ಬೆಂಗಳೂರು | ಗೆಳತಿಯ ಖಾಸಗಿ ವಿಡಿಯೋ ಮಾಡಿಕೊಂಡು 2.5 ಕೋಟಿ ರೂ. ಸುಲಿಗೆ ಮಾಡಿದ ವಿಕೃತ ಯುವಕ

Date:

ವಿಕೃತ ಯುವಕನೊಬ್ಬ ತನ್ನ ಸ್ನೇಹಿತೆಯ ಖಾಸಗಿ ಕ್ಷಣದನ್ನು ಮೊಬೈಲ್‌ನಲ್ಲಿ ಚಿತ್ರೀರಿಸಿಕೊಂಡು, ಅವುಗಳನ್ನು ಹರಿಬಿಡುವುದಾಗಿ ಬೆದರಿಸಿ 2.57 ಕೋಟಿ ರೂ. ಸುಲಿಗೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 22 ವರ್ಷದ ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಆರೋಪಿಯನ್ನು ಮೋಹನ್ ಕುಮಾರ್ ಎಂದು ಗುರುತಿಸಲಾಗಿದೆ. 20 ವರ್ಷದ ಸಂತ್ರಸ್ತ ಯುವತಿ ಮತ್ತು ಆರೋಪಿ ಮೋಹನ್ – ಇಬ್ಬರೂ ಬೋರ್ಡಿಂಗ್ ಶಾಲೆಯಲ್ಲಿ ಒಟ್ಟಿಗೆ ಓದಿದ್ದರು. ಉತ್ತಮ ಸ್ನೇಹವನ್ನು ಹೊಂದಿದ್ದರು. ಆದರೆ, ಪದವಿಯ ನಂತರ ಸ್ನೇಹವನ್ನು ಕಳೆದುಕೊಂಡಿದ್ದರು. ಅದಾದ, ಕೆಲವು ವರ್ಷಗಳ ನಂತರ ಅವರು ಮತ್ತೆ ಸ್ನೇಹ ಬೆಳೆಸಿದ್ದರು. ಡೇಟಿಂಗ್‌ ಆರಂಭಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಆರೋಪಿ ಮೋಹನ್ ಯುವತಿಗೆ ಮದುವೆಯಾಗುವ ಭರವಸೆ ನೀಡಿದ್ದನು. ತನ್ನೊಂದಿಗೆ ಪ್ರವಾಸಕ್ಕೆ ಬರುವಂತೆ ಕೇಳಿಕೊಂಡಿದ್ದನು. ಪ್ರವಾಸಕ್ಕೆ ತೆರಳಿದ್ದಾಗ ಆಕೆಯ ಖಾಸಗಿ ದೃಶ್ಯಗಳನ್ನು ಫೋಟೋ ಮತ್ತು ವಿಡಿಯೋ ಮಾಡಿಕೊಂಡಿದ್ದನು. ಅವುಗಳನ್ನು ಖಾಸಗಿಯಾಗಿ ಇಡುವುದಾಗಿ ಭರವಸೆಯನ್ನೂ ನೀಡಿದ್ದನು.

ಆದರೆ, ಇತ್ತೀಚಿಗೆ, ಆ ಫೋಟೋಗಳು ಮತ್ತು ವಿಡಿಯೋಗಳನ್ನು ಹರಿಬಿಡುವುದಾಗಿ ಬ್ಲಾಕ್‌ಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದ. ಬ್ಲಾಕ್‌ಮೇಲ್‌ಗೆ ಹದರಿದ್ದ ಯುವತಿ ಕಳೆದ ಕೆಲವು ತಿಂಗಳಲ್ಲಿ ಬರೋಬ್ಬರಿ 2.57 ಕೋಟಿ ರೂ.ಗಳನ್ನು ಆತನಿಗೆ ಕೊಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರಂಭದಲ್ಲಿ ಯುವತಿ ತನ್ನ ಅಜ್ಜಿಯ ಖಾತೆಯಿಂದ ಮೋಹನ್ ಖಾತೆಗೆ 1.25 ಕೋಟಿ ರೂ. ವರ್ಗಾಯಿಸಿದ್ದರು. ಅದಲ್ಲದೆ, ವಿವಿಧ ಸಂದರ್ಭಗಳಲ್ಲಿ 1.32 ಕೋಟಿ ರೂಪಾಯಿ ನಗದನ್ನು ಆರೋಪಿಗೆ ಕೊಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವರದಿ ಓದಿದ್ದೀರಾ?: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇ | ಟೋಲ್‌ ಎಂಬ ಸರ್ಕಾರಿ ದರೋಡೆ; 20 ತಿಂಗಳಲ್ಲಿ 438 ಕೋಟಿ ವಸೂಲಿ

ಅಂತಿಮವಾಗಿ, ಆರೋಪಿ ಮೋಹನ್‌ನ ನಿರಂತರ ಬ್ಲಾಕ್‌ಮೇಲ್‌ಅನ್ನು ಸಹಿಸಲಾಗದೆ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯನ್ನು ಬಂಧಿಸಿದ್ದಾರೆ. ಆತನಿಂದ 80 ಲಕ್ಷ ರೂ. ಹಣವನ್ನೂ ವಶಕ್ಕೆ ಪಡೆಸಿದ್ದಾರೆ.

ಪ್ರಕರಣದ ಬಗ್ಗೆ ಮಾತನಾಡಿದ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ, ”ಬಾಯ್ ಫ್ರೆಂಡ್ ತನ್ನನ್ನು ಬ್ಲಾಕ್‌ಮೇಲ್‌ ಮಾಡಿದ್ದಾನೆಂದು ಯುವತಿ ದೂರು ನೀಡಿದ್ದಾರೆ. ಇದೊಂದು ಯೋಜಿತ ಅಪರಾಧವಾಗಿದೆ. ಆರೋಪಿಯನ್ನು ಬಂಧಿಸಿದ್ಧೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ರದ್ದತಿಗೆ ಅ.2ರಂದು ಬೃಹತ್ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸುವುದು, ಪಟ್ಟಿಯಿಂದ...

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ...

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...

ಉಡುಪಿ | ಶಾರ್ಜಾದಲ್ಲಿ ಹತ್ಯೆಗೀಡಾದ ಅಲ್ವಿನ್ ಪ್ರಕಾಶ್ ಕುಂದರ್‌ಗೆ ಹುಟ್ಟೂರಿನಲ್ಲಿ ಅಂತಿಮ ನಮನ

ಶಾರ್ಜಾದಲ್ಲಿ ಕಳೆದ ಜುಲೈನಲ್ಲಿ ನಿಗೂಢವಾಗಿ ಹತ್ಯೆಗೀಡಾದ ಕುಂದಾಪುರ ಪುರಸಭೆ ವ್ಯಾಪ್ತಿಯ ಹೊನ್ನನಕೇರಿ...