‌ಮಂಗಳೂರು | ಕೂಳೂರು ಬಳಿ ಮತ್ತೆ ಟ್ರಾಫಿಕ್‌ ಜಾಮ್; ಹೈರಾಣಾದ ಸವಾರರು

Date:

ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಕೂಳೂರಿನ ಹಳೆ ಸೇತುವೆಯ ಪಕ್ಕದ ರಸ್ತೆಯಲ್ಲಿರುವ ಹೊಂಡ ಗುಂಡಿಗಳನ್ನು ಮುಚ್ಚಲು ಸಂಚಾರ ಬಂದ್‌ ಮಾಡಿದ್ದ ಹೆದ್ದಾರಿ ಇಲಾಖೆ ಇದೀಗ ಸೇತುವೆ ಮೇಲಿನ ಹೊಂಡ ಮುಚ್ಚುಲು ಮಂಗಳವಾರ ಮಧ್ಯಾಹ್ನ ಕೆಲವು ಗಂಟೆಗಳ ಕಾಲ ಸೇತುವೆ ಬಂದ್ ಮಾಡಿದ್ದರಿಂದ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ.

- Advertisement -

ಹೆದ್ದಾರಿ ಇಲಾಖೆಯು ರಸ್ತೆ ಪಕ್ಕದ ಹೊಂಡಗಳನ್ನು ಮುಚ್ಚುವ ಸಂದರ್ಭದಲ್ಲಿ ಸೇತುವೆಯ ಮೇಲಿನ ಹೊಂಡವನ್ನು ಆ ವೇಳೆಯಲ್ಲಿ ಸರಿಪಡಿಸಬಹು ದಗಿತ್ತು. ಆದರೆ, ಸಮಯದಲ್ಲಿ ಸುಮ್ಮನಿದ್ದ ಇಲಾಖೆ ಈಗ ಮಾತ್ರ ಹೊಂಡಗಳ ಗಾತ್ರ ಹೆಚ್ಚಾಗಿ ವಾಹನಗಳು ಸಂಚರಿಸುವುದು ಸಾಧ್ಯವೇ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿರುವುದಿಂದ ವಿಪರೀತ ಮಳೆಯ ಮಧ್ಯೆ ಹೊಂಡ ಗುಂಡಿಗಳನ್ನು ಮುಚ್ಚಲು ಮುಂದಾದ ಅಧಿಕಾರಿಗಳಿಗೆ ವಾಹನ ಸವಾರರು ಹಿಡಿಶಾಪ ಹಾಕುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನೂ ಓದಿ: ಧರ್ಮಸ್ಥಳ | ಗ್ರಾಮ ಪಂಚಾಯತ್‌ನಿಂದ ಮಹತ್ವದ ದಾಖಲೆ ಪಡೆದುಕೊಂಡ ಎಸ್‌ಐಟಿ

ಮಂಗಳವಾರ ಮಧ್ಯಾಹ್ನ ಹಳೆ ಸೇತುವೆಯನ್ನು ಕೆಲವು ಗಂಟೆಗಳ ಕಾಲ ಬಂದ್ ಮಾಡಿ ಸೇತುವೆಯ ಮೇಲಿನ ಹೊಂಡಗಳನ್ನು ಮುಚ್ಚಲಾಯಿತು. ಈ ವೇಳೆ ವಾಹನಗಳನ್ನು ಹೊಸ ಸೇತುವೆಯಲ್ಲೇ ಸಂಚರಿಸಲು ಸೂಚಿಸಲಾಯಿತು. ಇದರಿಂದಾಗಿ ಒಂದೇ ಕಡೆ ಸಂಚಾರದಿಂದಾಗಿ ಕೂಳೂರು ಬಳಿಯಲ್ಲಿ ಭಾರಿ ಪ್ರಮಾಣದ ಟ್ರಾಫಿಕ್ ಜಾಮ್ ಉಂಟಾಯಿತು. ಇತ್ತ ಪೊಲೀಸರು ಮಾತ್ರ ಸುಗಮ ಸಂಚಾರಗೊಳಿಸಲು ಹರಸಾಹಸ ಪಟ್ಟರು.

ಇದನ್ನೂ ಓದಿ: ಧರ್ಮಸ್ಥಳ | ಗುಂಪುಗಳ ನಡುವೆ ವಾಗ್ವಾದ: ವಾಹನಗಳ ಮೇಲೆ ಕಲ್ಲು ತೂರಾಟ; ಸ್ಟೇಷನ್ ಮುಂದೆ ಧರಣಿ

ಹೊಸ ಸೇತುವೆ ಬಂದ್ ಮಾಡಿ ಹಳೆ ಸೇತುವೆಯೊಂದರಲ್ಲೇ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದು ಭಾರಿ ಟ್ರಾಫಿಕ್ ಜಾಮ್‌ಗೆ ಕಾರಣವಾಯಿತು. ಬಸ್, ಟ್ರಕ್‌ಗಳ ನಿಧಾನಗತಿಯ ಸಂಚಾರದಿಂದಾಗಿ ಎಂಸಿಎಸ್‌ನಿಂದ ಆರಂಭವಾಗಿ ಎ.ಜೆ. ಆಸ್ಪತ್ರೆವರೆಗೂ ವಾಹನಗಳ ಸಾಲು ಕಂಡುಬಂತು. ಕೆಲವೊಮ್ಮೆ ಬಸ್‌ ಚಾಲಕರು, ಕಾರು ಚಾಲಕರು ಮಧ್ಯೆ ಜಗಳ ನಡೆಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...