ಮುಸ್ಲಿಂ ಯುವಕರಿಗೆ ಸಾರ್ವಜನಿಕವಾಗಿ ಥಳಿಸಿದ ಪೊಲೀಸರಿಗೆ 14 ದಿನ ಜೈಲು; ಗುಜರಾತ್ ಹೈಕೋರ್ಟ್

Date:

Advertisements

ಗುಜರಾತ್‌ ಖೇಡಾ ಜಿಲ್ಲೆಯಲ್ಲಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಐವರು ಮುಸ್ಲಿಂ ಯುವಕರಿಗೆ ಸಾರ್ವಜನಿಕವಾಗಿ ಥಳಿಸಿದ್ದಕ್ಕಾಗಿ ಗುಜರಾತ್ ಹೈಕೋರ್ಟ್ 4 ಗುಜರಾತ್ ಪೊಲೀಸ್ ಅಧಿಕಾರಿಗಳನ್ನು ನ್ಯಾಯಾಲಯದಿಂದ ನಿಂದನೆ ತಪ್ಪಿತಸ್ಥರೆಂದು ಘೋಷಿಸಿದ್ದು, ಅಪರಾಧಿಗಳಿಗೆ 14 ದಿನಗಳ ಸರಳ ಜೈಲು ಶಿಕ್ಷೆ ಹಾಗೂ 2 ಸಾವಿರ ದಂಡವನ್ನು ವಿಧಿಸಿದೆ.

ದಂಡ ತೆರಲು ತಪ್ಪಿದ್ದಲ್ಲಿ ಇನ್ನೂ ಮೂರು ದಿನಗಳ ಕಾಲ ಜೈಲು ಶಿಕ್ಷೆಯನ್ನು ಅನುಭವಿಸಬೇಕು ಎಂದು ಹೈಕೋರ್ಟ್ ಎಚ್ಚರಿಸಿದೆ

ನ್ಯಾಯಮೂರ್ತಿ ಎ ಎಸ್ ಸುಪೇಹಿಯಾ ಮತ್ತು ನ್ಯಾಯಮೂರ್ತಿ ಗೀತಾ ಗೋಪಿ ಅವರ ವಿಭಾಗೀಯ ಪೀಠವು ಅಕ್ಟೋಬರ್ 18 ರಂದು ತೀರ್ಪು ಪ್ರಕಟಿಸುವ ಸಂದರ್ಭದಲ್ಲಿ ಘಟನೆಯನ್ನು “ಅಮಾನವೀಯ” ಮತ್ತು “ಮಾನವೀಯತೆಯ ವಿರುದ್ಧದ ಕೃತ್ಯ” ಎಂದು ತಿಳಿಸಿದೆ.

Advertisements

ಅಪರಾಧಿ ಪೊಲೀಸರಿಗೆ ತಲಾ 2 ಸಾವಿರ ರೂ. ದಂಡವನ್ನು ವಿಧಿಸಿದ್ದು, ಈ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಆರೋಪಿ ಪರ ವಕೀಲರು ಅವಕಾಶ ಕೋರಿದ ಹಿನ್ನೆಲೆಯಲ್ಲಿ ಶಿಕ್ಷೆಯ ಆದೇಶವನ್ನು ಮೂರು ತಿಂಗಳ ಕಾಲ ತಡೆಹಿಡಿಯಲಾಗಿದೆ.

ಈ ಸುದ್ದಿ ಓದಿದ್ದೀರಾ? ವಿಷಾಹಾರ ಸೇವನೆ: ಅಲಿಗಢ ಮುಸ್ಲಿಂ ವಿವಿಯ 300ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

ಕಳೆದ ವರ್ಷ ಅಕ್ಟೋಬರ್ 4 ರಂದು ಗುಜರಾತ್‌ ಖೇಡಾ ಜಿಲ್ಲೆಯ ಉಂಧೇಲಾ ಗ್ರಾಮದಲ್ಲಿ ಕಲ್ಲು ತೂರಾಟ ನಡೆಸಿದ ಆರೋಪದ ಮೇಲೆ ಬಂಧನಕ್ಕೊಳಗಾದ ಪೊಲೀಸರು ಐವರು ಮುಸ್ಲಿಂ ಯುವಕರನ್ನು ಕಂಬಕ್ಕೆ ಕಟ್ಟಿ ಸಾರ್ವಜನಿಕವಾಗಿ ಥಳಿಸಲಾಗಿತ್ತು.

ಆದರೆ, ಅಕ್ಟೋಬರ್ 16 ರಂದು, ಅಪರಾಧಿ ಪೊಲೀಸರಿಂದ ಹಣದ ಪರಿಹಾರವನ್ನು ಸ್ವೀಕರಿಸಲು ಸಂತ್ರಸ್ತರು ನಿರಾಕರಿಸಿದ್ದರು.

ಪೊಲೀಸರು, ಕಾನೂನು ಮತ್ತು ಸುವ್ಯವಸ್ಥೆಯ ಪಾಲಕರಾಗಿ ತಮ್ಮ ಕರ್ತವ್ಯ ರಕ್ಷಣೆಗಾಗಿ ನಾಗರಿಕ ಸ್ವಾತಂತ್ರ್ಯವನ್ನು ಹರಣಗೊಳಿಸಬಾರದು ಎಂದು ನ್ಯಾಯಾಲಯ ಹೇಳಿದೆ.

ವಿಚಾರಣೆಯ ಸಂದರ್ಭದಲ್ಲಿ, ಪೊಲೀಸ್ ಇಲಾಖೆಯಲ್ಲಿ ಈಗಾಗಲೇ 10-15 ವರ್ಷಗಳ ಸೇವೆ ಸಲ್ಲಿಸಿರುವ ಪೊಲೀಸ್ ಅಧಿಕಾರಿಗಳಿಗೆ ಶಿಕ್ಷೆ ವಿಧಿಸಿದರೆ ಅವರ ವೃತ್ತಿಪರ ದಾಖಲೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಪೊಲೀಸರ ಪರ ವಾದ ಮಂಡಿಸಿದ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು .

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X