ಕೊಪ್ಪಳ | ಕರ್ತವ್ಯ ಲೋಪ ಆರೋಪ : ಆನೆಗೊಂದಿ ಗ್ರಾ.ಪಂ. ಪಿಡಿಒ ಅಮಾನತು

Date:

Advertisements

ಕರ್ತವ್ಯ ಲೋಪದ ಆರೋಪದಡಿ ಗಂಗಾವತಿ ತಾಲ್ಲೂಕಿನ ಆನೆಗೊಂದಿ ಗ್ರಾಮ ಪಂಚಾಯಿತಿ ಪಿಡಿಒ ಕೃಷ್ಣಪ್ಪ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯತಿ ಸಿಇಒ ರಾಹುಲ್ ರತ್ನಂ ಪಾಂಡೆಯ ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದಾಗ ಕರ್ತವ್ಯದಲ್ಲಿ ಗೈರು ಇರುವುದು, ಸ್ವಚ್ಛ ಭಾರತ ಮಿಷನ್ ಅಡಿಯಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಂಡ ಫಲಾನುಭವಿಗಳಿಗೆ ಕೆ-2 ತಂತ್ರಾಂಶದ ಮೂಲಕ ಪ್ರೋತ್ಸಾಹ ಧನ ಪಾವತಿಸಲು ವಿಳಂಬ ಮಾಡಲಾಗಿದೆ. ವಿವಿಧ ಯೋಜನೆಗಳ ನಿರ್ವಹಣೆಯಲ್ಲಿ ವಿಫಲತೆ ಕಂಡುಬಂದಿದೆ. ಸಾರ್ವಜನಿಕರು ಬಳಸಿದ ಚರಂಡಿ ನೀರು, ಮಲ-ಮೂತ್ರಗಳ ತ್ಯಾಜ್ಯ ಸೇರಿ ಘನತಾಜ್ಯ ತುಂಗಭದ್ರಾ ನದಿಗೆ ಹರಿಯುತ್ತಿರುವಾಗ ನೈರ್ಮಲ್ಯ ಕಾಪಾಡುವಲ್ಲಿ ವಿಫಲರಾಗಿರುವುದು ಕಂಡು ಬಂದಿದೆ.

ಪ್ರವಾಸೋದ್ಯಮ ಇಲಾಖೆಗೆ ಕೊಠಡಿ ನೀಡಲು ಜಿಲ್ಲಾಧಿಕಾರಿ ನೀಡಿದ ಆದೇಶ ಉಲ್ಲಂಘಿಸಿದ್ದಾರೆ. ಆನೆಗೊಂದಿ ನವವೃಂದಾವನ ಯಾಂತ್ರಿಕ ನಾವೆಯ ಅಲ್ಪಾವಧಿ ಟೆಂಡರ್ ಅಂತಿಮಗೊಳಿಸದೇ ಕಾರಣ ಟಿ.ಎಸ್.ಗೋಪಿಕೃಷ್ಣ ಎಂಬ ವ್ಯಕ್ತಿ ಧಾರವಾಡದ ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದು, ಇದರಲ್ಲಿ ಕರ್ತವ್ಯ ಲೋಪ ಎಸಗಿದ್ದಾರೆ. ಇದರ ಕುರಿತು ಕಾರಣ ಕೇಳಿ ನೋಟಿಸ್‌ ಜಾರಿ ಮಾಡಿದ್ದು, ಪಿಡಿಒ ಅವರು ಸೂಕ್ತ ಕಾರಣಗಳು ನೀಡಿರುವುದಿಲ್ಲʼ ಎಂದು ಆದೇಶದಲ್ಲಿ ತಿಳಿದು ಬಂದಿದೆ.

Advertisements

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಮನೆ ಕೊಡಿಸುವುದಾಗಿ ಮಹಿಳೆಗೆ ಲೈಂಗಿಕ ಕಿರುಕುಳ : ಗ್ರಾ.ಪಂ. ಸದಸ್ಯನ ವಿರುದ್ಧ ಪ್ರಕರಣ ದಾಖಲು

ಕರ್ತವ್ಯ ಲೋಪದಿಂದ ಮುಂದಿನ ಆದೇಶ ಬರುವವರೆಗೆ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ಜಿಲ್ಲಾ ಪಂಚಾಯಿತಿ ಸಿಇಒ ಅಮಾನತುಗೊಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X