ಮುಂಡಗೋಡ | ಜಿ.ಪಂ ಸಿಇಒ ಡಾ. ದಿಲೀಷ್ ಶಸಿ ಅನಿರೀಕ್ಷಿತ ಭೇಟಿ: ನರೇಗಾ ಕೂಲಿಕಾರರ ಸಮಸ್ಯೆ ಆಲಿಕೆ

Date:

ಮುಂಡಗೋಡ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ ಅವರು ಗುರುವಾರ ತಾಲೂಕಿನ ವಿವಿಧ ಗ್ರಾಮ ಪಂಚಾಯತ್‌ಗಳು, ಸರ್ಕಾರಿ ಕಟ್ಟಡಗಳು ಹಾಗೂ ಅಭಿವೃದ್ಧಿ ಕಾಮಗಾರಿ ಸ್ಥಳಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -

ತಾಲೂಕಿನ ಮಳಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಡೆಯುತ್ತಿರುವ ಸ್ಮಶಾನಕಟ್ಟೆ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಸಿಇಒ ಅವರು, ಅಲ್ಲಿ ಕೆಲಸ ಮಾಡುತ್ತಿದ್ದ ಕೂಲಿಕಾರರೊಂದಿಗೆ ಮಾತುಕತೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ವೇಳೆ ಕೂಲಿಕಾರರು, ಸ್ಥಳೀಯವಾಗಿ ಖಾಸಗಿ ಕೆಲಸಗಳಲ್ಲಿ ನರೇಗಾ ಯೋಜನೆಗಿಂತ ಹೆಚ್ಚಿನ ಕೂಲಿ ದರ ಇರುವುದರಿಂದ ನರೇಗಾ ಯೋಜನೆಯಡಿಯೂ ಕೂಲಿ ದರವನ್ನು ಹೆಚ್ಚಿಸಬೇಕು ಹಾಗೂ ಬೇಸಿಗೆಯ ಅವಧಿಯಲ್ಲಿ ಕೆಲಸದ ನಿಯಮಗಳಲ್ಲಿ ರಿಯಾಯಿತಿ ನೀಡಬೇಕು ಎಂದು ಮನವಿ ಮಾಡಿದರು.

ಕೂಲಿಕಾರರ ಈ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಡಾ. ದಿಲೀಷ್ ಶಸಿ ಅವರು, ಈ ವಿಷಯವನ್ನು ಆಯುಕ್ತಾಲಯದ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು. ಇದಾದ ನಂತರ ಮಳಗಿ ಹಾಗೂ ಪಾಳಾ ಗ್ರಾಮ ಪಂಚಾಯತಿ ಕಚೇರಿಗಳಿಗೆ ಭೇಟಿ ನೀಡಿದ ಅವರು, ಅಲ್ಲಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳ ಪ್ರಗತಿ ಕುರಿತು ಮಾಹಿತಿ ಪಡೆದು, ಪ್ರಮುಖ ಕಡತಗಳನ್ನು ಪರಿಶೀಲಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಬುಡಕಟ್ಟು ಜನರ ಮನೆಬಾಗಿಲಿಗೆ ಸರ್ಕಾರದ ಸೌಲಭ್ಯ; ಜನ್ ಭಾಗೀದಾರ್ ಅಭಿಯಾನ ಆರಂಭ

ಇದೇ ಸಂದರ್ಭದಲ್ಲಿ ಪಂಚಾಯತ್ ವ್ಯಾಪ್ತಿಯ ಗ್ರಂಥಾಲಯಗಳು ಹಾಗೂ ಕೂಸಿನ ಮನೆ ಕೇಂದ್ರಗಳಿಗೂ ಭೇಟಿ ನೀಡಿ ಅವುಗಳ ಕಾರ್ಯನಿರ್ವಹಣೆಯನ್ನು ವೀಕ್ಷಿಸಿದರು. ಪಾಳಾ ಐಟಿಐ ಕಾಲೇಜಿಗೆ ಭೇಟಿ ನೀಡಿ ಕಾಲೇಜಿನ ಆಡಳಿತ ಕಚೇರಿ, ಪ್ರಯೋಗಾಲಯ (ಲ್ಯಾಬ್) ಮತ್ತು ಬೋಧನಾ ಕೊಠಡಿಗಳು ಸೇರಿದಂತೆ ಲಭ್ಯವಿರುವ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು.

ಇಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಪ್ಪ ಗ್ರಾಮದಲ್ಲಿ ಬೂದು ನೀರು ನಿರ್ವಹಣೆಗಾಗಿ ಸಮುದಾಯ ಮಟ್ಟದಲ್ಲಿ ನಿರ್ಮಿಸಲಾಗಿರುವ ಚರಂಡಿ ನೀರು ಸಂಸ್ಕರಣಾ ಘಟಕವನ್ನು ವೀಕ್ಷಿಸಿದ ಅವರು, ಈ ಘಟಕವನ್ನು ನಿರಂತರವಾಗಿ ಉತ್ತಮ ರೀತಿಯಲ್ಲಿ ನಿರ್ವಹಿಸಿಕೊಂಡು ಹೋಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ವಾಯ್. ದಾಸನಕೊಪ್ಪ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಕಿರಿಯ ಅಭಿಯಂತರರಾದ ದೀಪಾ ಎಸ್. ಶೆಡಗೇರಿ, ಕಿರಿಯ ಅಭಿಯಂತರರಾದ ಪ್ರದೀಪ್ ಭಟ್, ಸಂಬಂಧಪಟ್ಟ ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಹಾಗೂ ನರೇಗಾ ಯೋಜನೆಯ ತಾಂತ್ರಿಕ ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಶಾರ್ಜಾದಲ್ಲಿ ಹತ್ಯೆಗೀಡಾದ ಅಲ್ವಿನ್ ಪ್ರಕಾಶ್ ಕುಂದರ್‌ಗೆ ಹುಟ್ಟೂರಿನಲ್ಲಿ ಅಂತಿಮ ನಮನ

ಶಾರ್ಜಾದಲ್ಲಿ ಕಳೆದ ಜುಲೈನಲ್ಲಿ ನಿಗೂಢವಾಗಿ ಹತ್ಯೆಗೀಡಾದ ಕುಂದಾಪುರ ಪುರಸಭೆ ವ್ಯಾಪ್ತಿಯ ಹೊನ್ನನಕೇರಿ...

ಹಾಸನ |‘ನಾಸ್ತಿಕತೆ ಎಂದರೆ ಧರ್ಮವಿರೋಧವಲ್ಲ’; ಸಿಪಿಐಎಂ ಧರ್ಮೇಶ್ 

ಹಾಸನ ಜಿಲ್ಲೆಯ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರೊಬ್ಬರು ‘ಆಸ್ತಿಕತೆ ಮತ್ತು ನಾಸ್ತಿಕತೆ ವೈಯಕ್ತಿಕ ವಿಚಾರವೇ...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿ: ವಿರೋಧಿಸಿ ಬೃಹತ್ ಪಾದಯಾತ್ರೆ 

ಮಲೆನಾಡಿನ ಜನರ ಪಾಲಿಗೆ 'ಮರಣಶಾಸನ'ವಾಗಿ ಪರಿಣಮಿಸಿರುವ ಅರಣ್ಯ ಕಾಯ್ದೆಗಳಲ್ಲೊಂದಾದ ಕಸ್ತೂರಿ ರಂಗನ್...

ಬಾಗಲಕೋಟೆ | ಸವಿತಾ ಸಮಾಜ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬಾಗಲಕೋಟೆಯ ಸವಿತಾ ಸಮಾಜ ಹಾಗೂ ಅದರ ಉಪಜಾತಿಗಳಿಗೆ ಸೇರಿದ ನಿರುದ್ಯೋಗಿಗಳು ಮತ್ತು...