ಕೋಲಾರ | ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ನಗರದಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ

Date:

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರಿದ್ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಪ್ಪಿತಸ್ಥರ ವಿರುದ್ದ ಕೂಡಲೇ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರತಿಭಟನೆ ನಡೆಸಿದರು.

- Advertisement -

ಈ ಸಂದರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರಿದ್ ಮಾತನಾಡಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ನೇತೃತ್ವದಲ್ಲಿ ರಾಜ್ಯಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ದ ಪ್ರತಿಭಟನೆ ಮಾಡಲಾಗುತ್ತಿದೆ ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರವು ಲಕ್ಷಾಂತರ ವಿದ್ಯಾರ್ಥಿಗಳ ಜೊತೆ ಚೆಲ್ಲಾಟ ವಾಡುತ್ತಿದ್ದು ದೇಶದಲ್ಲಿ ಹಲವಾರು ಬಾರಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು ವಿದ್ಯಾರ್ಥಿಗಳಿಗೆ ಇದರಿಂದಾಗಿ ಬಹಳ ಅನಾನುಕೂಲಗಳಾಗಿವೆ ಈ ಕೂಡಲೇ ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರದ ಶಿಕ್ಷಣ ಸಚಿವರು ರಾಜಿನಾಮೆ ನೀಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತೀವ್ರವಾಗಿ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಿಯಾಜ್ ಗೋರು ಮಾತನಾಡಿ ನೀಟ್ ಪರೀಕ್ಷೆಗೆ ವಿದ್ಯಾರ್ಥಿಗಳು ಎರಡು ವರ್ಷಗಳ ಕಾಲ ತಯಾರಿ ಮಾಡಿಕೊಂಡಿದ್ದಾರೆ ಪದೇಪದೇ ನೀಟ್ ಪತ್ರಿಕೆ ಸೋರಿಕೆ ಯಾಗುವುದರಿಂದ ವಿದ್ಯಾರ್ಥಿಗಳು ಬಹಳಷ್ಟು ನೋವಿನಲ್ಲಿ ಇದ್ದಾರೆ ಇದಕ್ಕೆ ಕಾರಣವಾಗಿರುವ ಕೇಂದ್ರದ ಮೋದಿ ಸರ್ಕಾರವು ಇಂತಹ ಸಮಸ್ಯೆಯ ವಿರುದ್ದ ಧ್ವನಿಯಾಗಬೇಕು ಕೂಡಲೇ ಈ ವ್ಯವಸ್ಥೆಯನ್ನು ಸರಿಪಡಿಸಬೇಕು ಇಲ್ಲದಿದ್ದರೆ ದೆಹಲಿಯ ಸಂಸತ್ತು ಭವನದ ಮುಂದೆ ದೇಶಾದ್ಯಂತ ಇರುವ ಯುವ ಕಾಂಗ್ರೆಸ್ ಘಟಕಗಳು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದರು.

ಇದನ್ನು ಓದಿದ್ದೀರಾ..? ಕೋಲಾರ | ಭೀಮ ಕೋರೆಗಾಂವ್ ಚಿತ್ರ ಬಿಡುಗಡೆ ಮಾಡಿದ ಎಂಎಲ್‌ಸಿ ಅನಿಲ್‌ ಕುಮಾರ್‌

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಸುಹೈಲ್, ಮುಖಂಡರಾದ ರೋಹಿತ್, ಯತೀಶ್, ಪ್ರಶಾಂತ್, ಗುಲಾಮ್, ಇಮ್ರಾನ್, ಫರೀದ್, ಮುಂತಾದವರು ಇದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ರದ್ದತಿಗೆ ಅ.2ರಂದು ಬೃಹತ್ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸುವುದು, ಪಟ್ಟಿಯಿಂದ...

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ...

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...

ಉಡುಪಿ | ಶಾರ್ಜಾದಲ್ಲಿ ಹತ್ಯೆಗೀಡಾದ ಅಲ್ವಿನ್ ಪ್ರಕಾಶ್ ಕುಂದರ್‌ಗೆ ಹುಟ್ಟೂರಿನಲ್ಲಿ ಅಂತಿಮ ನಮನ

ಶಾರ್ಜಾದಲ್ಲಿ ಕಳೆದ ಜುಲೈನಲ್ಲಿ ನಿಗೂಢವಾಗಿ ಹತ್ಯೆಗೀಡಾದ ಕುಂದಾಪುರ ಪುರಸಭೆ ವ್ಯಾಪ್ತಿಯ ಹೊನ್ನನಕೇರಿ...