ಕೇರಳ | ಸ್ಫೋಟ ನಡೆಸಿದ ಬಳಿಕ ವಿಡಿಯೋ ಹಂಚಿಕೊಂಡಿದ್ದ ಡೊಮಿನಿಕ್ ಮಾರ್ಟಿನ್; ವೈರಲ್

Date:

ಕೇರಳದ ಕಳಮಶ್ಶೇರಿಯಲ್ಲಿರುವ ಕನ್ವೆನ್ಸನ್ ಸೆಂಟರ್‌ನಲ್ಲಿ ಕ್ರಿಶ್ಚಿಯನ್ನರ ಉಪಪಂಗಡವೆನ್ನಲಾಗುವ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ನಡೆದ ಸ್ಫೋಟ ಘಟನೆಗೆ ಸಂಬಂಧಿಸಿದಂತೆ ‘ಬಾಂಬ್ ಇಟ್ಟಿದ್ದು ನಾನೇ’ ಎಂದು ಸ್ಫೋಟದ ಹೊಣೆ ಹೊತ್ತು ವ್ಯಕ್ತಿಯೊಬ್ಬ ಪೊಲೀಸರಿಗೆ ಶರಣಾಗಿದ್ದಾನೆ.

ಈತನನ್ನು ಅದೇ ಪಂಗಡದ ಡೊಮಿನಿಕ್ ಮಾರ್ಟಿನ್ ಎಂದು ಈಗ ಪೊಲೀಸರು ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ.

ಈ ನಡುವೆ ಘಟನೆಯ ಬಳಿಕ ‘ಬಾಂಬ್ ಇಟ್ಟಿದ್ದು ನಾನೇ’ ಎಂದು ಸ್ಫೋಟದ ಹೊಣೆ ಹೊತ್ತು ಡೊಮಿನಿಕ್ ಮಾರ್ಟಿನ್ ವಿಡಿಯೋ ಹಂಚಿಕೊಂಡಿದ್ದು, ಈಗ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗುತ್ತಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಲಯಾಳಂನಲ್ಲಿ ಮಾತನಾಡಿರುವ ಸುಮಾರು ಆರು ನಿಮಿಷದ ವಿಡಿಯೋ ಈಗ ಸೋಷಿಯಲ್ ಮೀಡಿಯಾಗಲ್ಲಿ ವೈರಲಾಗುತ್ತಿದ್ದು, ಸ್ಫೋಟ ನಡೆಸಲು ಕಾರಣವನ್ನು ಬಿಚ್ಚಿಟ್ಟಿದ್ದಾನೆ.

ಇದನ್ನು ಓದಿದ್ದೀರಾ? ಕೇರಳ | ಕಳಮಶ್ಶೇರಿ ಸ್ಫೋಟ ಪ್ರಕರಣ: ‘ಬಾಂಬ್ ಇಟ್ಟಿದ್ದು ನಾನೇ’ ಎಂದು ಪೊಲೀಸರಿಗೆ ಶರಣಾದ ವ್ಯಕ್ತಿ

‘ಹಲೋ, ನನ್ನ ಹೆಸರು ಮಾರ್ಟಿನ್. ಕೇರಳದ ಕಳಮಶ್ಶೇರಿಯಲ್ಲಿರುವ ಕನ್ವೆನ್ಸನ್ ಸೆಂಟರ್‌ನಲ್ಲಿ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ನಡೆದ ಬಾಂಬ್ ಸ್ಫೋಟ ಘಟನೆ ಬಗ್ಗೆ ನಿಮಗೆ ಸುದ್ದಿ ಸಿಕ್ಕಿರಬಹುದು. ಅಲ್ಲಿ ಏನು ನಡೆದಿದೆ ಎಂಬ ಬಗ್ಗೆ ನನಗೆ ಖಚಿತವಾಗಿ ತಿಳಿದಿಲ್ಲ. ಘಟನೆ ನಡೆದಿದೆ ಎಂಬ ಖಚಿತ ಮಾಹಿತಿ ನನಗೆ ಇದೆ. ಆ ಘಟನೆಯ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತಿದ್ದೇನೆ. ಯಾಕಾಗಿ ನಾನು ಈ ಬಾಂಬ್ ಸ್ಫೋಟ ನಡೆಸಿದೆ ಎಂಬುದನ್ನು ವಿವರಿಸಲು ಈ ವಿಡಿಯೋ ಮಾಡುತ್ತಿದ್ದೇನೆ’ ಎಂಬ ಒಕ್ಕಣೆಯೊಂದಿಗೆ ಮಾತು ಆರಂಭಿಸಿದ್ದಾನೆ.

‘ಯಹೋವನ ಸಾಕ್ಷಿಗಳ ಗುಂಪಿನಲ್ಲಿ ನಾನು ಕಳೆದ 16 ವರ್ಷಗಳಿಂದ ಗುರುತಿಸಿಕೊಂಡಿದ್ದೆ. ಆದರೆ ಕಳೆದ ಆರು ವರ್ಷಗಳ ಹಿಂದೆ  ಈ ಪಂಗಡವು ತಪ್ಪಾದ ಪಂಗಡವೆಂದು ನನಗೆ ಅರಿವಾಯಿತು. ನೀವು ಬೋಧಿಸುತ್ತಿರುವ ವಿಚಾರಗಳು ತಪ್ಪು ಎಂದು ಸಂಬಂಧಪಟ್ಟವರಲ್ಲಿ ತಿಳಿಸಿದೆ. ಆದರೆ ಅವರು ಅದಕ್ಕೆ ಮನ್ನಣೆ ನೀಡಲಿಲ್ಲ. ಇವರು ಈ ದೇಶದಲ್ಲಿದ್ದುಕೊಂಡು ಈ ದೇಶದ ಜನರೊಂದಿಗೆ ಬೆರೆಯಬಾರದು, ಅವರು ವೇಶ್ಯೆಯಂತೆ, ಅವರೊಂದಿಗೆ ವ್ಯವಹರಿಸಬಾರದು ಎಂದು ಬೋಧಿಸುತ್ತಾರೆ’ ಎಂದು ಆರೋಪಿಸಿದ್ದಾನೆ.

