ಉಡುಪಿ | ‘ನವೋನ್ಮೇಶ್ 2026’: ಕೆನರಾ ವಿಕಾಸ್ ಪಿಯು ಕಾಲೇಜಿಗೆ ಸಮಗ್ರ ಚಾಂಪಿಯನ್ ಪ್ರಶಸ್ತಿ

Date:

ಮೂಡ್ಲಕಟ್ಟೆಯ ಐಎಂಜೆ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಪಿಯುಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ರಾಜ್ಯಮಟ್ಟದ ವಿಜ್ಞಾನ, ವಾಣಿಜ್ಯ, ಸಾಂಸ್ಕೃತಿಕ ಹಾಗೂ ಕ್ರೀಡಾ ಉತ್ಸವ ‘ನವೋನ್ಮೇಶ್ 2026’ರಲ್ಲಿ ಮಂಗಳೂರಿನ ಕೆನರಾ ವಿಕಾಸ್ ಪಿಯು ಕಾಲೇಜಿನ ತಂಡ ಸಮಗ್ರ ಚಾಂಪಿಯನ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

- Advertisement -

ಉಡುಪಿಯ ಎಂಜೆಎಂ ಪಿಯು ಕಾಲೇಜಿನ ತಂಡ ಪ್ರಥಮ ರನ್ನರ್ ಅಪ್ ಪ್ರಶಸ್ತಿ ಪಡೆದರೆ, ಕುಂದಾಪುರದ ಶ್ರೀ ವೆಂಕಟರಮಣ ಪಿಯು ಕಾಲೇಜಿನ ತಂಡ ದ್ವಿತೀಯ ರನ್ನರ್ ಅಪ್ ಪ್ರಶಸ್ತಿಗೆ ಭಾಜನವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ಶುಕ್ರವಾರ ನಡೆದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಚಲನಚಿತ್ರ ನಟ ವಜ್ರಂಗ್ ಶೆಟ್ಟಿ ಅವರು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ತಂಡಗಳು ಹಾಗೂ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಐಎಂಜೆ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕ ಡಾ. ಎಸ್. ಎನ್. ಭಟ್ ವಹಿಸಿದ್ದರು. ಎಂಐಟಿಕೆ ಪ್ರಾಂಶುಪಾಲ ಡಾ. ರಾಮಕೃಷ್ಣ ಹೆಗ್ಡೆ ಹಾಗೂ ಎಂಸಿಎನ್ ಪ್ರಾಂಶುಪಾಲೆ ಪ್ರೊ. ಜೆನ್ನಿಫರ್ ಫ್ರೀಡಾ ಮೆನೆಜಸ್ ಉಪಸ್ಥಿತರಿದ್ದರು.

ಐಎಂಜೆಐಎಸ್ಸಿ ಪ್ರಾಂಶುಪಾಲೆ ಡಾ. ಪ್ರತಿಭಾ ಎಂ. ಪಟೇಲ್ ಅವರು ನವೋನ್ಮೇಶ್ 2026ರ ವರದಿ ವಾಚಿಸಿದರು. ಐಎಂಜೆಸಿಎಎಚ್‌ಎಸ್ ಪ್ರಾಂಶುಪಾಲೆ ಪ್ರೊ. ಹೇಮಲತಾ ಸ್ವಾಗತಿಸಿದರು. ಎಂಸಿಎನ್ ಉಪಪ್ರಾಂಶುಪಾಲೆ ರೂಪಶ್ರೀ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿನಿ ಅಲಿಶಾ ಬಿಷಪ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಲತವಾಡ | ಬರದ ನಾಡಿನಲ್ಲಿ ಅಂತರ್ಜಲದ ಸೆಲೆ: ವಾಣಿಜ್ಯ ಕಟ್ಟಡದ ಬುನಾದಿಯಲ್ಲಿ ಬತ್ತದ ಬುಗ್ಗೆ!

ಒಂದೆಡೆ ಮಳೆ ಕೊರತೆ ಮತ್ತು ಬರಗಾಲದ ಬವಣೆಯಿಂದ ನೀರಿಗಾಗಿ ಪರದಾಡುವ ಪರಿಸ್ಥಿತಿ,...

ಬೆಳಗಾವಿ | ಹೆದ್ದಾರಿಯಲ್ಲಿ ಸಂಚಾರ ಆರಂಭವಾದ ಬೆನ್ನಲ್ಲೇ ದುರಂತ ಬೈಕ್‌ಗೆ ಲಾರಿ ಡಿಕ್ಕಿ: ತಂದೆ-ಮಗಳು ಸ್ಥಳದಲ್ಲೇ ಸಾವು

ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ...

​ಪದವೀಧರರ-ಶಿಕ್ಷಕರ ನಿಜವಾದ ಧ್ವನಿಯಾಗಲು ಸ್ಪರ್ಧೆ;ಯಾವುದೇ ಒತ್ತಡಕ್ಕೂ ಹಿಂದೆ ಸರಿಯಲ್ಲ:ವಕೀಲ ಬರೀದ್

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ವಕೀಲ ಬರೀದ್...