ರಾಜಸ್ಥಾನ | ಸರ್ಕಾರಿ ವಾಹನದಲ್ಲಿ ಬಂದು ಮುಸ್ಲಿಂ ಯುವಕರ ಮೇಲೆ ಗುಂಪು ಹಲ್ಲೆ : ಓರ್ವ ಮೃತ್ಯು

Date:

Advertisements
  • ಕಡಿದಿದ್ದ ಮರವನ್ನು ವಾಹನಕ್ಕೆ ತುಂಬಲು ಬಂದಿದ್ದಾಗ ಘಟನೆ
  • ರಾಜಸ್ಥಾನದ ಆಲ್ವಾರ್‌ನಲ್ಲಿ ಘಟನೆ; 10 ಮಂದಿಯ ವಿರುದ್ಧ ಎಫ್‌ಐಆರ್

ರಾಜಸ್ಥಾನದ ಆಲ್ವಾರ್‌ನಲ್ಲಿ ಎಂಟರಿಂದ ಹತ್ತು ಮಂದಿಯಿದ್ದ ಗುಂಪೊಂದು ಸರ್ಕಾರಿ ವಾಹನದಲ್ಲಿ ಬಂದು ಮೂವರು ಮುಸ್ಲಿಂ ಯುವಕರ ಮೇಲೆ ದೊಣ್ಣೆ ಮತ್ತು ರಾಡ್‌ಗಳಿಂದ ಮಾರಣಾಂತಿಕ ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಓರ್ವ ಯುವಕ ಮೃತಪಟ್ಟಿದ್ದು, ಮೃತಪಟ್ಟವನನ್ನು ವಸೀಮ್ (27) ಎಂದು ಗುರುತಿಸಲಾಗಿದೆ.

ಮೂವರು ಯುವಕರು ಕಡಿದು ಹಾಕಲಾಗಿದ್ದ ಮರವೊಂದನ್ನು ಪಿಕಪ್‌ನಲ್ಲಿ ತುಂಬಲು ಹೋಗಿದ್ದ ವೇಳೆ ಅರಣ್ಯ ಇಲಾಖೆ ವಾಹನ ಹಾಗೂ ಜೆಸಿಬಿಯಲ್ಲಿ ಅಲ್ಲಿಗೆ ಆಗಮಿಸಿದ ಗುಂಪೊಂದು, ‘ಮುಲ್ಲೋಂಕೊ ಮಾರೋ, ಮುಲ್ಲೊಂಕೋ ಕಾಟೋ'(ಮುಸಲ್ಮಾನರಿಗೆ ಹೊಡೆಯಿರಿ, ಮುಸಲ್ಮಾನರನ್ನು ಕೊಲ್ಲಿ) ಎಂದು ಬೊಬ್ಬೆ ಹೊಡೆಯುತ್ತಾ ಹಲ್ಲೆ ನಡೆಸಿದ್ದಾರೆ ಎಂದು ಮುಸ್ಲಿಂ ಕುಟುಂಬದ ಸಂಬಂಧಿಕರು ದೂರಿದ್ದಾರೆ.

Advertisements

ಆಲ್ವಾರ್ ಜಿಲ್ಲೆಯ ಹರ್ಸೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವಸೀಮ್ ಹಾಗೂ ಆತನ ಇಬ್ಬರು ಸಹಚರರು ಮನೆ ಮಾಲೀಕನ ಒಪ್ಪಿಗೆಯೊಂದಿಗೆ ಬಾನ್ಸೂರಿಗೆ ತೆರಳಿದ್ದರು. ಮನೆಯ ಹೊರಗೆ ಕಡಿದು ಹಾಕಿದ್ದ ಮರಗಳನ್ನು ವಾಹನಕ್ಕೆ ತುಂಬಲು ಹೋಗಿದ್ದರು. ಈ ವೇಳೆ ಅರಣ್ಯ ಇಲಾಖೆಯ ಸಿಬ್ಬಂದಿ ತಿರುಗುತ್ತಿದ್ದಾರೆ. ಈಗ ಮರಗಳನ್ನು ತೆಗೆದುಕೊಂಡು ಹೋಗಬೇಡಿ ಎಂದು ಕೆಲವು ಗ್ರಾಮಸ್ಥರು ಮಾಹಿತಿ ನೀಡಿದ್ದರು. ಹಾಗಾಗಿ, ಖಾಲಿ ವಾಹನದಲ್ಲಿ ಮತ್ತೆ ಹಿಂತಿರುಗುವಾಗ ಬಂದ ಗುಂಪು, ವಿನಾಕಾರಣ ದಾಳಿ ಮಾಡಿದ್ದಾರೆ ಎಂದು ಕುಟುಂಬಿಕರು ತಿಳಿಸಿದ್ದಾರೆ.

ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯೂ ಭಾಗಿಯಾಗಿದ್ದಾರೆ ಎಂಬುದನ್ನು ಪೊಲೀಸರು ಇನ್ನೂ ಖಚಿತಪಡಿಸಿಲ್ಲ. ಆದರೆ ವಾಹನದ ನೋಂದಣಿ ಸಂಖ್ಯೆಯನ್ನು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಕುಟುಂಬಸ್ಥರು ದಾಖಲಿಸಿದ್ದಾರೆ.

ಪೊಲೀಸರು ಹೇಳಿದ್ದೇನು?
ಜಗಳದ ಮಾಹಿತಿಯ ಮೇರೆಗೆ ಪೊಲೀಸರು ಗ್ರಾಮಕ್ಕೆ ತಲುಪಿದಾಗ ಅಲ್ಲಿ ಮೂವರು ಗಾಯಗೊಂಡಿರುವುದು ಕಂಡುಬಂದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೂವರನ್ನೂ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಯುವಕ ವಸೀಮ್‌ನನ್ನು ಕೊಟ್‌ಪುಟ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಆತ ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದಾರೆ.

ಘಟನೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯ ಪಾತ್ರದ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದರು. ಈಗಾಗಲೇ ಹತ್ತು ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಿ, ಎರಡು-ಮೂರು ಶಂಕಿತರನ್ನು ವಶಕ್ಕೆ ಪಡೆದಿದ್ದೇವೆ. ಅವರನ್ನು ವಿಚಾರಣೆ ನಡೆಸುತ್ತಿದ್ದೇವೆ ಎಂದು ಅವರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಎಸಿ ನೇತೃತ್ವದಲ್ಲಿ 13ನೇ ಪಾಯಿಂಟ್‌ನಲ್ಲಿ ಉತ್ಖನನ ಪ್ರಕ್ರಿಯೆ ಮುಂದುವರಿಕೆ

ಧರ್ಮಸ್ಥಳ ಸುತ್ತಮುತ್ತಲಿನಲ್ಲಿ ಅಕ್ರಮವಾಗಿ ಶವ ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ...

ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿಲ್ಲ, ಬದಲಿಗೆ ಸಂಪುಟದಿಂದ ಉಚ್ಚಾಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರಿಗೆ...

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

Download Eedina App Android / iOS

X