 99.32 ಲಕ್ಷ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ.

- Advertisement -

ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ, ಅಂತಿಮ ಮತದಾರರ ಪಟ್ಟಿಯಲ್ಲಿ 2,25,40,493 ಪುರುಷ ಮತದಾರರು, 2,29,12,355 ಮಹಿಳಾ ಮತದಾರರು ಹಾಗೂ 2,841 ತೃತೀಯ ಲಿಂಗದ ಮತದಾರರು ಇದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚಿಕ್ಕಮಗಳೂರು | ಉದ್ಯಾನವನಕ್ಕೆ ಮೀಸಲಿಟ್ಟ ಜಾಗದಲ್ಲಿ ಸಂತೆ ನಡೆಸಲು...

ಉದ್ಯಾನವನ ಮಾನವನ ಮಾನಸಿಕ ನೆಮ್ಮದಿ, ವಿನೋದ, ವಿಶ್ರಾಂತಿ ಹಾಗೂ ವನ್ಯಜೀವಿ ಹಾಗೂ ನೈಸರ್ಗಿಕ ಪರಿಸರವನ್ನು ಸಂರಕ್ಷಿಸಲು ಮೀಸಲಿಟ್ಟ ಒಂದು ಹಸಿರು ತಾಣ ಎಂದೇ ಹೇಳಬಹುದು. ಆಧುನಿಕ ವ್ಯವಸ್ಥೆಯಲ್ಲಿ ನಗರ ಜೀವನದ ಜಂಜಾಟದ ನಡುವೆ...

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ರಾಜ್ಯದಲ್ಲಿ 18ರಿಂದ 19 ವರ್ಷದೊಳಗಿನ 6.83 ಲಕ್ಷಕ್ಕೂ ಹೆಚ್ಚು ಯುವ ಮತದಾರರು ಅಂತಿಮ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ತಿಳಿಸಿದೆ.

ಪಟ್ಟಿ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ವಿ. ಅನ್ಬುಕುಮಾರ್‌, ಅರ್ಹ ಮತದಾರರನ್ನು ಮತ್ತೊಮ್ಮೆ ಸೇರ್ಪಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಎಸ್‌ಐಆರ್‌ ಮುಗಿದ ಬಳಿಕ ಫಾರ್ಮ್‌-6 ರಲ್ಲಿ ಅರ್ಜಿ ಸಲ್ಲಿಸಲು ಸೂಚಿಸಿರುವ ಅವರು, ಅರ್ಹರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗುವುದಿಲ್ಲ. ಯಾರಾದರೂ ಬಿಎಲ್‌ಎ ಗಳು ಹೆಸರು ಕೈಬಿಡುವಂತೆ ಅರ್ಜಿ ಕೊಟ್ಟ ಮಾತ್ರಕ್ಕೆ ಹೆಸರುಗಳನ್ನು ಅಳಿಸಲಾಗುವುದಿಲ್ಲ. ನೋಟೀಸ್‌ ಕೊಟ್ಟು, ವಿಚಾರಣೆ ನಡೆಸಿದ ಬಳಿಕವಷ್ಟೇ ಆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಎಸ್‌ ಐಆರ್‌ ಪ್ರಕ್ರಿಯೆಯಲ್ಲಿ ಈವರೆಗೆ 2,29,235 ಫಾರ್ಮ್‌-7 ಅರ್ಜಿಗಳು, 13, 27, 432 ಫಾರ್ಮ್‌ 8 ಅರ್ಜಿ ಸಲ್ಲಿಕೆಯಾಗಿವೆ ಎಂದು ಮಾಹಿತಿ ನೀಡಿದ್ದಾರೆ.

SIR ಪ್ರಕ್ರಿಯೆಯ ಬಳಿಕ ಕರ್ನಾಟಕದ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಸಾರ್ವಜನಿಕರಿಗೆ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರಿಶೀಲಿಸಲು ಹಾಗೂ ಅಗತ್ಯ ತಿದ್ದುಪಡಿಗಳನ್ನು ಮಾಡಲು ಚುನಾವಣಾ ಆಯೋಗವು ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಿದೆ. ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಎಂದು ತಿಳಿಯಲು ರಾಷ್ಟ್ರೀಯ ಮತದಾರರ ಸೇವಾ ಪೋರ್ಟಲ್ (voters.eci.gov.in) ಅಥವಾ ‘Voter Helpline’ ಆ್ಯಪ್ ಅನ್ನು ಬಳಸಬಹುದು. ಅಲ್ಲಿ ನಿಮ್ಮ ಮತದಾರರ ಗುರುತಿನ ಚೀಟಿ (EPIC) ಸಂಖ್ಯೆ, ಮೊಬೈಲ್ ಸಂಖ್ಯೆ ಅಥವಾ ವೈಯಕ್ತಿಕ ವಿವರಗಳನ್ನು ನಮೂದಿಸಿ ನಿಮ್ಮ ಹೆಸರು ಸಕ್ರಿಯವಾಗಿದೆಯೇ ಎಂಬುದನ್ನು ತಕ್ಷಣವೇ ಖಚಿತಪಡಿಸಿಕೊಳ್ಳಬಹುದು.

