‌ಕೊಡಗು | ಮತ ಎಣಿಕೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ

Date:

Advertisements

ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮೇ 13ರಂದು ನಡೆಯಲಿದ್ದು, ಮತ ಎಣಿಕೆ ಪ್ರಕ್ರಿಯೆಯನ್ನು ತಾಳ್ಮೆ ಮತ್ತು ಎಚ್ಚರಿಕೆಯಿಂದ ನಿರ್ವಹಿಸುವಂತೆ ಅಧಿಕಾರಿಗಳಿಗೆ ಕೊಡಗು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಬಿ.ಸಿ ಸತೀಶ್ ಸೂಚನೆ ನೀಡಿದ್ದಾರೆ.

ಜಿಲ್ಲೆಯ ಮಡಿಕೇರಿಯ ಸಂತ ಜೋಸೆಫರ ಶಾಲೆಯಲ್ಲಿ ಮತ ಎಣಿಕೆ ನಡೆಯಲಿದೆ. ಅದಕ್ಕಾಗಿ ಅಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಗಾರದಲ್ಲಿ ಜಿಲ್ಲಾಧಿಕಾರಿ ಸತೀಶ್ ಮಾತನಾಡಿದರು.

“ಮತ ಎಣಿಕೆ ಪ್ರಕ್ರಿಯೆ ಮೇ 13ರ ಬೆಳಗ್ಗೆ 8ಕ್ಕೆ ಆರಂಭವಾಗಲಿದೆ. ಚುನಾವಣಾ ಆಯೋಗದ ನಿಯಮದ ಪ್ರಕಾರ ಮತ ಎಣಿಕೆ ಕೈಗೊಳ್ಳಬೇಕು. ಮತ ಎಣಿಕೆ ಸ್ಥಳಕ್ಕೆ ಮೊಬೈಲ್ ತರಬಾರದು. ಮತ ಎಣಿಕೆ ಕಾರ್ಯವು ಸರಳ ಪ್ರಕ್ರಿಯೆ ಆಗಿದ್ದು, ಯಾವುದೇ ರೀತಿಯ ಗೊಂದಲಕ್ಕೆ ಒಳಗಾಗದೆ ನಿಯಮಾನುಸಾರ ಕರ್ತವ್ಯ ನಿರ್ವಹಿಸಿ ಮತ ಎಣಿಕೆ ಕಾರ್ಯವನ್ನು ಯಶಸ್ಸುಗೊಳಿಸಬೇಕು” ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ? ರಾಜ್ಯದ 34 ಕಡೆ ಮತ ಎಣಿಕೆ : ಕೌಂಟಿಂಗ್ ಸೆಂಟರ್ ಮಾಹಿತಿ ಬಿಡುಗಡೆ ಮಾಡಿದ ಆಯೋಗ

“ಯಾವುದಾದರೂ ಸಮಸ್ಯೆಗಳು ಇದ್ದಲ್ಲಿ ಚುನಾವಣಾಧಿಕಾರಿ ಗಮನಕ್ಕೆ ತರಬೇಕು. ಮತ ಎಣಿಕೆ ಮೇಲ್ವಿಚಾರಕರು ಮತ್ತು ಮತ ಎಣಿಕೆ ಸಹಾಯಕರು ಕಾರ್ಯನಿರ್ವಹಿಸಲಿದ್ದು, ಜೊತೆಗೆ ಮೈಕ್ರೋ ವೀಕ್ಷಕರು ಇರಲಿದ್ದಾರೆ. ಎದುರಿಗೆ ಹಲವು ಪಕ್ಷದ ಏಜೆಂಟರು ಇರುತ್ತಾರೆ” ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮಾಹಿತಿ ನೀಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X