ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

Date:

Advertisements

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ ಕೊಲೆ ಪ್ರಕರಣಕ್ಕೆ ಸಂಭಂದಿಸದಂತೆ ಆರೋಪಿಯನ್ನು ಬಂಧಿಸಲು ತೆರಳಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಪ್ರಯತ್ನಪಟ್ಟಾಗ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ.

ಆಗಸ್ಟ್. 17 ರಂದು ಬೆಳಗ್ಗಿನ ಜಾವ 3 ಗಂಟೆ ಸಮಯದಲ್ಲಿ ಕಿರುಗಾವಲು ಗ್ರಾಮದ ಮಹಾಲಕ್ಷ್ಮಿ ಜ್ಯುವಲರಿ ಶಾಪ್ ನ ಬಾಗಿಲನ್ನು ಗ್ಯಾಸ್ ಕಟರ್ ಬಳಸಿ ಶೆಟರ್ ಮುರಿದು 110 ಗ್ರಾಂ ಚಿನ್ನ, 2 ಕೆಜಿ ಬೆಳ್ಳಿ ಕಳ್ಳತನ ಮಾಡಿದ್ದ ಐವರ ತಂಡ. ಚಿನ್ನದಂಗಡಿ ಕಳ್ಳತನ ಮಾಡುವುದನ್ನು ಕಂಡ ಹೋಟೆಲ್ ಮಾಲೀಕ ಮಾದಪ್ಪರನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಪರಾರಿಯಾಗಿದ್ದರು.

ಖಚಿತ ಮಾಹಿತಿ ಮೇರೆಗೆ ಮಂಡ್ಯ ಜಿಲ್ಲೆ, ಮಳವಳ್ಳಿ ತಾಲ್ಲೂಕು ಭೀಮನಹಳ್ಳಿ ಗ್ರಾಮದಲ್ಲಿದ್ದ ಆರೋಪಿಗಳ ಬಂಧಿಸಲು ಪೊಲೀಸರು ದಾಳಿ ನಡೆಸಿದಾಗ ಆರೋಪಿ ಕಿರಣ್ ಎಂಬಾತ ಪೊಲೀಸ್ ಪೇದೆ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಇದೇ ವೇಳೆ ಸಿಪಿಐ ಶ್ರೀಧರ್ ಆರೋಪಿ ಕಾಲಿಗೆ ಗುಂಡು ಹಾರಿಸಿ ಪೇದೆ ನೆರವಿಗೆ ಧಾವಿಸಿದ್ದಾರೆಂದು ತಿಳಿದುಬಂದಿದೆ.

Advertisements

ಈಚಗೆರೆ ಕಿರಣ್ (24), ಕೊತ್ತತ್ತಿ ಗ್ರಾಮದ ಆನಂದ್, ಶರತ್, ಶ್ರೀನಿವಾಸ, ಕೃಷ್ಣಚಾರಿ ಬಂಧಿತ ಆರೋಪಿಗಳಾಗಿದ್ದಾರೆ. ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಶೇಷ ಸುದ್ದಿ ಓದಿದ್ದೀರಾ? ಮೈಸೂರು | ಅರಸು ಮರೆತ ಸರ್ಕಾರ; ಬೆಟ್ಟದತುಂಗ, ಕಲ್ಲಹಳ್ಳಿ ಗ್ರಾಮಗಳ ದತ್ತು ಪಡೆದಿದ್ದ ಸಿಎಂ ಸಿದ್ದರಾಮಯ್ಯ

ಮಂಡ್ಯ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದ ಮಂಡ್ಯ ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಗಾಯಗೊಂಡಿರುವ ಸಿಬ್ಬಂದಿ ಹಾಗೂ ಆರೋಪಿ ಆರೋಗ್ಯ ವಿಚಾರಿಸಿ, ಘಟನೆ ಬಗ್ಗೆ ಮಾಹಿತಿ ಪಡೆದು, ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳಿಗೆ ಸೂಕ್ತ ಸಲಹೆ, ಸೂಚನೆ ನೀಡಿರುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X