ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ 1500 ಹೆಚ್ಚುವರಿ ಬಸ್‌

Date:

Advertisements

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಗೌರಿ-ಗಣೇಶ ಹಬ್ಬದ ಪ್ರಯುಕ್ತ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಘೋಷಿಸಿದೆ. ಆಗಸ್ಟ್ 25 ಮತ್ತು 26ರಂದು ಬೆಂಗಳೂರಿನಿಂದ ಹೊರಡುವ ಪ್ರಯಾಣಿಕರ ಅನುಕೂಲಕ್ಕಾಗಿ 1500 ಹೆಚ್ಚುವರಿ ಬಸ್ಸುಗಳನ್ನು ವ್ಯವಸ್ಥೆ ಮಾಡಲಾಗುತ್ತಿದೆ. ಬಳಿಕ, ಆಗಸ್ಟ್ 27 ಮತ್ತು 31ರಂದು ರಾಜ್ಯದ ಹಾಗೂ ಅಂತಾರಾಜ್ಯದ ಹಲವು ಪ್ರಮುಖ ನಗರಗಳಿಂದ ಬೆಂಗಳೂರಿಗೆ ಮರಳಿ ಬರುವ ಪ್ರಯಾಣಿಕರಿಗಾಗಿ ವಿಶೇಷ ಬಸ್ಸುಗಳನ್ನು ಸಂಚಾರಕ್ಕೆ ಬಿಡಲಾಗುತ್ತದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಬೀದರ್ ಸೇರಿದಂತೆ ಹಲವು ಸ್ಥಳಗಳಿಗೆ ಬಸ್ಸುಗಳನ್ನು ಹೆಚ್ಚುವರಿಯಾಗಿ ಸಂಚಾರಕ್ಕೆ ಬಿಡಲಾಗುತ್ತದೆ. ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಮಡಿಕೇರಿ, ಕುಶಾಲನಗರ, ಪಿರಿಯಾಪಟ್ಟಣ ಮೊದಲಾದ ಕಡೆಗಳಿಗೆ ಸೇವೆ ವಿಸ್ತರಿಸಲಾಗಿದ್ದು, ತಮಿಳುನಾಡು ಹಾಗೂ ಕೇರಳದ ಮಧುರೈ, ಚೆನ್ನೈ, ಕೊಯಮತ್ತೂರು, ತ್ರಿಶೂರ್, ಏರ್ನಾಕುಲಂ ಮುಂತಾದ ಕಡೆಗಳಿಗೆ ಶಾಂತಿನಗರ ಬಸ್ ನಿಲ್ದಾಣದಿಂದ ವಿಶೇಷ ಬಸ್ಸುಗಳು ಸಂಚರಿಸಲಿವೆ.

ಪ್ರಯಾಣಿಕರ ಅನುಕೂಲಕ್ಕಾಗಿ ಈ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡ ಟಿಕೆಟ್ ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದೆ. ಟಿಕೆಟ್ ಬುಕ್ಕಿಂಗ್ ಸಂದರ್ಭದಲ್ಲಿ ನೀಡಲಾಗುವ ಬಸ್ ನಿಲ್ದಾಣ ಅಥವಾ ಪಿಕ್-ಅಪ್ ಪಾಯಿಂಟ್ ವಿವರಗಳನ್ನು ಗಮನಿಸಲು ನಿಗಮವು ಮನವಿ ಮಾಡಿದೆ. ಇ-ಟಿಕೆಟ್ ಬುಕ್ಕಿಂಗ್‌ನ್ನು ನಿಗಮದ ಅಧಿಕೃತ ವೆಬ್‌ಸೈಟ್(www.ksrtc.karnataka.gov.in) ಮುಖಾಂತರ ಮಾಡಬಹುದಾಗಿದೆ.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಹೇಶ್‌ ಶೆಟ್ಟಿ ತಿಮರೋಡಿ ಬಂಧನ; ಜನರ ಪ್ರಶ್ನೆಗಳಿಗೆ ಸರ್ಕಾರದ ಉತ್ತರ ಏನು?

ಅದೇ ರೀತಿ, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ಅಂತಾರಾಜ್ಯದ ಪ್ರಮುಖ ನಗರಗಳಲ್ಲಿರುವ ನಿಗಮದ ಬುಕ್ಕಿಂಗ್ ಕೌಂಟರ್‌ಗಳ ಮೂಲಕ ಸಹ ಮುಂಗಡ ಕಾಯ್ದಿರಿಸಬಹುದು. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಿಗೆ ಮುಂಗಡ ಟಿಕೆಟ್ ಬುಕ್ ಮಾಡಿದರೆ ಶೇಕಡಾ 5 ರಷ್ಟು ರಿಯಾಯಿತಿ ಮತ್ತು ಹೋಗುವ-ಬರುವ ಪ್ರಯಾಣವನ್ನು ಒಟ್ಟಿಗೆ ಕಾಯ್ದಿರಿಸಿದರೆ ಬರುವ ಪ್ರಯಾಣದ ದರದಲ್ಲಿ ಶೇಕಡಾ 10 ರಷ್ಟು ರಿಯಾಯಿತಿ ದೊರೆಯಲಿದೆ.

ನಿಗಮವು ಹೆಚ್ಚುವರಿ ಬಸ್ಸುಗಳ ವೇಳಾಪಟ್ಟಿ ಹಾಗೂ ಅವು ಹೊರಡುವ ಸ್ಥಳಗಳ ವಿವರಗಳನ್ನು ಅಂತರ್ಜಾಲದ ಮೂಲಕ ಸಾರ್ವಜನಿಕರಿಗೆ ಲಭ್ಯವಿರಿಸಿದೆ. ಹಬ್ಬದ ಸಮಯದಲ್ಲಿ ಸಾರ್ವಜನಿಕರ ಪ್ರಯಾಣಿಕ ಒತ್ತಡವನ್ನು ಗಮನಿಸಿ, ರಾಜ್ಯದ ವಿವಿಧ ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಿಂದಲೂ ಅಗತ್ಯವಿದ್ದಲ್ಲಿ ಹೆಚ್ಚುವರಿ ಬಸ್ಸುಗಳನ್ನು ಸಂಚಾರಕ್ಕೆ ಬಿಡಲಾಗುವುದು ಎಂದು ನಿಗಮವು ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X