ಚಂದ್ರಯಾನ-3 | ಯಶಸ್ವಿಯಾಗಿ ಬೇರ್ಪಟ್ಟ ವಿಕ್ರಮ್ ಲ್ಯಾಂಡರ್; ಚಂದ್ರನಿಗೆ ಮತ್ತಷ್ಟು ಹತ್ತಿರ

Date:

Advertisements

ಒಂದು ತಿಂಗಳ ಹಿಂದೆ ಭಾರತ ಉಡಾಯಿಸಿದ್ದ ‘ಚಂದ್ರಯಾನ-3’ ನೌಕೆಯಲ್ಲಿದ್ದ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಇಂದು(ಆ.17) ಮಧ್ಯಾಹ್ನ 1.15ಕ್ಕೆ ಬೇರ್ಪಟ್ಟಿದೆ ಎಂದು ಇಸ್ರೋ ಮಾಹಿತಿ ಹಂಚಿಕೊಂಡಿದೆ.

ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಮಾಹಿತಿ ಹಂಚಿಕೊಂಡಿರುವ ಇಸ್ರೋ, ಲ್ಯಾಂಡರ್ ಮಾಡ್ಯೂಲ್ (LM) ಪ್ರೊಪಲ್ಷನ್ ಮಾಡ್ಯೂಲ್ (PM)ನಿಂದ ಯಶಸ್ವಿಯಾಗಿ ಬೇರ್ಪಟ್ಟಿದೆ. ನಾಳೆ(ಆ.18) ಸಂಜೆ 4ಕ್ಕೆ ಲ್ಯಾಂಡರ್ ಮಾಡ್ಯೂಲ್ ಚಂದ್ರನ ಸಮೀಪಕ್ಕೆ ತಲುಪಲಿದೆ’ ಎಂದು ತಿಳಿಸಿದೆ.

ಈ ಪೇಲೋಡ್ ಮಾಡ್ಯೂಲ್ ಅನ್ನು ಬೆಂಗಳೂರಿನ ಇಸ್ರೋ ಕಚೇರಿಯಲ್ಲಿರುವ ಯುಆರ್ ರಾವ್ ಉಪಗ್ರಹ ಕೇಂದ್ರದಿಂದ ರೂಪಿಸಲಾಗಿತ್ತು ಎಂದು ‘ಇಸ್ರೋ’ ಮಾಹಿತಿ ಹಂಚಿಕೊಂಡಿದೆ.

ಈ ಮೂಲಕ ಅಂತಿಮ ಕಕ್ಷಗೆ ತಲುಪಿರುವ ಲ್ಯಾಂಡರ್, ಆಗಸ್ಟ್ 23ರಂದು ಚಂದ್ರನ ಮೇಲೆ ಇಳಿಯಲಿದೆ. ಕಳೆದ ಜುಲೈ 14ರಂದು ಆಂಧ್ರದ ಶ್ರೀಹರಿಕೋಟಾದಿಂದ ಚಂದ್ರಯಾನ-3 ನೌಕೆಯನ್ನು ಉಡಾವಣೆಗೊಳಿಸಲಾಗಿತ್ತು.

Advertisements
Bose Military School
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements
Advertisements
Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಂಚಾರಿ ನಿಯಮ ಉಲ್ಲಂಘನೆ:14 ಸಾವಿರ ದಂಡ ವಿಧಿಸಿದ ನ್ಯಾಯಾಲಯ

ಹೆಲ್ಮೆಟ್ ಇಲ್ಲದೇ ಬೈಕ್ ಚಾಲನೆ ಸೇರಿದಂತೆ ಹಲವು ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದ...

ವಿಜಯಪುರ | ಬಗರ್‌ಹುಕುಂ ಸಾಗುವಳಿ ಜಮೀನು ಸಕ್ರಮಗೊಳಿಸುವಂತೆ ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ

ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ರೈತರು ಕಳೆದ 20 ವರ್ಷಗಳಿಂದ ನಿರಂತರವಾಗಿ...

ಉಡುಪಿ | ದಲಿತ ಯುವತಿಗೆ ಹಲ್ಲೆ, ಜಾತಿನಿಂದನೆ ಪ್ರಕರಣ- ಆರೋಪಿ ಮಹಿಳೆಯ ಬಂಧನ – ಎಸ್ಪಿ ಹರಿರಾಂ ಶಂಕರ್‌

ಉಡುಪಿ ಜಿಲ್ಲೆಯ ಕುಂದಾಪುರ ಮಾವಿನಕಟ್ಟೆಯ ಮೆಡಿಕಲ್‌ ಶಾಪ್ ನಲ್ಲಿ ದಲಿತ ಯುವತಿಗೆ...

Download Eedina App Android / iOS

X