ಹರಿಯಾಣ ಕೋಮುಗಲಭೆ | ಪ್ರಮುಖ ಆರೋಪಿ, ಭಜರಂಗದಳದ ಬಿಟ್ಟು ಭಜರಂಗಿ ಬಂಧನ

Date:

Advertisements

ಹರಿಯಾಣದ ನುಹ್ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಕೋಮುಗಲಭೆಯಲ್ಲಿ ಪ್ರಮುಖ ಆರೋಪಿ, ಭಜರಂಗದಳದ ಮುಖಂಡ ಬಿಟ್ಟು ಭಜರಂಗಿಯನ್ನು ಮೇವಾತ್‌ನ ಪೊಲೀಸರು ಮಂಗಳವಾರ ಬಂಧಿಸಿರುವುದಾಗಿ ವರದಿಯಾಗಿದೆ.

ಬಿಟ್ಟು ಭಜರಂಗಿಯನ್ನು ಆತನ ಫರೀದಾಬಾದ್ ನಿವಾಸದಿಂದ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಆದರೆ ಈ ಬಗ್ಗೆ ಪೊಲೀಸರು ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.

ಈತನನ್ನು ಪೊಲೀಸರು ಬಂಧಿಸಿದ ದೃಶ್ಯವು ಸ್ಥಳೀಯ ಮನೆಯೊಂದರ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಸುಮಾರು 15ರಿಂದ 20 ಮಂದಿ ಪೊಲೀಸರು ಗುಂಪಿನಲ್ಲಿರುವುದು ಸೆರೆಯಾಗಿದೆ.

Advertisements

ಬಿಟ್ಟು ಭಜರಂಗಿ ಫರೀದಾಬಾದ್ ನಿವಾಸಿಯಾಗಿದ್ದು, ಈತನ ನಿಜವಾದ ಹೆಸರು ರಾಜಕುಮಾರ್. ಸ್ವಘೋಷಿತ ಗೋರಕ್ಷಕನಾಗಿ ಗುರುತಿಸಿಕೊಂಡಿರುವ ಈತ, ಗೋರಕ್ಷಾ ಭಜರಂಗದಳ ಎಂಬ ಸಂಘಟನೆಯ ಅಧ್ಯಕ್ಷ.

ಈ ಸಂಘಟನೆಯು ಇತ್ತೀಚೆಗೆ ಕರೆ ನೀಡಿದ್ದ ಬ್ರಿಜ್ ಮಂಡಲ ಯಾತ್ರೆಯ ವೇಳೆ ಕೋಮುಗಲಭೆ ಸಂಭವಿಸಿತ್ತು. ಈ ಹಿನ್ನೆಲೆಯಲ್ಲಿ ಈತನ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ಜುಲೈ 31 ರಂದು ನುಹ್‌ನಲ್ಲಿ ಭುಗಿಲೆದ್ದಿದ್ದ ಕೋಮುಗಲಭೆಯಲ್ಲಿ ಆರು ಜನರು ಸಾವನ್ನಪ್ಪಿದ್ದರು. 88 ಜನರು ಗಂಭೀರವಾಗಿ ಗಾಯಗೊಂಡಿದ್ದರು.

ಇತ್ತೀಚಿನ ಮಾಹಿತಿಯ ಪ್ರಕಾರ, ಗಲಭೆಗೆ ಸಂಬಂಧಿಸಿದಂತೆ 230 ಜನರನ್ನು ನುಹ್ ಪೊಲೀಸರು ಮತ್ತು 79 ಜನರನ್ನು ಗುರುಗ್ರಾಮ್ ಪೊಲೀಸರು ಬಂಧಿಸಿದ್ದರು ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X