ಒಂದು ವೇಳೆ ಅಂತಿಮ ಪಟ್ಟಿಯಿಂದ ನಿಮ್ಮ ಹೆಸರು ಕೈಬಿಟ್ಟು ಹೋಗಿದ್ದರೆ ಅಥವಾ ಹೊಸದಾಗಿ ಸೇರ್ಪಡೆಯಾಗಬೇಕಿದ್ದರೆ, ಯಾವುದೇ ಆತಂಕ ಪಡುವ ಅಗತ್ಯವಿಲ್ಲ. 18 ವರ್ಷ ತುಂಬಿದ ಹೊಸ ಮತದಾರರು ಹಾಗೂ ಹೆಸರು ಕೈಬಿಟ್ಟು ಹೋದವರು ‘ಫಾರ್ಮ್ ೬’ (Form 6) ಸಲ್ಲಿಸಿ ಹೊಸದಾಗಿ ಹೆಸರು ಸೇರಿಸಬಹುದು. ಹೆಸರು, ವಿಳಾಸ, ಜನ್ಮದಿನಾಂಕ ಅಥವಾ ಭಾವಚಿತ್ರದಲ್ಲಿ ತಿದ್ದುಪಡಿಗಳಿದ್ದರೆ ‘ಫಾರ್ಮ್ ೮’ (Form 8) ಬಳಸಬೇಕಾಗುತ್ತದೆ. ಈ ಅರ್ಜಿಗಳನ್ನು ಆನ್‌ಲೈನ್ ಮೂಲಕ ಅಥವಾ ನಿಮ್ಮ ವ್ಯಾಪ್ತಿಯ ಬೂತ್ ಮಟ್ಟದ ಅಧಿಕಾರಿ (BLO) ಹಾಗೂ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿ ಆಫ್‌ಲೈನ್‌ನಲ್ಲೂ ಸಲ್ಲಿಸಲು ಅವಕಾಶವಿದೆ.

ಇದನ್ನೂ ಓದಿ: ವಿವಾದಾತ್ಮಕ ಎಸ್‌ಐಆರ್ ನಂತರ ಬಿಹಾರದ ಅಂತಿಮ ಮತದಾರರ ಪಟ್ಟಿ ಪ್ರಕಟ

ಈ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಬರೋಬ್ಬರಿ 99.32 ಲಕ್ಷ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲು ಪ್ರಮುಖ ಕಾರಣಗಳೆಂದರೆ—ನಿಧನರಾದ ಮತದಾರರ ಹೆಸರುಗಳನ್ನು ತೆರವುಗೊಳಿಸಿರುವುದು, ಬೇರೆಡೆಗೆ ಶಾಶ್ವತವಾಗಿ ಸ್ಥಳಾಂತರಗೊಂಡವರನ್ನು ಗು ಗುರುತಿಸಿರುವುದು ಹಾಗೂ ಒಂದಕ್ಕಿಂತ ಹೆಚ್ಚು ಕಡೆಗಳಲ್ಲಿದ್ದ ನಕಲಿ (Duplicate) ನೋಂದಣಿಗಳನ್ನು ಅಳಿಸಿ ಹಾಕಿರುವುದು. ಈ ಪ್ರಕ್ರಿಯೆಯು ಮತದಾರರ ಪಟ್ಟಿಯ ಪಾರದರ್ಶಕತೆ ಮತ್ತು ನಿಖರತೆಯನ್ನು ಹೆಚ್ಚಿಸಲು ನೆರವಾಗಿದೆ.

ಪ್ರಮುಖವಾಗಿ, ನಿಮ್ಮ ಬಳಿ ಮತದಾರರ ಗುರುತಿನ ಚೀಟಿ ಇದ್ದರೂ ಸಹ ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಇರುವುದು ಕಡ್ಡಾಯವಾಗಿರುವುದರಿಂದ, ಪ್ರತಿಯೊಬ್ಬ ನಾಗರಿಕರು ಕೂಡಲೇ ತಮ್ಮ ಹೆಸರನ್ನು ಪರಿಶೀಲಿಸಿಕೊಳ್ಳುವುದು ಒಳಿತು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಲತವಾಡ | ಬರದ ನಾಡಿನಲ್ಲಿ ಅಂತರ್ಜಲದ ಸೆಲೆ: ವಾಣಿಜ್ಯ ಕಟ್ಟಡದ ಬುನಾದಿಯಲ್ಲಿ ಬತ್ತದ ಬುಗ್ಗೆ!

ಒಂದೆಡೆ ಮಳೆ ಕೊರತೆ ಮತ್ತು ಬರಗಾಲದ ಬವಣೆಯಿಂದ ನೀರಿಗಾಗಿ ಪರದಾಡುವ ಪರಿಸ್ಥಿತಿ,...

ಬೆಳಗಾವಿ | ಹೆದ್ದಾರಿಯಲ್ಲಿ ಸಂಚಾರ ಆರಂಭವಾದ ಬೆನ್ನಲ್ಲೇ ದುರಂತ ಬೈಕ್‌ಗೆ ಲಾರಿ ಡಿಕ್ಕಿ: ತಂದೆ-ಮಗಳು ಸ್ಥಳದಲ್ಲೇ ಸಾವು

ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ...

​ಪದವೀಧರರ-ಶಿಕ್ಷಕರ ನಿಜವಾದ ಧ್ವನಿಯಾಗಲು ಸ್ಪರ್ಧೆ;ಯಾವುದೇ ಒತ್ತಡಕ್ಕೂ ಹಿಂದೆ ಸರಿಯಲ್ಲ:ವಕೀಲ ಬರೀದ್

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ವಕೀಲ ಬರೀದ್...

ಸಿಜೆಪಿ ಪ್ರತಿಭಟನೆ ಯಶಸ್ವಿ; 40 ಸಾವಿರ ಅರೆಸೇನಾ ಯೋಧರ ನಿಯೋಜನೆಯೇ ಸಾಕ್ಷಿ:‌ ಪ್ರಶಾಂತ್ ಕಿಶೋರ್

ಭಾರತದ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ಸಿಜೆಪಿ ಕರೆಕೊಟ್ಟಿದ್ದ...