ಕೊಚ್ಚಿಯ ಅಮೃತ ಆಸ್ಪತ್ರೆಯು ಜನವರಿ 19 ರ ಭಾನುವಾರದಂದು ಹೃದಯ ಸಂಬಂಧೀ ಕಾಯಿಲೆ ಇರುವ ಮಕ್ಕಳಿಗಾಗಿ ಉಚಿತ ಹೃದ್ರೋಗ ತಪಾಸಣಾ ಶಿಬಿರವನ್ನು ಆಯೋಜಿಸಿದೆ.
ಶಿಬಿರವನ್ನು ಬೋಳೂರಿನ ಮಾತಾ ಅಮೃತಾನಂದಮಯಿ ಮಠದ ಅಮೃತ ವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದು, ಬೆಳಗ್ಗೆ 9:00 ರಿಂದ ಮಧ್ಯಾಹ್ನ 3:00 ರವರೆಗೆ ನಡೆಯಲಿದೆ.
ಅಮೃತ ಆಸ್ಪತ್ರೆಯ ತಜ್ಞರ ನೇತೃತ್ವದಲ್ಲಿ, ಜನ್ಮಜಾತ ಮತ್ತು ಇತರ ಹೃದಯ ಸಮಸ್ಯೆಗಳಿಗೆ ಸಮಗ್ರ ತಪಾಸಣೆ ನಡೆಸಲಾಗುತ್ತದೆ. ಹೆಚ್ಚಿನ ಆರೈಕೆಯ ಅಗತ್ಯವಿರುವ ಮಕ್ಕಳು ಕೊಚ್ಚಿಯ ಅಮೃತ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆಗಳಿಗೆ ಅರ್ಹರಾಗಿರುತ್ತಾರೆ.
ಈ ಸುದ್ದಿ ಓದಿದ್ದೀರಾ?: ಮಂಗಳೂರು | ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿ ಕೇರಳದ ಶವಾಗಾರದಲ್ಲಿ ಜೀವಂತ!
ಶಿಬಿರದಲ್ಲಿ ಭಾಗವಹಿಸಲು ಪೂರ್ವ ನೋಂದಣಿ ಕಡ್ಡಾಯವಾಗಿದ್ದು, ನೋಂದಣಿಗಾಗಿ, ಡಾ. ದೇವಿಪ್ರಸಾದ್ ಎಸ್. ಹೆಜಮಾಡಿ: 9845761845 ಹಾಗೂ ಮಾತಾ ಅಮೃತಾನಂದಮಯಿ ಮಠ, ಮಂಗಳೂರು: 8951470744 ಇವರನ್ನು ಸಂಪರ್ಕಿಸಬಹುದು ಎಂದು ಅಮೃತ ಆಸ್ಪತ್ರೆಯ ಆಡಳಿತ ಮಂಡಳಿ ತಿಳಿಸಿದೆ.
