ಮುಂಬೈ | ಖಾಸಗಿ ಹೊಟೇಲ್‌ನಲ್ಲಿ ಬೆಂಕಿ ಅವಘಡ; ಮೂವರು ಮೃತ್ಯು

Date:

Advertisements
  • ಬೆಂಕಿಯನ್ನು ಹತೋಟಿಗೆ ತರಲಾಗಿದೆ ಎಂದ ಅಗ್ನಿಶಾಮಕ ಅಧಿಕಾರಿ
  • ಸಾಂತಾಕ್ರೂಝ್ ಪ್ರದೇಶದ ಗ್ಯಾಲಕ್ಸಿ ಹೋಟೆಲ್‌ನಲ್ಲಿ ನಡೆದ ಘಟನೆ

ಮುಂಬೈನ ಸಾಂತಾಕ್ರೂಝ್ ಪ್ರದೇಶದ ಖಾಸಗಿ ಹೊಟೇಲೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ, ಮೂವರು ಸಾವನ್ನಪ್ಪಿರುವ ಘಟನೆ ಭಾನುವಾರ ಮಧ್ಯಾಹ್ನ ಸಂಭವಿಸಿದೆ.

‘ಗ್ಯಾಲಕ್ಸಿ’ ಹೆಸರಿನ ಹೊಟೇಲ್‌ನಲ್ಲಿ ಮಧ್ಯಾಹ್ನ 1.17ರ ಸುಮಾರಿಗೆ ಕೊಠಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಅದು ಇತರೆ ಮಹಡಿಗಳಿಗೆ ಹಬ್ಬಿದೆ.

hotel 1

ಅವಘಡದಲ್ಲಿ ಮೂವರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ಪೊಲೀಸರು ಮತ್ತು ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದರು.

Advertisements

ಮೃತಪಟ್ಟ ಮೂವರನ್ನು ರೂಪಲ್ ಕಂಜಿ (25), ಕಿಶನ್ (28) ಮತ್ತು ಕಾಂತಿಲಾಲ್ ಗೋರ್ಧನ್ ವರ (48) ಎಂದು ಗುರುತಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಅಲ್ಫಾ ವಖಾರಿಯಾ (19) ಮತ್ತು ಮಂಜುಳಾ ವಖಾರಿಯಾ (49) ಎಂಬವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅಗ್ನಿಶಾಮಕ ಅಧಿಕಾರಿ ಪಿ.ಜಿ.ದುಧಾಲ್, “ನಾವು ತಕ್ಷಣ ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನಿಸಿದ್ದೇವೆ ಮತ್ತು ನಾವು ಎಂಟು ಜನರನ್ನು ರಕ್ಷಿಸಿದ್ದೇವೆ. ಮೂವರನ್ನು ವಿಎನ್ ದೇಸಾಯಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಮೂವರು ಮೃತಪಟ್ಟಿದ್ದಾರೆ. ಎರಡನೇ ಮಹಡಿಯಲ್ಲಿದ್ದ ಕೊಠಡಿ ಸಂಖ್ಯೆ 204ರಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಅದು ಮೂರನೇ ಮಹಡಿಗೆ ವ್ಯಾಪಿಸಿದೆ. ಘಟನೆಗೆ ಏನು ಕಾರಣ ಎಂಬುದು ತನಿಖೆ ನಡೆಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X