‘4 ವರ್ಷದ ಮಗುವಿಗೂ ಇವರು ನಿನ್ನ ಸ್ನೇಹಿತ ನೀಡಿದ ಚಾಕೊಲೇಟ್ ತಿನ್ನಬಾರದೆಂದು ಕಲಿಸಿಕೊಡುತ್ತಾರೆ. ಇದು ಯಾವ ರೀತಿಯ ಬೋಧನೆ. ಆ ಮಗುವಿನ ಮನಸ್ಥಿತಿ ಹೇಗಿರಬೇಡ. ನಾಲ್ಕು ವರ್ಷದಿಂದಲೇ ಮಕ್ಕಳ ಮನಸ್ಸಿನಲ್ಲಿ ದ್ವೇಷ ಬಿತ್ತುತ್ತಿದ್ದಾರೆ. ಸರ್ಕಾರಿ ಸೇವೆಗೆ ಸೇರಬಾರದು, ದೇಶಭಕ್ತಿ ಗೀತೆ ಹಾಡಬಾರದು, ಸೇನೆಗೆ ಸೇರಬಾರದು, ಮತದಾನ ಮಾಡಬಾರದು ಎಂದು ಕಲಿಸಿಕೊಡುತ್ತಾರೆ. ಇಂತಹ ಬೋಧನೆ ಮಾಡುವವರಿಗೆ ಇನ್ನು ಏನು ಮಾಡಬೇಕು. ಭೂಮಿಯಲ್ಲಿ ಎಲ್ಲರೂ ನಾಶವಾಗುತ್ತಾರೆ, ಯಹೋವನ ಸಾಕ್ಷಿಗಳ ಗುಂಪು ಮಾತ್ರ ಬದುಕುಳಿಯುತ್ತಾರೆ ಎಂದು ಬೋಧಿಸುತ್ತಾರೆ. ಇವರು ಜನರ ನಾಶವನ್ನು ಬಯಸುತ್ತಾರೆ. ಇವರನ್ನು ಇನ್ನು ಏನು ಮಾಡಬೇಕು? ಈ ಪಂಗಡವು ತಪ್ಪಾದ ಪಂಗಡ. ಹಾಗಾಗಿ, ಬಹಳ ಯೋಚಿಸಿ ಬಾಂಬ್ ಇಡುವ ತೀರ್ಮಾನ ಮಾಡಿದೆ. ಈ ತಪ್ಪಾದ ಪಂಗಡ ನಮ್ಮ ದೇಶದಲ್ಲಿ ಇರಬಾರದು. ಘಟನೆಯ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತಿದ್ದೇನೆ. ಪೊಲೀಸರಿಗೆ ಶರಣಾಗುತ್ತೇನೆ. ಬಾಂಬ್ ತಯಾರಿಸುವ ವಿಡಿಯೋವನ್ನು ಯಾರೂ ಕೂಡ ಜನರಿಗೆ ತೋರಿಸಬಾರದು. ಜನಸಾಮಾನ್ಯನಿಗೆ ಬಾಂಬ್ ತಯಾರಿಸುವ ಅರಿವು ಬಂದುಬಿಟ್ಟರೆ ದೊಡ್ಡ ಅಪಾಯವಾಗಬಹುದು’ ಎಂದು ಬಾಂಬ್ ಸ್ಫೋಟ ನಡೆಸಿರುವ ಹೊಣೆ ಹೊತ್ತುಕೊಂಡಿರುವ ಡೊಮಿನಿಕ್ ಮಾರ್ಟಿನ್ ಹೇಳಿಕೊಂಡಿದ್ದಾನೆ.

ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಆದಿಚುಂಚನಗಿರಿ ಮಠಕ್ಕೆ ಗೀತಾ ಶಿವರಾಜ್‌ಕುಮಾರ್ ಭೇಟಿ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಅವರು ಬುಧವಾರ...

ಕಾಂಗ್ರೆಸ್‌ ಪ್ರತಿಭಟನೆ | ಬರ ಪರಿಹಾರ ನೀಡಿ, ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾಗಿರುವ ಬರ ಪರಿಹಾರದಲ್ಲಿ ತಾರತಮ್ಯ ವಿರೋಧಿಸಿ...

ಬೈಡನ್ ಅವರನ್ನು ಬೇಕಾದರೆ ಭೇಟಿ ಮಾಡಬಹುದು, ಆದರೆ ತೇಜಸ್ವಿಸೂರ್ಯ ಭೇಟಿಗೆ ಸಿಗ್ತಾ ಇಲ್ಲ!

ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ನಲ್ಲಿ ಹಣವಿಟ್ಟು ವಂಚನೆಗೊಳಗಾದ ಸಾವಿರಾರು ಜನರು ಸಂಸದ...