ತಮಿಳುನಾಡು ಪ್ರವಾಹ | 30 ಹಿಂದೂ ಕುಟುಂಬಗಳಿಗೆ ವಾಸಿಸಲು ಬಾಗಿಲು ತೆರೆದಿಟ್ಟ ಮಸೀದಿ

Date:

Advertisements

ತಮಿಳುನಾಡಿನಲ್ಲಿ ಇತ್ತೀಚೆಗೆ ಮಿಚಾಂಗ್ ಚಂಡಮಾರುತದ ಪ್ರಭಾವಕ್ಕೆ ಸುರಿದ ಭಾರೀ ಮಳೆಯು ಪ್ರವಾಹವನ್ನೇ ಸೃಷ್ಟಿಸಿತ್ತು. ಇದರಿಂದಾಗಿ ರಾಜ್ಯದ ದಕ್ಷಿಣದ ಜಿಲ್ಲೆಗಳಲ್ಲಿ ಜನಜೀವನ ಕೂಡ ಅಸ್ತವ್ಯಸ್ತವಾಗಿತ್ತು. ಈ ನಡುವೆಯೇ ಧಾರ್ಮಿಕ ಸಾಮರಸ್ಯದ ನಿದರ್ಶನವೊಂದು ಬೆಳಕಿಗೆ ಬಂದಿದೆ.

ತಮಿಳುನಾಡಿನ ಸೇಡುಂಗನಲ್ಲೂರ್ ಬೈತುಲ್‌ ಮಾಲ್ ಜಮಾತ್ ಮಸೀದಿಯು ಪ್ರವಾಹದಿಂದ ಮನೆ ಕಳೆದುಕೊಂಡ 30 ಹಿಂದೂ ಕುಟುಂಬಗಳಿಗೆ ಮಸೀದಿಯಲ್ಲಿ ಆಶ್ರಯವನ್ನು ನೀಡಿದೆ.

ತಿರುನಲ್ವೇಲಿಯಿಂದ ತೂತುಕುಡಿ ರಸ್ತೆಯಲ್ಲಿರುವ ಸೇಡುಂಗನಲ್ಲೂರ್ ಬೈತುಲ್‌ ಮಾಲ್ ಜಮಾತ್ ಮಸೀದಿಯು ಪ್ರವಾಹದಿಂದ ಮನೆ ಕಳೆದುಕೊಂಡ ಸ್ಥಳೀಯ ಸುಮಾರು 30 ಹಿಂದೂ ಕುಟುಂಬಗಳಿಗೆ ಮಸೀದಿಯಲ್ಲಿ ಆಶ್ರಯ ನೀಡಿದೆ. ಜೊತೆಗೆ ಮಸೀದಿ ಕಮಿಟಿಯು ನಿರಾಶ್ರಿತರಿಗೆ ಬಟ್ಟೆ, ಔಷಧಿಗಳು ಮತ್ತು ಸೇರಿದಂತೆ ಆಹಾರ ಮತ್ತು ಅಗತ್ಯ ವಸ್ತುಗಳ ವ್ಯವಸ್ಥೆಯನ್ನು ಕೂಡ ಮಾಡಿದೆ.

Advertisements

ಮಿಚಾಂಗ್ ಚಂಡಮಾರುತದ ಪ್ರಭಾವದಿಂದ ಸುರಿದ ಮಳೆಗೆ ತಮಿಳುನಾಡಿನಲ್ಲಿ ಭಾರೀ ಪ್ರವಾಹ ಉದ್ಭವಿಸಿತ್ತು. ರಾಜ್ಯದ ದಕ್ಷಿಣದ ಜಿಲ್ಲೆಗಳಲ್ಲಿ ಮನೆಗಳು, ರಸ್ತೆಗಳು ಸಂಪೂರ್ಣ ಜಲಾವೃತವಾಗಿತ್ತು. ವಿದ್ಯುತ್ ಸಂಪರ್ಕ, ಮೊಬೈಲ್ ಫೋನ್ ಸಂಪರ್ಕ ಕಡಿತಗೊಂಡು ಸಾರ್ವಜನಿಕ ಸಾರಿಗೆ ಕೂಡ ಅಸ್ತವ್ಯಸ್ತಗೊಂಡಿತ್ತು. ಭಾರೀ ಮಳೆಯಿಂದ ಸಂಭವಿಸಿದ ಅವಘಡದಿಂದ ರಾಜ್ಯದ ವಿವಿಧ ಭಾಗಗಳಲ್ಲಿ 17ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು.

ಈ ಕುರಿತು ಮಾತನಾಡಿದ ಪ್ರವಾಹದಿಂದ ನಿರಾಶ್ರಿತರಾದ ಕೋವಿಲ್‌ಪತ್‌ನ ನಿವಾಸಿ ತಮಿಳರಸಿ, “ಮಸೀದಿಯಲ್ಲಿ ನಮ್ಮನ್ನು ಸ್ವಾಗತಿಸಲಾಗಿದೆ. ಅವರು ಎಂದಿಗೂ ಮಹಿಳೆಯರು ಮಸೀದಿಗೆ ಪ್ರವೇಶಿಸಬಾರದು ಎಂದು ಹೇಳಲಿಲ್ಲ. ಅವರು ನಮಗೆ ಬೇಕಾದಷ್ಟು ದಿನ ಇಲ್ಲಿಯೇ ಇರಬಹುದು ಎಂದು ಹೇಳಿದರು. ಆಹಾರದಿಂದ ಹಿಡಿದು ಔಷಧಿಗಳವರೆಗೆ ಅವರು ನಮಗೆ ಎಲ್ಲವನ್ನೂ ಒದಗಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಮಸೀದಿಯಲ್ಲಿ ಆಶ್ರಯ ಪಡೆದಿರುವ ಮತ್ತೋರ್ವ ಪ್ರವಾಹ ಪೀಡಿತ ದೈವಕನಿ ಅವರು ಮಾತನಾಡುತ್ತಾ, “ನಾವು 4 ದಿನಗಳ ಹಿಂದೆ ನಾವು ಧರಿಸಿದ್ದ ಬಟ್ಟೆಯೊಂದಿಗೆ ಇಲ್ಲಿಗೆ ಬಂದಿದ್ದೇವೆ. ನಮ್ಮಲ್ಲಿ ಬೇರೆ ಏನೂ ಇರಲಿಲ್ಲ. ಈ ಮಸೀದಿಯಲ್ಲಿ ಉಳಿದೆಲ್ಲವನ್ನೂ ಅವರು ನಮಗೆ ಒದಗಿಸಿದ್ದಾರೆ. ಇಲ್ಲಿ ಆಶ್ರಯ ಪಡೆದಿರುವವರೆಲ್ಲರೂ ಹಿಂದೂಗಳಾಗಿದ್ದಾರೆ” ಎಂದು ಹೇಳಿದ್ದಾರೆ.

ಜಮಾತ್ ಸಮಿತಿಯ ಸದಸ್ಯ ಇಮ್ರಾನ್ ಖಾನ್ ಮಾತನಾಡಿ, “ಪ್ರವಾಹ ಸಂತ್ರಸ್ತರ ಜೊತೆ ಒಗ್ಗಟ್ಟನ್ನು ಪ್ರದರ್ಶಿಸುವ ಸಲುವಾಗಿ ಮತ್ತು ಸ್ಥಳಾವಕಾಶ ಕಲ್ಪಿಸಲು ಮಸೀದಿಯಲ್ಲಿ ಎಲ್ಲ ಸಾಮೂಹಿಕ ಪ್ರಾರ್ಥನೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಪ್ರವಾಹ ಸಂತ್ರಸ್ತ ಹಿಂದೂ ಸಮುದಾಯದ ಜನರು ಮಸೀದಿಯಿಂದ ತಮ್ಮ-ತಮ್ಮ ಮನೆಗಳಿಗೆ ಹಿಂದಿರುಗುವವರೆಗೆ ನಾವು ಯಾವುದೇ ಸಾಮೂಹಿಕ ಪ್ರಾರ್ಥನೆಗಳನ್ನು ನಡೆಸದಿರಲು ನಿರ್ಧರಿಸಿದ್ದೇವೆ. ನಾವು ಏಕತೆ ಮತ್ತು ಸಮಾನತೆಯನ್ನು ನಂಬುತ್ತೇವೆ. ಪ್ರವಾಹ ಬಂದಾಗ ನಾವು ಜಮಾಅತ್ ಸಮಿತಿಯಲ್ಲಿ ಸಭೆ ನಡೆಸಿದ್ದೇವೆ ಮತ್ತು ಮಸೀದಿಯನ್ನು ಪರಿಹಾರ ಶಿಬಿರವಾಗಿ ತೆರೆಯಲು ನಿರ್ಧರಿಸಿದ್ದೇವೆ” ಎಂದು ಹೇಳಿದ್ದಾರೆ. ಮಸೀದಿಯ ನಡೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಮಿಚಾಂಗ್ ಚಂಡಮಾರುತದ ಪ್ರಭಾವದಿಂದ ತಮಿಳುನಾಡಿನ 4 ದಕ್ಷಿಣ ಜಿಲ್ಲೆಗಳಾದ ತಿರುನಲ್ವೇಲಿ, ತೂತುಕುಡಿ, ಕನ್ಯಾಕುಮಾರಿ ಮತ್ತು ರಾಮನಾಥಪುರಂನಲ್ಲಿ ಡಿ.17 ಮತ್ತು 18ರಂದು ಭಾರೀ ಮಳೆಯಾಗಿದೆ. ಇದರಿಂದಾಗಿ ಉಂಟಾದ ಪ್ರವಾಹದಲ್ಲಿ ಅನೇಕ ಪ್ರದೇಶಗಳು ಸಂಪರ್ಕ ಕಡಿತಗೊಂಡವು ಮತ್ತು ಹಲವಾರು ಕುಟುಂಬಗಳನ್ನು ಸ್ಥಳಾಂತರಿಸಲಾಗಿತ್ತು. ಪರಿಹಾರ ಕಾರ್ಯಗಳಿಗೆ ಸಹಾಯ ಮಾಡಲು ರಾಷ್ಟ್ರೀಯ ವಿಪತ್ತು ರಕ್ಷಣಾ ಪಡೆಗಳು ಮತ್ತು ರಾಜ್ಯ ವಿಪತ್ತು ರಕ್ಷಣಾ ಪಡೆಗಳನ್ನು ನಿಯೋಜಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X