ಮಣಿಪುರ | ಲೋಕಸಭೆಯಲ್ಲಿ ವಿಪಕ್ಷಗಳ ಪ್ರತಿಭಟನೆ: ಆಗ ಮೈಕ್ ಕಿತ್ತರು, ಈಗ ಕ್ಯಾಮರಾ ತಿರುಗಿಸಿದರು!

Date:

ಕಳೆದ ಜುಲೈ 20ರಂದು ಮುಂಗಾರು ಅಧಿವೇಶನ ಪ್ರಾರಂಭವಾಗಿದೆ. ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸದನದಲ್ಲಿ ಹೇಳಿಕೆ ನೀಡಬೇಕು ಮತ್ತು ಚರ್ಚೆಗೆ ಅವಕಾಶ ನೀಡಬೇಕು ಎಂಬ ಪ್ರತಿಪಕ್ಷಗಳು ಒತ್ತಾಯ ಮಾಡುತ್ತಲೇ ಬಂದಿವೆ. ಅಲ್ಲದೇ, ಪ್ರತಿಭಟನೆ ನಡೆಸುತ್ತಾ ಲೋಕಸಭೆಯ ಕಲಾಪದಲ್ಲಿ ಆಗ್ರಹಪಡಿಸುತ್ತಲೇ ಇವೆ. ಆದರೆ ಈವರೆಗೂ ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನಲ್ಲಿ ಮಾತನಾಡಿಲ್ಲ. ಬದಲಿಗೆ ದೇಶದ ನಾನಾ ರಾಜ್ಯಗಳಲ್ಲಿ ನಡೆಯುತ್ತಿರುವ ವಿವಿಧ ಕಾರ್ಯಕ್ರಮಗಳಲ್ಲಿ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ.

ಇಂದು ಕೂಡ ಲೋಕಸಭೆಯಲ್ಲಿ ವಿಪಕ್ಷಗಳ ಸದಸ್ಯರು ಮಣಿಪುರ ವಿಚಾರ ಉಲ್ಲೇಖಿಸಿ ಪ್ರತಿಭಟನೆ ಮುಂದುವರಿಸಿದ್ದಾರೆ. ಈ ಮಧ್ಯೆ ವಿಪಕ್ಷಗಳ ಪ್ರತಿಭಟನೆಯ ದೃಶ್ಯಗಳು ಕ್ಯಾಮರಾಗಳಲ್ಲಿ ದಾಖಲಾಗದಂತೆ ಬೇರೆ ಬೇರೆ ಕಡೆ ಹಾಗೂ ಝೂಮ್ ಮಾಡಿ ತಿರುಗಿಸಿರುವ ದೃಶ್ಯಗಳು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದೆ.

“ಇದು ಇಂದು ನಡೆದ ಲೋಕಸಭೆಯ ಅಧಿವೇಶನ. ಮಣಿಪುರದಲ್ಲಿ 90ಕ್ಕೂ ಹೆಚ್ಚು ದಿನಗಳಿಂದ ನಡೆಯುತ್ತಿರುವ ಹಿಂಸಾಚಾರದಿಂದ ಜನರು ನರಳುತ್ತಿದ್ದಾರೆ. ಮಣಿಪುರದಲ್ಲಿ ಬಿಜೆಪಿ ಸರ್ಕಾರವಿದೆ. ಸಂಸತ್ತಿನಲ್ಲಿ ಮಣಿಪುರದ ಬಗ್ಗೆ ಚರ್ಚೆ ನಡೆಸಬೇಕೆಂದು ಪ್ರತಿಪಕ್ಷಗಳು ಬಯಸಿದ್ದವು. ಅದಕ್ಕೆ ಸರ್ಕಾರ ಸಿದ್ಧವಿಲ್ಲ. ಪ್ರತಿಪಕ್ಷಗಳು ಮಣಿಪುರದ ಬಗ್ಗೆ ಹಿಡಿದಿರುವ ಫಲಕಗಳು ವೀಕ್ಷಕರಿಗೆ ಕಾಣದಂತೆ ಕ್ಯಾಮರಾ ತಿರುಗಿಸುವ ದೃಶ್ಯ ನೋಡಿ. ಈ ಸರ್ಕಾರಕ್ಕೆ ಭಯ ಕಾಡತೊಡಗಿದೆ’ ಎಂದು ನೆಟ್ಟಿಗರೊಬ್ಬರು ವಿಡಿಯೋವನ್ನು ಹಂಚಿಕೊಂಡು ಟ್ವೀಟ್ ಮಾಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಷಾ ಮಾತನಾಡುವ ವೇಳೆ ಸೆರೆಯಾಗಿರುವ ಈ ದೃಶ್ಯದಲ್ಲಿ ‘ಇಂಡಿಯಾ ಫಾರ್ ಮಣಿಪುರ್’ ಎಂಬ ಭಿತ್ತಿಪತ್ರಗಳನ್ನು ವಿಪಕ್ಷಗಳ ಸದಸ್ಯರು ಇಟ್ಟುಕೊಂಡಿದ್ದರು. ಈ ದೃಶ್ಯಗಳು ಸೆರೆಯಾಗದಂತೆ ಝೂಮ್ ಮಾಡುವುದು ಮತ್ತು ಬೇರೆ ಬೇರೆ ‘ಕ್ಯಾಮರಾ ಆ್ಯಂಗಲ್’ಗಳನ್ನು ಪ್ರಸಾರ ಮಾಡುವುದನ್ನು ವಿಡಿಯೋದಲ್ಲಿ ