ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿಲ್ಲ, ಬದಲಿಗೆ ಸಂಪುಟದಿಂದ ಉಚ್ಚಾಟನೆ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರಿಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದರು. ಆದರೆ, ರಾಜಣ್ಣ ರಾಜೀನಾಮೆ ನೀಡಿದ ಕಾರಣ ಅವರನ್ನು ಸಂಪುಟದಿಂದಲೇ ವಜಾಗೊಳಿಸಲಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.

- Advertisement -

ಸಿದ್ದರಾಮಯ್ಯ ಅವರು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಶಿಫಾರಸು ಮಾಡಿದ ನಂತರ ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರನ್ನು ಸೋಮವಾರ ಸಚಿವ ಸಂಪುಟದಿಂದ ವಜಾಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಣ್ಣ ಅವರನ್ನು ಪದಚ್ಯುತಗೊಳಿಸುವ ಪತ್ರವನ್ನು ಮುಖ್ಯಮಂತ್ರಿಗಳು ಮಧ್ಯಾಹ್ನ ರಾಜ್ಯಪಾಲರಿಗೆ ಕಳುಹಿಸಿದ್ದಾರೆ. ಇದರ ಶಿಫಾರಸನ್ನು ರಾಜಭವನ ಅಂಗೀಕರಿಸಿದೆ.

“ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಲು ರಾಜ್ಯಪಾಲರು ಸಹಿ ಮಾಡಿದ ಮೂಲ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಅಗತ್ಯ ಕ್ರಮಕ್ಕಾಗಿ ಕಳುಹಿಸಲು ನನಗೆ ಸೂಚಿಸಲಾಗಿದೆ” ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್ ಪ್ರಭುಶಂಕರ್ ಅವರು ಕರ್ನಾಟಕ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಬರೆದಿದ್ದಾರೆ.

ರಾಜಣ್ಣ ಅವರ ಇತ್ತೀಚಿನ ಹೇಳಿಕೆಗಳಿಂದಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಕಚೇರಿಯ ಮೂಲಗಳು ಹೇಳಿವೆ. 2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ “ಮತ ಕಳ್ಳತನ”ಕ್ಕೆ ಸಿದ್ದರಾಮಯ್ಯ ಅವರ ನಿಷ್ಠಾವಂತ ರಾಜಣ್ಣ, ಕರ್ನಾಟಕದಲ್ಲಿ ತಮ್ಮ ಪಕ್ಷದ ನೇತೃತ್ವದ ಸರ್ಕಾರವನ್ನು ದೂಷಿಸಿದಾಗ ಕಾಂಗ್ರೆಸ್ ಹೈಕಮಾಂಡ್‌ನ ಕೋಪಕ್ಕೆ ಗುರಿಯಾಯಿತು.

WhatsApp Image 2025 08 11 at 5.26.47 PM 1

ರಾಹುಲ್ ಗಾಂಧಿ ಇತ್ತೀಚೆಗೆ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದರು ಮತ್ತು ನಂತರ ಬೆಂಗಳೂರಿನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದದ್ದು “ಮತ ಕಳ್ಳತನ”ದಿಂದ ಎಂದು ಹೇಳಿದ್ದರು. ಬೆಂಗಳೂರು ಕೇಂದ್ರ ಸಂಸದೀಯ ಕ್ಷೇತ್ರದ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ನಕಲಿ ಮತದಾರರು ಇದ್ದಾರೆ ಎಂದು ಉಲ್ಲೇಖಿಸಿದ್ದರು.

ಆದ,ರೆ ರಾಹುಲ್ ಗಾಂಧಿ ಆರೋಪದ ಬೆನ್ನಲ್ಲೆ ಕೆಎನ್ ರಾಜಣ್ಣ “ಮತ ಕಳ್ಳತನ”ಕ್ಕೆ ಕಾಂಗ್ರೆಸ್ ಸರ್ಕಾರವನ್ನೇ ದೂಷಿಸಿದ್ದರು. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಅಕ್ರಮಗಳು ನಡೆದಿವೆ ಎಂದು ಸಚಿವರು ಹೇಳಿದರು ಮತ್ತು ಅದು “ನಮ್ಮ ಕಣ್ಣ ಮುಂದೆಯೇ” ಸಂಭವಿಸಿದೆ ಎಂದು ಆರೋಪಿಸಿದ್ದರು.

