ಕಾರವಾರ | ಏಪ್ರಿಲ್ 14 ರಿಂದ ಮಕ್ಕಳಿಗಾಗಿ ಉಚಿತ ಬೇಸಿಗೆ ಶಿಬಿರ ಪ್ರಾರಂಭ

Date:

ಕಾರವಾರ: ಜಿಲ್ಲಾ ಬಾಲಭವನ ಸೊಸೈಟಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ 2026-27ನೇ ಸಾಲಿನ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ. ನಗರದ ಸ್ತ್ರೀಶಕ್ತಿ ಭವನದಲ್ಲಿ ಮುಂದಿನ ವಾರದಿಂದ ಈ ಶಿಬಿರವು ಆರಂಭವಾಗಲಿದ್ದು, ಸತತ 15 ದಿನಗಳ ಕಾಲ ವೈವಿಧ್ಯಮಯ ಚಟುವಟಿಕೆಗಳೊಂದಿಗೆ ನಡೆಯಲಿದೆ.

- Advertisement -

ಈ ಶಿಬಿರದಲ್ಲಿ 5 ರಿಂದ 16 ವರ್ಷದೊಳಗಿನ ಮಕ್ಕಳಿಗೆ ಭಾಗವಹಿಸಲು ಅವಕಾಶವಿದ್ದು, ಸಂಗೀತ, ನೃತ್ಯ, ಕರಾಟೆ, ಯೋಗ ಹಾಗೂ ಚಿತ್ರಕಲೆಯಂತಹ ವಿವಿಧ ಕಲೆಗಳಲ್ಲಿ ಪರಿಣಿತರಿಂದ ತರಬೇತಿ ನೀಡಲಾಗುವುದು. ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರತರಲು ಮತ್ತು ರಜೆಯ ಅವಧಿಯನ್ನು ಸೃಜನಾತ್ಮಕವಾಗಿ ಕಳೆಯಲು ಈ ಶಿಬಿರವು ಉತ್ತಮ ವೇದಿಕೆಯಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನಾನು, ರಸ್ತೆ ಹಾಗೂ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಮರಾಠಿ ಕವಿ ವಸಂತ್ ಆಬಾಜಿ ದಹಾಕೆ ಅವರ "ನಾನು, ರಸ್ತೆ ಹಾಗೂ ಕಪ್ಪು ಹಕ್ಕಿ" ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

ವಿಶೇಷವೆಂದರೆ ಈ ಬೇಸಿಗೆ ಶಿಬಿರವು ಸಂಪೂರ್ಣವಾಗಿ ಉಚಿತವಾಗಿದ್ದು, ಆಸಕ್ತಿಯುಳ್ಳ ಪೋಷಕರು ತಮ್ಮ ಮಕ್ಕಳ ಹೆಸರನ್ನು ನೋಂದಾಯಿಸಿಕೊಳ್ಳಲು ಕೋರಲಾಗಿದೆ. ನೋಂದಣಿ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಏಪ್ರಿಲ್ 14ರ ಒಳಗಾಗಿ ಕಚೇರಿಯ ವೇಳೆಯಲ್ಲಿ ಹೆಸರನ್ನು ದಾಖಲಿಸಬಹುದಾಗಿದೆ.

ಈ ಸುದ್ದಿ ಓದಿದ್ದೀರಾ? ಶಿರಸಿ | ಜಗಜೀವನ್ ರಾಮ್ ಜಯಂತಿ ನಿರ್ಲಕ್ಷ್ಯ: ಅಧಿಕಾರಿಗಳ ವಿರುದ್ಧ ಭೀಮಘರ್ಜನೆ ಸಂಘಟನೆ ಆಕ್ರೋಶ

ಹೆಚ್ಚಿನ ಮಾಹಿತಿಗಾಗಿ ಹಾಗೂ ನೋಂದಣಿಗಾಗಿ ಕಚೇರಿ ಅವಧಿಯಲ್ಲಿ ಕಾರ್ಯಕ್ರಮ ಸಂಯೋಜಕರ ಮೊಬೈಲ್ ಸಂಖ್ಯೆ: 9481264737 ಅನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಳ್ಳಾಲ | ಯುವತಿಯನ್ನು ಬಲವಂತವಾಗಿ ಕರೆದೊಯ್ದ ಆರೋಪ: ತನಿಖೆಗೆ ಪೊಲೀಸ್ ಆಯುಕ್ತರ ಸೂಚನೆ

ಯುವತಿಯೊಬ್ಬಳನ್ನು ಆಕೆಯ ಇಚ್ಛೆಗೆ ವಿರುದ್ಧವಾಗಿ ಕುಟುಂಬದ ಸದಸ್ಯರು ಬಲವಂತವಾಗಿ ವಾಹನದಲ್ಲಿ ಕರೆದೊಯ್ದಿದ್ದಾರೆ...

ರಾಯಚೂರು | ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ಕೊರತೆ ನೀಗಿಸಲು ಆದ್ಯತೆ: ಮಧು ಬಂಗಾರಪ್ಪ

ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಹೆಚ್ಚಿನ...

ಮಂಗಳೂರು | 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ: ಸಹಕಾರ ಮಾಣಿಕ್ಯ ಪ್ರಶಸ್ತಿ ಪ್ರದಾನ

ಪರಿಸರ ಸಂರಕ್ಷಣೆ, ಲಿಂಗ ಸಮಾನತೆ ಮತ್ತು ವಿಶ್ವಶಾಂತಿಯ ಆಶಯದೊಂದಿಗೆ 73ನೇ ಅಖಿಲ...