ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

Date:

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಚುನಾವಣಾ ವ್ಯವಸ್ಥೆಯಲ್ಲಿನ ಅಕ್ರಮಗಳ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು

- Advertisement -

ಪ್ರತಿಭಟನೆ ಉದ್ದೇಶಿಸಿ ಮಾಜಿ ಸಚಿವ ಕೆ.ಆರ್. ರಮೇಶ್‌ ಕುಮಾರ್ ಮಾತನಾಡಿ, ಇದು ಕೇವಲ ಕಾಂಗ್ರೆಸ್‌ ಪಕ್ಷದ ಪ್ರತಿಭಟನೆಯಲ್ಲ. ದೇಶದ ಪ್ರಜಾಪ್ರಭುತ್ವ ಹಾಗೂ ಮತದಾನದ ಹಕ್ಕಿನ ರಕ್ಷಣೆಗಾಗಿ ನಡೆಯುತ್ತಿರುವ ಸಾರ್ವಜನಿಕ ಹೋರಾಟವಾಗಿದೆ. ಸಂವಿಧಾನ, ಶಾಸನಸಭೆಗಳು, ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಮತದಾನದ ಹಕ್ಕು ಪರಸ್ಪರ ಅವಿನಾಭಾವ ಸಂಬಂಧ ಹೊಂದಿವೆ. ಜನರು ನೀಡುವ ಮತದ ಆಧಾರದ ಮೇಲೆಯೇ ಶಾಸನಸಭೆಗಳಿಗೆ ಪ್ರತಿನಿಧಿಗಳು ಆಯ್ಕೆಯಾಗುವುದರಿಂದ ಮತದಾನದ ಹಕ್ಕು ದುರ್ಬಲವಾದರೆ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆಯೇ ಪರಿಣಾಮ ಬೀರುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಮೂಲಭೂತ ಪ್ರಜಾಪ್ರಭುತ್ವದ ಹಕ್ಕಾಗಿದ್ದು, ಅದನ್ನು ರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ಚುನಾವಣಾ ಪ್ರಕ್ರಿಯೆಯಲ್ಲಿ ಜನರ ವಿಶ್ವಾಸ ಉಳಿಯಬೇಕಾದರೆ ಚುನಾವಣಾ ಆಯೋಗದ ಕಾರ್ಯವೈಖರಿ ಪಾರದರ್ಶಕವಾಗಿರಬೇಕು. ಚುನಾವಣಾ ವ್ಯವಸ್ಥೆಗೆ ಸಂಬಂಧಿಸಿದ ಯಾವುದೇ ಅನುಮಾನಗಳಿಗೆ ಸ್ಪಷ್ಟತೆ ನೀಡುವ ಅಗತ್ಯವಿದೆ ಎಂದು ಹೇಳಿದರು.

ಮತದಾರರ ಪಟ್ಟಿಯಿಂದ ಅರ್ಹರ ಹೆಸರುಗಳನ್ನು ಕೈಬಿಡಲಾಗಿದೆ ಎಂಬ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು. ಎಸ್‌ಐಆರ್‌ ಸೇರಿದಂತೆ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಾರ್ವಜನಿಕರ ಆತಂಕಗಳಿಗೆ ಸೂಕ್ತ ಉತ್ತರ ದೊರೆಯಬೇಕು. ಚುನಾವಣಾ ಆಯೋಗವು ಪ್ರಜಾಪ್ರಭುತ್ವದ ಆಶಯಗಳಿಗೆ ಅನುಗುಣವಾಗಿ ಪಾರದರ್ಶಕವಾಗಿ ಕಾರ್ಯನಿರ್ವಹಿಸುವ ಮೂಲಕ ಚುನಾವಣಾ ವ್ಯವಸ್ಥೆಯ ಮೇಲಿನ ಜನರ ನಂಬಿಕೆಯನ್ನು ಉಳಿಸಬೇಕು ಎಂದು ಒತ್ತಾಯಿಸಿದರು.

ಸಿಎಎ, ಎನ್‌ಆರ್‌ಸಿ ಮತ್ತು ರಾಮಮಂದಿರ ವಿಚಾರಗಳು ಕೆಲಸ ಮಾಡದಿದ್ದಾಗ ಈಗ ಮತ ಕಳ್ಳತನದ ಪ್ರಯೋಗ ನಡೆದಿದೆ. ಇದು ನಾವು‌ ಮಾಡುತ್ತಿರುವ ಆರೋಪವಲ್ಲ,
ಆಯೋಗದೊಳಗಿನ ಇಬ್ಬರು ಆಯುಕ್ತರ ಭಿನ್ನಮತದಿಂದ ಹೊರಬಂದಿದೆ. ಏಕಪಕ್ಷೀಯ ನಿರ್ಧಾರವನ್ನು ಸರ್ವಾನುಮತ ಎಂದು ದೇಶಕ್ಕೆ ಸುಳ್ಳು ಹೇಳುತ್ತಿರುವ ಮುಖ್ಯ ಚುನಾವಣಾ ಆಯುಕ್ತರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ಶಾಸಕ ಕೊತ್ತೂರು ಜಿ.ಮಂಜುನಾಥ್ ಮಾತನಾಡಿ, ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಸಾರ್ವಜನಿಕವಾಗಿ ಕೇಳಿಬರುತ್ತಿರುವ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ನೀಡಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತೆಗೆದು ಹಾಕುವಿಕೆ ಹಾಗೂ ಪರಿಷ್ಕರಣೆಯಲ್ಲಿ ಯಾವುದೇ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಬೇಕು ಎಂದರು

