ಉ.ಪ್ರದೇಶ | ಬಂಧಿತ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ನಿಧನ: 144 ಸೆಕ್ಷನ್ ಜಾರಿ

Date:

ಉತ್ತರಪ್ರದೇಶದ ಬಾಂದಾ ಜೈಲಿನಲ್ಲಿದ್ದ ಬಂಧಿತ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತಕ್ಕೊಳಗಾಗಿ ನಿಧನರಾಗಿರುವುದಾಗಿ ವರದಿಯಾಗಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ರಾಣಿ ದುರ್ಗಾವತಿ ವೈದ್ಯಕೀಯ ಕಾಲೇಜಿನ ವೈದ್ಯರು, “ಇಂದು ರಾತ್ರಿ 8:25 ರ ಸುಮಾರಿಗೆ ಅಪರಾಧಿ ಹಾಗೂ ವಿಚಾರಣಾಧೀನ ಕೈದಿಯಾಗಿದ್ದ ಸುಮಾರು 63 ವರ್ಷ ವಯಸ್ಸಿನ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅನ್ಸಾರಿ ವಾಂತಿ ಮತ್ತು ಪ್ರಜ್ಞಾಹೀನ ಸ್ಥಿತಿಯಲ್ಲಿ ಜೈಲಲ್ಲಿ ಬಿದ್ದಿದ್ದರು. ಕೂಡಲೇ ಬಾಂದಾ ಜೈಲಿನ ಸಿಬ್ಬಂದಿ ರಾಣಿ ದುರ್ಗಾವತಿ ವೈದ್ಯಕೀಯ ಕಾಲೇಜಿನ ತುರ್ತು ವಿಭಾಗಕ್ಕೆ ಕರೆತಂದಿದ್ದರು. ಸುಮಾರು 9 ವೈದ್ಯರ ತಂಡ ರೋಗಿಗೆ ತಕ್ಷಣದ ವೈದ್ಯಕೀಯ ಸೇವೆಯನ್ನು ಒದಗಿಸಿದರೂ ಕೂಡ, ಚಿಕಿತ್ಸೆಗೆ ಸ್ಪಂದಿಸದೆ ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾರೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಖ್ತಾರ್ ಅನ್ಸಾರಿ ನಿಧನರಾದ ಸುದ್ದಿ ಬಿತ್ತರವಾಗುತ್ತಿದ್ದಂತೆಯೇ ಮೌ, ಬಾಂದಾ ಮತ್ತು ಗಾಝೀಪುರದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎಎನ್ಎಸ್ ಮಾಹಿತಿ ನೀಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮೌ ವಿಧಾನಸಭಾ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿದ್ದ ಮುಖ್ತಾರ್ ಅನ್ಸಾರಿ ಎಂಟು ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಬಂದಾ ಜೈಲಿನಲ್ಲಿದ್ದರು. ಇವರ ನಿಧನಕ್ಕೆ ಸಮಾಜವಾದಿ ಪಾರ್ಟಿಯು ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭೆ ಚುನಾವಣೆ | ಇನ್ನುಳಿದ ಹಂತಗಳಲ್ಲಿ ಬಿಜೆಪಿ ಸ್ಥಿತಿ ಮತ್ತಷ್ಟು ಹದಗೆಡಲಿದೆ: ಅಖಿಲೇಶ್ ಯಾದವ್

ಲೋಕಸಭೆ ಚುನಾವಣೆಯ ಉಳಿದ ಹಂತಗಳಲ್ಲಿ ಬಿಜೆಪಿಯ ಸ್ಥಿತಿ ಇನ್ನಷ್ಟು ಹದಗೆಡಲಿದೆ ಎಂದು...

‘ತಾರಕ್ ಮೆಹ್ತಾ’ ನಟ ಗುರುಚರಣ್ ಸಿಂಗ್ ನಾಪತ್ತೆ; ಅಪಹರಣ ಪ್ರಕರಣ ದಾಖಲು

ಅತ್ಯಂತ ಜನಪ್ರಿಯ ಭಾರತೀಯ ಟಿವಿ ಶೋ ಆದ 'ತಾರಕ್ ಮೆಹ್ತಾ ಕಾ...

2ನೇ ಹಂತದ ಚುನಾವಣೆ | ಮತಗಟ್ಟೆಗೆ ಬಾರದ ಹೆಚ್ಚಿನ ಮತದಾರರು; ಬಿಜೆಪಿ ವಿರೋಧಿ ಅಲೆಯ ಸೂಚನೆಯೇ?

ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಶುಕ್ರವಾರ ಮುಗಿದಿದೆ. 13 ರಾಜ್ಯಗಳ...