ಮಹಾರಾಷ್ಟ್ರ | ಛತ್ರಿ ಹಿಡಿದುಕೊಂಡೇ ಬಸ್ ಚಲಾಯಿಸಿದ ಸರ್ಕಾರಿ ಚಾಲಕ : ವಿಡಿಯೋ ವೈರಲ್

Date:

Advertisements
  • ‘ಆಹೇರಿ ಡಿಪೋಗೆ ಸೇರಿದ ಬಸ್‌’ ಎಂದು ವಿಡಿಯೋ ಹಂಚಿಕೊಂಡ ಮಹಾರಾಷ್ಟ್ರ ಕಾಂಗ್ರೆಸ್
  • ಕಳಪೆ ಬಸ್‌ಗಳು ಸಾಕಷ್ಟಿದೆ ಎಂದು ದೂರಿದ ನೆಟ್ಟಿಗರು; ಶಿಂಧೆ ಸರ್ಕಾರದ ವಿರುದ್ಧ ಆಕ್ರೋಶ

ಮಹಾರಾಷ್ಟ್ರದ ಸರ್ಕಾರಿ ಬಸ್ಸೊಂದರ ಚಾಲಕ ಛತ್ರಿ ಹಿಡಿದುಕೊಂಡೇ ಬಸ್ ಚಲಾಯಿಸುತ್ತಿರುವ ಆಘಾತಕಾರಿ ವಿಡಿಯೋವೊಂದು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ, ಸೋರುತ್ತಿರುವ ಮೇಲ್ಛಾವಣಿಯಿಂದ ತಪ್ಪಿಸಿಕೊಳ್ಳಲು ಬಸ್ ಚಾಲಕ ಒಂದು ಕೈಯಲ್ಲಿ ಛತ್ರಿ ಮತ್ತು ಇನ್ನೊಂದು ಕೈಯಲ್ಲಿ ಸ್ಟೀರಿಂಗ್ ಹಿಡಿದು ಬಸ್ ಓಡಿಸುತ್ತಿರುವುದು ದಾಖಲಾಗಿದೆ.

ಪ್ರಯಾಣಿಕರಿದ್ದಾಗಲೇ ಚಾಲಕ ಈ ರೀತಿ ಚಲಾಯಿಸಿರುವುದು ವರದಿಯಾಗಿದೆ. ಗಡ್‌ಚಿರೋಲಿ ಜಿಲ್ಲೆಯ ಆಹೇರಿ ಡಿಪೋಗೆ ಸೇರಿದ ಬಸ್‌ ಎಂದು ತಿಳಿದುಬಂದಿದ್ದು, ಸರ್ಕಾರಿ ಬಸ್‌ನ ಈ ಅವ್ಯವಸ್ಥೆಗೆ ನೆಟ್ಟಿಗರು ಕಿಡಿಕಾರಿದ್ದಾರೆ.

Advertisements

ಈ ಬಗ್ಗೆ ಟ್ವೀಟ್ ಮಾಡಿರುವ ಮಹಾರಾಷ್ಟ್ರ ಕಾಂಗ್ರೆಸ್, ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಬಸ್ಸಿನಲ್ಲಿ ಪ್ರಯಾಣಿಸುವ ಪ್ರಯಾಣಿಕರನ್ನು ದೇವರೇ ಕಾಪಾಡಬೇಕು ಎಂದು ತಿಳಿಸಿದೆ.

ಈ ವಿಡಿಯೋ ವೈರಲ್ ಆದ ಬಳಿಕ ಪ್ರತಿಕ್ರಿಯಿಸಿರುವ ಹಲವರು, ಈ ದೃಶ್ಯವು ಸಾರ್ವಜನಿಕ ಸಾರಿಗೆಯನ್ನು ನಿರ್ವಹಿಸುವಲ್ಲಿ ಸರ್ಕಾರದ ನಿರ್ಲಕ್ಷ್ಯ ಎಷ್ಟಿದೆ ಎಂಬುದಕ್ಕೆ ಸಾಕ್ಷಿ ಎಂದು ಶಿಂಧೆ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಅಲ್ಲದೇ, ಇಂತಹ ದುಸ್ಥಿತಿಯಲ್ಲಿ ಬಸ್ ಚಲಾಯಿಸಿ ಏನಾದರೂ ಅವಘಡ ಸಂಭವಿಸಿದರೆ ಯಾರು ಹೊಣೆ? ಜನರ ಜೀವದ ಬಗ್ಗೆ ಇಷ್ಟೊಂದು ನಿರ್ಲಕ್ಷ್ಯ ಏಕೆ ಎಂದು ಪ್ರಶ್ನಿಸಿದ್ದಾರೆ.

ಕೆಲ ದಿನಗಳ ಹಿಂದೆ, ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ನ ಮೇಲ್ಛಾವಣಿಯು ಚಲಿಸುತ್ತಿರುವಾಗಲೇ ಹಾರುತ್ತಿದ್ದ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಶಿಥಿಲಾವಸ್ಥೆಯಲ್ಲಿರುವ ಬಸ್‌ಗಳನ್ನೇ ಸಾರ್ವಜನಿಕ ಪ್ರಯಾಣಕ್ಕೆ ಬಳಸಲಾಗುತ್ತಿದೆ ಎಂಬ ದೂರುಗಳು ಹೆಚ್ಚುತ್ತಿವೆಯಾದರೂ, ಬಿಜೆಪಿ ಹಾಗೂ ಎನ್‌ಸಿಪಿ ಬೆಂಬಲಿತ ಶಿವಸೇನೆಯ ಶಿಂಧೆ ಸರ್ಕಾರ ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X