ಕೇರಳ | ಕಳಮಶ್ಶೇರಿ ಸ್ಫೋಟ ಪ್ರಕರಣ: ‘ಬಾಂಬ್ ಇಟ್ಟಿದ್ದು ನಾನೇ’ ಎಂದು ಪೊಲೀಸರಿಗೆ ಶರಣಾದ ವ್ಯಕ್ತಿ

Date:

ಕೇರಳದ ಕಳಮಶ್ಶೇರಿಯಲ್ಲಿರುವ ಕನ್ವೆನ್ಸನ್ ಸೆಂಟರ್‌ನಲ್ಲಿ ಕ್ರಿಶ್ಚಿಯನ್ನರ ಉಪಪಂಗಡವೆನ್ನಲಾಗುವ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ನಡೆದ ಸ್ಫೋಟ ಘಟನೆಗೆ ಸಂಬಂಧಿಸಿದಂತೆ ‘ಬಾಂಬ್ ಇಟ್ಟಿದ್ದು ನಾನೇ’ ಎಂದು ಸ್ಫೋಟದ ಹೊಣೆ ಹೊತ್ತು ವ್ಯಕ್ತಿಯೊಬ್ಬ ಪೊಲೀಸರಿಗೆ ಶರಣಾಗಿರುವುದಾಗಿ ಕೇರಳದ ಮಾಧ್ಯಮಗಳು ವರದಿ ಮಾಡಿವೆ.

ಘಟನೆ ದೇಶಾದ್ಯಂತ ಚರ್ಚೆಗೆ ಗ್ರಾಸವಾದ ನಡುವೆಯೇ ಕೊಚ್ಚಿ ಮೂಲದ ವ್ಯಕ್ತಿಯೊಬ್ಬ ಕೊಡಗರ ಪೊಲೀಸ್‌ ಠಾಣೆಯಲ್ಲಿ ಶರಣಾಗಿದ್ದಾನೆ. ಆತನನ್ನು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಆತನ ಹಿಂದೆ ಯಾವುದಾದದರೂ ಸಂಘಟನೆಗಳು ಇವೆಯೇ ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ. ಶರಣಾದ ವ್ಯಕ್ತಿಯು ಕೊಚ್ಚಿ ಮೂಲದವನೆಂದು ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ಕೇರಳ | ಪ್ರಾರ್ಥನಾ ಸಭೆಯಲ್ಲಿ ಸ್ಫೋಟ; ಸುಧಾರಿತ ಸ್ಫೋಟಕ ಸಾಧನ ಬಳಸಿ ಕೃತ್ಯ: ಕೇರಳ ಡಿಜಿಪಿ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದೇನೆ ಎಂದು ಹೇಳಿಕೊಂಡ ಆತ ಇಂದು ಮಧ್ಯಾಹ್ನ ಒಂದೂವರೆ ಗಂಟೆಗೆ  ಪೊಲೀಸ್ ಸ್ಟೇಷನ್ ತಲುಪಿದ್ದಾನೆ ಎಂದು ಮಲಯಾಳಂ ಮಾಧ್ಯಮಗಳು ವರದಿ ಮಾಡಿವೆ.

ಶರಣಾದ ವ್ಯಕ್ತಿಯನ್ನು ಶರಣಾದ ವ್ಯಕ್ತಿಯನ್ನು ಕೊಚ್ಚಿ ಮೂಲದ ಡೊಮಿನಿಕ್ ಮಾರ್ಟಿನ್ (48) ಎಂದು ಗುರುತಿಸಲಾಗಿದೆ ಎಂದು ‘ಮೀಡಿಯಾ ವನ್ ಚಾನೆಲ್’ ವರದಿ ಮಾಡಿದೆ. ಈ ಸುದ್ದಿ ಹೊರಬರುತ್ತಿದ್ದಂತೆಯೇ ಪೊಲೀಸರು ವ್ಯಕ್ತಿಯನ್ನು ಬಿಗಿ ಪೊಲೀಸ್ ಬಂದೋಬಸ್ತ್‌ನೊಂದಿಗೆ ವಿಚಾರಣೆಗಾಗಿ ಬೇರೆಡೆಗೆ ಸ್ಥಳಾಂತರಿಸುವುದಾಗಿ ವರದಿಯಾಗಿದೆ.

