ದೆಹಲಿ | ಆಝಾದ್‌ಪುರ ಮಂಡಿಯಲ್ಲಿ ಭೀಕರ ಬೆಂಕಿ ಅವಘಡ

Date:

Advertisements

ಟೊಮ್ಯಾಟೋ ಬೆಲೆ ಏರಿಕೆ ಸಂದರ್ಭದಲ್ಲಿ ತರಕಾರಿ ಕೊಂಡುಕೊಳ್ಳಲಾಗದೆ ವ್ಯಾಪಾರಿ ರಾಮೇಶ್ವರ್‌ ಅವರ ಕಣ್ಣೀರಿನ ಕಾರಣಕ್ಕಾಗಿ ದೇಶಾದ್ಯಂತ ಸುದ್ದಿಯಾಗಿದ್ದ ದೆಹಲಿಯ ಆಝಾದ್‌ಪುರ ಹಣ್ಣು ಮತ್ತು ತರಕಾರಿ ಮಾರುಕಟ್ಟೆ ಮತ್ತೊಮ್ಮೆ ಸುದ್ದಿಯಾಗಿದೆ. ಮಂಡಿಯಲ್ಲಿ ಶುಕ್ರವಾರ ಸಂಜೆ ಭೀಕರ ಬೆಂಕಿ ಅವಘಡ ಸಂಭವಿಸಿದೆ.

azad pur mandi

ಅಗ್ನಿ ಅವಘಡದಿಂದ ಇಡೀ ಪ್ರದೇಶದಲ್ಲಿ ಭೀತಿ ಆವರಿಸಿದ್ದು, ಬೆಂಕಿ ಅವಘಡದ ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದೆ. ಸುಮಾರು 11 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಆಗಮಿಸಿವೆ ಎಂದು ವರದಿಯಾಗಿದೆ.

ಬೆಂಕಿಯ ಅವಘಡಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಪ್ರಾಥಮಿಕ ಮಾಹಿತಿಯ ಪ್ರಕಾರ ಪ್ಲಾಸ್ಟಿಕ್ ಕ್ರೇಟ್‌ವೊಂದರಲ್ಲಿ ಬೆಂಕಿಯ ಜ್ವಾಲೆ ಕಾಣಿಸಿಕೊಂಡಿದ್ದು, ಆ ಬಳಿಕ ಸುತ್ತಮುತ್ತಲೂ ಹರಡಿತು ಎಂದು ತಿಳಿದುಬಂದಿದೆ.

Advertisements

ಘಟನೆಯ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅಗ್ನಿಶಾಮಕ ಠಾಣಾಧಿಕಾರಿ ಪರಸ್ ಕುಮಾರ್,” ಆಝಾದ್‌ಪುರ ಮಂಡಿಯ ಗೇಟ್ ನಂ. 1ರ ಬಳಿ ಬೆಂಕಿ ಕಾಣಿಸಿಕೊಂಡಿದೆ ಎಂಬ ಮಾಹಿತಿ ನಮಗೆ ಬಂತು. ಈಗ ನಾವು ಅದನ್ನು ಸಂಪೂರ್ಣವಾಗಿ ನಂದಿಸಿದ್ದೇವೆ. ಯಾರಿಗೂ ಗಾಯವಾಗಿಲ್ಲ. ಸ್ಥಳದಲ್ಲಿ 7-8 ವಾಹನಗಳಿದ್ದವು. ಬೆಂಕಿ ಅವಘಡಕ್ಕೆ ಕಾರಣವನ್ನು ತನಿಖೆಯ ನಂತರವೇ ತಿಳಿಯಲಿದೆ. ಮಾಹಿತಿ ಸಿಕ್ಕ ಕೂಡಲೇ ಸ್ಥಳಕ್ಕೆ ಬಂದು 15-20 ನಿಮಿಷಗಳಲ್ಲಿ ಬೆಂಕಿಯನ್ನು ನಂದಿಸಿದೆವು” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿಲ್ಲ, ಬದಲಿಗೆ ಸಂಪುಟದಿಂದ ಉಚ್ಚಾಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರಿಗೆ...

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X