ಬಿಹಾರ | ಎನ್‌ಡಿಎ ಮೈತ್ರಿಕೂಟದ ಮುಖ್ಯಮಂತ್ರಿಯಾಗಿ ನಿತೀಶ್ ಪ್ರಮಾಣ ವಚನ: 11 ವರ್ಷದಲ್ಲಿ 9ನೇ ಬಾರಿ ಸಿಎಂ

Date:

Advertisements

ಆರ್‌ಜೆಡಿ ಮಹಾಘಟಬಂಧನ್ ಮೈತ್ರಿಕೂಟಕ್ಕೆ ಇಂದು ಬೆಳಿಗ್ಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಎನ್‌ಡಿಎ ಮೈತ್ರಿಕೂಟದ ಬೆಂಬಲದೊಂದಿಗೆ  ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ರಾಜಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲರಾದ ರಾಜೇಂದ್ರ ಅರ್ಲೇಕರ್ ಅವರು ಪ್ರಮಾಣ ವಚನ ಬೋಧಿಸಿದರು. ಕಳೆದ 18 ತಿಂಗಳಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಂಡು ಮತ್ತೆ ಸೇರ್ಪಡೆಯಾಗುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಅಲ್ಲದೆ 11 ವರ್ಷಗಳಲ್ಲಿ ಇದು 9ನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂವರು ಮಾನಗೆಟ್ಟ ನಾಯಕರು ಮತ್ತು ರಾಮ ರಾಜಕಾರಣ

Advertisements

ನಿತೀಶ್ ಅವರ ಸಂಪುಟಕ್ಕೆ ಓರ್ವ ಪಕ್ಷೇತರ ಸೇರಿ 9 ಮಂದಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರಲ್ಲಿ ಇಬ್ಬರು ಡಿಸಿಎಂಗಳಾಗುವ ಸಾಧ್ಯತೆಯಿದೆ.

ಬಿಹಾರ ವಿಧಾನಸಭೆಯು 243 ಸದಸ್ಯ ಬಲವನ್ನು ಹೊಂದಿದೆ. ಆ ಪೈಕಿ, ಆರ್‌ಜೆಡಿ 79 ಶಾಸಕರನ್ನು ಹೊಂದಿದೆ; ನಂತರದ ಸ್ಥಾನದಲ್ಲಿ ಬಿಜೆಪಿ 78, ಜೆಡಿಯು 45, ಕಾಂಗ್ರೆಸ್‌ 19, ಸಿಪಿಐ(ಎಂ-ಎಲ್‌) 12, ಸಿಪಿಐ(ಎಂ) ಮತ್ತು ಸಿಪಿಐ ತಲಾ 2 ಹಾಗೂ ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) 4, ಎಐಎಂಐಎಂ 1 ಹಾಗೂ ಇಬ್ಬರು ಪಕ್ಷೇತರ ಶಾಸಕರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

  1. 11 ವರ್ಷಗಳಲ್ಲಿ 9 ಬಾರಿ ಮುಖ್ಯ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್ !

    ಮುಂದೆ ಇನ್ನೆಷ್ಟು ಬಾರಿ ರಾಜೀನಾಮೆ ಕೊಟ್ಟು ಮತ್ತೆಷ್ಟು ಬಾರಿ ಮುಖ್ಯ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೋ ಬಿಹಾರದ ಈ ನಿತೀಶ್ ಕುಮಾರ್ ?

    ಯಾರು ಏನೇ ಹೇಳಲಿ , ನೀವು ಮತ್ತೆ – ಮತ್ತೆ ಮುಖ್ಯ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಮತ್ತೆ – ಮತ್ತೆ ಮುಖ್ಯ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದರ ಮೂಲಕ ಗಿನ್ನೀಸ್ ರೆಕಾರ್ಡ್ ಮಾಡಲೇಬೇಕು !?

  2. ITS SHAME ON DEMOCRACY, HE IS USING INTELLIGENCY TO DESTABILIZE OUR VIBRANT DEMOCRACY, HE IS FOLLOWING DIRTY POLITICS, WHAT KIND OF MESSAGE HE IS SENDING TO PRESENT GENERATION, THIS IS NOTHING POLITICAL PROSTITUTION, SHAME …SHAME NITHISH KUMAR

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X