ಎಸ್‌ಐಆರ್ ಪ್ರಕ್ರಿಯೆ ಕುರಿತು ವಿವಿಧ ರಾಜ್ಯಗಳಲ್ಲಿ ಆತಂಕ ವ್ಯಕ್ತವಾಗಿದ್ದು, ಅರ್ಹ ಮತದಾರರ ಹಕ್ಕುಗಳಿಗೆ ಧಕ್ಕೆಯಾಗದಂತೆ ಚುನಾವಣಾ ಆಯೋಗ ಕ್ರಮವಹಿಸಬೇಕು. ಕರ್ನಾಟಕದಲ್ಲಿಯೂ ಮತದಾರರ ಹಕ್ಕು ರಕ್ಷಿಸಲು ಕಾಂಗ್ರೆಸ್ ಹೋರಾಟ ಮುಂದುವರಿಸಲಿದೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್‌ ಕುಮಾರ್ ಮಾತನಾಡಿ, ಚುನಾವಣಾ ಆಯೋಗದ ಕೆಲವು ನಿರ್ಧಾರಗಳ ಕುರಿತು ಆಕ್ಷೇಪಗಳು ವ್ಯಕ್ತವಾಗಿವೆ. ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಬಂದಿರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.

ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ಅರ್ಹ ಮತದಾರರ ಹೆಸರು ಕೈಬಿಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ಚುನಾವಣಾ ಆಯೋಗವು ಪಕ್ಷಾತೀತವಾಗಿ ಕಾರ್ಯನಿರ್ವಹಿಸುವ ಮೂಲಕ ಜನರ ವಿಶ್ವಾಸವನ್ನು ಉಳಿಸಿಕೊಳ್ಳಬೇಕು. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಆಶಯಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಕಾನೂನುಬದ್ಧ ಹೋರಾಟ ನಡೆಸಲಿದೆ ಎಂದರು.

ಮಾಜಿ ಸಭಾಪತಿ ಸುದರ್ಶನ್ ಮಾತನಾಡಿ, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಲವಾದ ಬುನಾದಿ ಹಾಕಿದ ನಾಯಕರ ಕೊಡುಗೆಯನ್ನು ಸ್ಮರಿಸಬೇಕು. ಡಾ.ಬಿ.ಆರ್.ಅಂಬೇಡ್ಕರ್ ನೇತೃತ್ವದಲ್ಲಿ ರೂಪುಗೊಂಡ ಸಂವಿಧಾನವು ನಾಗರಿಕರ ಹಕ್ಕುಗಳಿಗೆ ರಕ್ಷಣೆ ನೀಡಿದೆ. ಮತದಾನದ ಹಕ್ಕು ಸೇರಿದಂತೆ ಸಂವಿಧಾನಬದ್ಧ ಹಕ್ಕುಗಳನ್ನು ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿ. ಎಸ್‌ಐಆರ್‌ ಕುರಿತು ಕಾಂಗ್ರೆಸ್ ಕಾನೂನುಬದ್ಧ ಹಾಗೂ ಸಾಂವಿಧಾನಿಕ ಹೋರಾಟ ಮುಂದುವರಿಸಲಿದೆ ಎಂದರು.

ಇದನ್ನು ಓದಿದ್ದೀರಾ..?ಕೋಲಾರ | ನರಸಾಪುರ ಕೆ ಬಿ ಹೊಸಹಳ್ಳಿ ಬಂಡೆಯಲ್ಲಿ ಯಲಹಂಕ ಬಾಗಲೂರು ಮೂಲದ ಲಾರಿ ಚಾಲಕನ ಸಾವು

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮ್ಯಾಕಲ ನಾರಾಯಣಸ್ವಾಮಿ, ಮುಳಬಾಗಿಲು ಕಾಂಗ್ರೆಸ್ ಅಭ್ಯರ್ಥಿ ಆದಿನಾರಾಯಣ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ ಶಿವಕುಮಾರ್, ತಾಲೂಕು ಅಧ್ಯಕ್ಷ ವೇಮಗಲ್ ಮುನಿಯಪ್ಪ ಆಹಾರ ನಿಗಮದ ಉಪಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸೈಯದ್ ಅಫ್ಸರ್, ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಉರಟ ಅಗ್ರಹಾರ ಚೌಡರೆಡ್ಡಿ ಜಯದೇವ್, ಕೆ.ಕೆ ಮಂಜುನಾಥ್, ಎಸ್ಟಿ ಘಟಕದ ಅಂಬರೀಷ್, ಒಬಿಸಿ ಮಂಜುನಾಥ್, ಸೇರಿದಂತೆ ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎನ್‌ಎಸ್‌ಯುಐ, ಸೇವಾದಳ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಘಟಕಗಳ ಪದಾಧಿಕಾರಿಗಳು ಇದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...