ಸ್ಪೋಟಕ್ಕೆ ಬಳಸಿಕೊಳ್ಳಲಾದ ಶಂಕಿತ ನಿಗೂಢ ನೀಲಿ ಕಾರು ಚೆಂಗನ್ನೂರಿನ ಮಹಿಳೆಯ ಹೆಸರಿನಲ್ಲಿ ನೋಂದಣಿಯಾಗಿದೆ ಎಂದು ತಿಳಿದು ಬಂದಿದೆ. ಆದರೆ ಈವರೆಗೆ ಪೊಲೀಸರು ಯಾವುದೇ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿಲ್ಲ.

ಈ ಎಲ್ಲ ಬೆಳವಣಿಗೆಗಳ ನಡುವೆ ಕಣ್ಣೂರು ರೈಲು ನಿಲ್ದಾಣದಲ್ಲಿ ಪೊಲೀಸರು ತಪಾಸಣೆಯನ್ನು ತೀವ್ರಗೊಳಿಸಿದ್ದು, ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿದ್ದಾರೆ. ಬ್ಯಾಗ್ ತಪಾಸಣೆ ವೇಳೆ ಅನುಮಾನ ಬಂದ ಹಿನ್ನೆಲೆಯಲ್ಲಿ ಆತನನ್ನು ವಿಚಾರಣೆಗಾಗೆ ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.

ಕೇರಳದ ಕಳಮಶ್ಶೇರಿಯ ಝಮ್ರಾ ಇಂಟರ್‌ನ್ಯಾಷನಲ್ ಕನ್ವೆನ್ಸನ್ ಸೆಂಟರ್‌ನಲ್ಲಿ ಮೂರು ದಿನಗಳ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯನ್ನು ಆಯೋಜಿಸಲಾಗಿತ್ತು. ಇಂದು ಕೊನೆಯ ದಿನವಾಗಿತ್ತು. ಇಂದು (ಭಾನುವಾರ) ಪ್ರಾರ್ಥನಾ ಸಭೆ ಆರಂಭಗೊಳ್ಳುತ್ತಿದ್ದಂತೆಯೇ, ಈ ಸ್ಫೋಟ ಸಂಭವಿಸಿತ್ತು.

ಸ್ಫೋಟದಿಂದಾಗಿ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, 36 ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟ ಮಹಿಳೆಯ ವಿವರ ಇನ್ನೂ ಲಭ್ಯವಾಗಿಲ್ಲ. ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.  ಸಮಾವೇಶದಲ್ಲಿ 2200ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಆದಿಚುಂಚನಗಿರಿ ಮಠಕ್ಕೆ ಗೀತಾ ಶಿವರಾಜ್‌ಕುಮಾರ್ ಭೇಟಿ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಅವರು ಬುಧವಾರ...

ಕಾಂಗ್ರೆಸ್‌ ಪ್ರತಿಭಟನೆ | ಬರ ಪರಿಹಾರ ನೀಡಿ, ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾಗಿರುವ ಬರ ಪರಿಹಾರದಲ್ಲಿ ತಾರತಮ್ಯ ವಿರೋಧಿಸಿ...

ಬೈಡನ್ ಅವರನ್ನು ಬೇಕಾದರೆ ಭೇಟಿ ಮಾಡಬಹುದು, ಆದರೆ ತೇಜಸ್ವಿಸೂರ್ಯ ಭೇಟಿಗೆ ಸಿಗ್ತಾ ಇಲ್ಲ!

ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ನಲ್ಲಿ ಹಣವಿಟ್ಟು ವಂಚನೆಗೊಳಗಾದ ಸಾವಿರಾರು ಜನರು ಸಂಸದ...