ಲಕ್ನೋ | ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು ಎರಡು ತಿಂಗಳ ಮಗು ಸಹಿತ ಇಬ್ಬರ ಮೃತ್ಯು; 14 ಮಂದಿಗೆ ಗಾಯ

Date:

ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ನೆಲಮಾಳಿಗೆಯ ಮಹಡಿ ಕುಸಿದ ಪರಿಣಾಮ ನಿದ್ರೆಯಲ್ಲಿದ್ದ ಎರಡು ತಿಂಗಳ ಹೆಣ್ಣು ಮಗು ಸಹಿತ ಒಬ್ಬ ಪುರುಷ ಸಾವನ್ನಪ್ಪಿ, 14 ಮಂದಿ ಗಾಯಗೊಂಡಿರುವ ದಾರುಣ ಘಟನೆ ಗುರುವಾರ ತಡರಾತ್ರಿ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ.

ಗುರುವಾರ ಮಧ್ಯರಾತ್ರಿ ಕಾಳಿಂದಿ ಪಾರ್ಕ್ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

“ಘಟನೆ ನಡೆದ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕೆಲವು ಕಾರ್ಮಿಕರು ನೆಲಮಾಳಿಗೆಯಲ್ಲಿ ಗುಡಿಸಲುಗಳನ್ನು ಕಟ್ಟಿ ವಾಸಿಸುತ್ತಿದ್ದರು. ಮಹಡಿ ಕುಸಿದಿದ್ದರಿಂದ, ಕಾರ್ಮಿಕರು ನಿದ್ರೆಯಲ್ಲಿ ಅವಶೇಷಗಳಡಿಯಲ್ಲಿ ಸಿಲುಕಿದ್ದರು” ಎಂದು ಲಕ್ನೋದ ಹೆಚ್ಚುವರಿ ಪೊಲೀಸ್ ಉಪ ಕಮಿಷನರ್ ಸೈಯದ್ ಅಲಿ ಅಬ್ಬಾಸ್ ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಘಟನೆ ನಡೆದ ಬಗ್ಗೆ ಮಾಹಿತಿ ತಿಳಿದ ತಕ್ಷಣವೇ ಸ್ಥಳೀಯ ಪೊಲೀಸ್ ಅಧಿಕಾರಿಗಳ ತಂಡ ಸ್ಥಳಕ್ಕೆ ಧಾವಿಸಿ ಸ್ಥಳೀಯರ ನೆರವಿನೊಂದಿಗೆ ಬದುಕುಳಿದವರಿಗಾಗಿ ಹುಡುಕಾಟ ಆರಂಭಿಸಿದೆ.

ಘಟನೆಯಲ್ಲಿ ಕಾರ್ಮಿಕ ಮುಕದ್ದಮ್ (30) ಮತ್ತು ಎರಡು ತಿಂಗಳ ಹೆಣ್ಣು ಮಗು ಐಶ್ಯಾ ಸಾವನ್ನಪ್ಪಿದ್ದು, ಗಾಯಗೊಂಡ ಇತರ 14 ಕಾರ್ಮಿಕರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ.

ಸಾಂಧರ್ಭಿಕ ಫೋಟೋ

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

1993ರ ಸರಣಿ ಸ್ಪೋಟದ ಪ್ರಮುಖ ಆರೋಪಿಯನ್ನು ಖುಲಾಸೆಗೊಳಿಸಿದ ಟಾಡಾ ಕೋರ್ಟ್

1993ರ ಸರಣಿ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಅಬ್ದುಲ್‌ ಕರೀಮ್‌ ತುಂಡಾನನ್ನು...

ಜಾರ್ಖಂಡ್ | ಭೀಕರ ರೈಲು ಅಪಘಾತ: 12ಕ್ಕೂ ಹೆಚ್ಚು ಮಂದಿ ಮೇಲೆ ಹರಿದ ಎಕ್ಸ್‌ಪ್ರೆಸ್ ರೈಲು

ಜಾರ್ಖಂಡ್‌ನ ಜಮ್ತಾರಾದಲ್ಲಿ ಭೀಕರ ರೈಲು ಅವಘಡ ಸಂಭವಿಸಿರವುದಾಗಿ ವರದಿಯಾಗಿದೆ. ಜಮ್ತಾರಾದ ಕಲ್ಜಾರಿಯಾ...

ಗಗನಯಾತ್ರಿ ಪ್ರಶಾಂತ್ ನಾಯರ್ ನನ್ನ ಪತಿ: ಮದುವೆಯ ಗುಟ್ಟು ಬಿಟ್ಟುಕೊಟ್ಟ ಮಲಯಾಳಂ ನಟಿ ಲೀನಾ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಗಗನಯಾನ್‌ನ ಭಾಗವಾಗಿ ಕಕ್ಷೆಗೆ ಹಾರುವ ನಾಲ್ಕು...

ಲೋಕಪಾಲ್‌ ಮುಖ್ಯಸ್ಥರಾಗಿ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ ನೇಮಕ

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಅಜಯ್ ಮಾಣಿಕ್‌ ರಾವ್ ಖಾನ್ವಿಲ್ಕರ್ ಅವರನ್ನು...