ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ಮಣಿಪುರ ಮಹಿಳೆಯರ ನಗ್ನ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿ ಮಣಿಪುರದ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿರುವುದಾಗಿ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ತಿಳಿಸಿದ್ದಾರೆ.
ಆರೋಪಿಯನ್ನು ಹೆರಾದಾಸ್ (32) ಎಂದು ಗುರುತಿಸಲಾಗಿದ್ದು, ತೌಬಲ್ ಜಿಲ್ಲೆಯಿಂದ ಬಂಧಿಸಲಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಈತ ಹಸಿರು ಟೀ ಶರ್ಟ್ ಧರಿಸಿದ್ದನು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಣಿಪುರ ಸಿಎಂ, ಘಟನೆಗೆ ಸಂಬಂಧಿಸಿ ಉಳಿದ ಆರೋಪಿಗಳಿಗಾಗಿ ಶಂಕಿತ ಪ್ರದೇಶಗಳಲ್ಲಿ ಸಾಮೂಹಿಕ ಕೂಂಬಿಂಗ್ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ವೀಡಿಯೊದ ಸತ್ಯಾಸತ್ಯತೆಯನ್ನು ಕೂಡ ಪರಿಶೀಲಿಸಲು ಸೈಬರ್ ಕ್ರೈಮ್ ಪೊಲೀಸರಿಗೆ ಸೂಚಿಸಲಾಗಿದೆ. ಇದೊಂದು ಹೀನಾಯ ಕೃತ್ಯ. ಈ ಘೋರ ಅಪರಾಧದಲ್ಲಿ ಭಾಗಿಯಾಗಿರುವ ಪ್ರಮುಖ ಆರೋಪಿಯನ್ನು ಕಳೆದ ರಾತ್ರಿಯೇ ಬಂಧಿಸಿದ್ದೇವೆ” ಎಂದು ಹೇಳಿದ್ದಾರೆ.
ಮರಣದಂಡನೆಯ ಸಾಧ್ಯತೆ ಸೇರಿದಂತೆ ಎಲ್ಲ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದನ್ನು ತಮ್ಮ ಸರ್ಕಾರ ಖಚಿತಪಡಿಸುತ್ತದೆ ಎಂದು ಬಿರೇನ್ ಸಿಂಗ್ ಹೇಳಿದರು.