ವಿಧಾನಸಭೆ ಅಧಿವೇಶನದಲ್ಲಿ ಸೋಮವಾರ ರಾಜಣ್ಣ ಸಂಗತಿ ಚರ್ಚೆಯ ವಿಷಯವಾಯಿತು. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಮತ್ತು ರಾಜಣ್ಣ ಅವರು ಸ್ಪಷ್ಟನೆ ನೀಡಬೇಕು ಎಂದು ಬಿಜೆಪಿ ಶಾಸಕರು ಒತ್ತಾಯಿಸಿದರು. ವಿಧಾನಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ರಾಜಣ್ಣ ವಿರುದ್ಧದ ನಿರ್ದಿಷ್ಟ ಆರೋಪಗಳೇನು ಎಂದು ಕೇಳಿದರು.

ರಾಜಣ್ಣ ಕಳೆದ ಎರಡು ತಿಂಗಳಿನಿಂದ ಸೆಪ್ಟೆಂಬರ್ ಕ್ರಾಂತಿಯ ಬಗ್ಗೆ ಸುಳಿವು ನೀಡಿ ಸುದ್ದಿಯಲ್ಲಿದ್ದಾರೆ. ಈ ಕುರಿತು ಲೇವಡಿ ಮಾಡಿರುವ ಬಿಜೆಪಿ ಶಾಸಕ ಸುರೇಶ್ ಕುಮಾರ್‌, “ರಾಜ್ಯದ ಸಹಕಾರ ಸಚಿವರಾಗಿದ್ದ‌ ಕೆ ಎನ್ ರಾಜಣ್ಣರವರ ರಾಜೀನಾಮೆ ತೆಗೆದುಕೊಂಡಿಲ್ಲ. ಬದಲಿಗೆ ಅವರನ್ನು ಸಚಿವ ಸಂಪುಟದಿಂದ ಉಚ್ಛಾಟಿಸಲಾಗಿದೆ. ಕಾಂಗ್ರೆಸ್ ಯುವರಾಜರ “ಮತಗಳ್ಳತನ” ವೆಂಬ ಸುಳ್ಳನ್ನು ರಾಜ್ಯದ ಎದುರು ಬೆತ್ತಲು ಮಾಡಿದ್ದಕ್ಕಾಗಿ ಈ ಬಳುವಳಿ. ಹೇಗಿದೆ ಸೆಪ್ಟಂಬರ್ ಕ್ರಾಂತಿ? ಹುಷಾರ್!” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಸವಿತಾ ಸಮಾಜ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬಾಗಲಕೋಟೆಯ ಸವಿತಾ ಸಮಾಜ ಹಾಗೂ ಅದರ ಉಪಜಾತಿಗಳಿಗೆ ಸೇರಿದ ನಿರುದ್ಯೋಗಿಗಳು ಮತ್ತು...

ಕೊಲ್ಹಾರ | ಮೂರು ದಶಕವಾದರೂ ಮುಳುಗಡೆ ಸಂತ್ರಸ್ತರಿಗೆ ಸಿಗದ ಹಕ್ಕುಪತ್ರ

1996ರಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಗಾಗಿ ಭೂಮಿ ಕಳೆದುಕೊಂಡ ವಿಜಯಪುರ ಜಿಲ್ಲೆಯ ಕೊಲ್ಹಾರದ...

ಚಿಕ್ಕಮಗಳೂರು | ಬಣಕಲ್; ಸ.ಮಾ.ಹಿ ಪ್ರಾ. ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಸರ್ಕಾರಿ ಮಾದರಿ ಹಿರಿಯ...

ಬರಕ್ಕೆ ಮಾನದಂಡ ಮುಖ್ಯವೋ, ಬದುಕು ಮುಖ್ಯವೋ?: ಸಿ. ಬೈರೇಗೌಡರ ಪ್ರಶ್ನೆ ಇಂದಿಗೂ ಪ್ರಸ್ತುತ

ಬರ ಮೊದಲು ರೈತನ ಹೊಲದಲ್ಲಿ ಕಾಣಿಸುತ್ತದೆ. ನಂತರ ಅವನ ಸಾಲ, ಮನೆಯ...