ಕೇರಳ | ಪ್ರಾರ್ಥನಾ ಸಭೆಯಲ್ಲಿ ಸ್ಫೋಟ; ಸುಧಾರಿತ ಸ್ಫೋಟಕ ಸಾಧನ ಬಳಸಿ ಕೃತ್ಯ: ಕೇರಳ ಡಿಜಿಪಿ

Date:

Advertisements

ಕೇರಳದ ಕಳಮಶ್ಶೇರಿಯಲ್ಲಿರುವ ಕನ್ವೆನ್ಸನ್ ಸೆಂಟರ್‌ನಲ್ಲಿ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ನಡೆದ ಸ್ಫೋಟ ಘಟನೆಗೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ಕೇರಳದ ಡಿಜಿಪಿ ಡಾ.ಶೇಖ್ ದರ್ವೇಶ್ ಸಾಹೇಬ್, ‘ಸುಧಾರಿತ ಸ್ಫೋಟಕ ಸಾಧನ(ಐಇಡಿ) ಬಳಸಿ ಕೃತ್ಯ ನಡೆಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ’ ಎಂದು ತಿಳಿಸಿದ್ದಾರೆ.

‘ಇಂದು ಬೆಳಗ್ಗೆ 9.40ರ ಸುಮಾರಿಗೆ ಕಳಮಶ್ಶೇರಿಯ ಝಮ್ರಾ ಇಂಟರ್‌ನ್ಯಾಷನಲ್ ಕನ್ವೆನ್ಸನ್ ಸೆಂಟರ್‌ನಲ್ಲಿ ಈ ಘಟನೆ ನಡೆದಿದೆ. ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. 36 ಮಂದಿ ಗಾಯಗೊಂಡಿರುವ ಬಗ್ಗೆ ನಮಗೆ ಮಾಹಿತಿ ಬಂದಿದೆ. ಕನ್ವೆನ್ಸನ್ ಸೆಂಟರ್‌ನಲ್ಲಿ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆ ನಡೆಯುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ. ಪ್ರಾಥಮಿಕ ತನಿಖೆಯಲ್ಲಿ ಸುಧಾರಿತ ಸ್ಫೋಟಕ ಸಾಧನ(ಐಇಡಿ) ಬಳಸಿ ಕೃತ್ಯ ನಡೆಸಿರುವುದು ಗೊತ್ತಾಗಿದೆ. ಕೆಲವೊಂದು ಅವಶೇಷಗಳು ದೊರಕಿದ್ದು, ಪರಿಶೀಲನೆ ನಡೆಸುತ್ತಿದ್ದೇವೆ. ಇದರ ಹಿಂದಿರುವವರನ್ನು ಪತ್ತೆ ಹಚ್ಚಿ, ಕಠಿಣ ಕ್ರಮ ಕೈಗೊಳ್ಳಲಾಗುವುದು. ನಾನು ಕೂಡ ಸ್ಥಳಕ್ಕೆ ಇಂದು ಭೇಟಿ ನೀಡಲಿದ್ದೇನೆ’ ಎಂದು ಡಿಜಿಪಿ ಡಾ.ಶೇಖ್ ದರ್ವೇಶ್ ಸಾಹೇಬ್ ತಿಳಿಸಿದ್ದಾರೆ.

‘ಈ ಘಟನೆ ಗಂಭೀರವಾದುದು. ಹಾಗಾಗಿ, ಎಲ್ಲ ಆಯಮಾಗಳಲ್ಲೂ ತನಿಖೆ ನಡೆಸಲಿದ್ದೇವೆ. ತನಿಖೆಗೆ ಹೊಸ ತಂಡವೊಂದನ್ನು ರಚಿಸಲಾಗಿದೆ. ಇದೇ ವೇಳೆ, ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ, ದ್ವೇಷದ ಸಂದೇಶಗಳನ್ನು ಪೋಸ್ಟ್ ಮಾಡಿದ್ದು ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಯಾರು ಕೂಡ ಯಾವುದೇ ವದಂತಿಗಳನ್ನು ನಂಬಬೇಡಿ. ಜನರು ಶಾಂತಿ-ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡಬೇಕು. ಈ ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಮುಖ್ಯಸ್ಥ ಎಚ್ಚರಿಕೆ ನೀಡಿದ್ದಾರೆ.

Advertisements

ಕೇರಳದ ಕಳಮಶ್ಶೇರಿಯ ಝಮ್ರಾ ಇಂಟರ್‌ನ್ಯಾಷನಲ್ ಕನ್ವೆನ್ಸನ್ ಸೆಂಟರ್‌ನಲ್ಲಿ ಮೂರು ದಿನಗಳ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯನ್ನು ಆಯೋಜಿಸಲಾಗಿತ್ತು. ಇಂದು ಕೊನೆಯ ದಿನವಾಗಿತ್ತು. ಇಂದು(ಭಾನುವಾರ) ಪ್ರಾರ್ಥನಾ ಸಭೆ ಆರಂಭಗೊಳ್ಳುತ್ತಿದ್ದಂತೆಯೇ, ಈ ಸ್ಫೋಟ ಸಂಭವಿಸಿತ್ತು.

ಇದನ್ನು ಓದಿ : ಕೇರಳ | ಪ್ರಾರ್ಥನಾ ಸಭೆಯಲ್ಲಿ ಭೀಕರ ಸ್ಫೋಟ: ಓರ್ವ ಮಹಿಳೆ ಮೃತ್ಯು; ಹಲವರಿಗೆ ಗಾಯ

ಸ್ಫೋಟದಿಂದಾಗಿ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, 36 ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟ ಮಹಿಳೆಯ ವಿವರ ಇನ್ನೂ ಲಭ್ಯವಾಗಿಲ್ಲ. ಗಾಯಾಳುಗಳನ್ನು ಸರ್ಕಾರಿ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.  ಸಮಾವೇಶದಲ್ಲಿ 2200ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು ಎಂದು ವರದಿಯಾಗಿದೆ.

ಬಾಂಬ್ ನಿಷ್ಕ್ರಿಯ ದಳ, ವಿಶೇಷ ತನಿಖಾ ತಂಡ ಹಾಗೂ ಎನ್‌ಐಎ ಅಧಿಕಾರಿಗಳ ತಂಡ ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿದೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿಲ್ಲ, ಬದಲಿಗೆ ಸಂಪುಟದಿಂದ ಉಚ್ಚಾಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರಿಗೆ...

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X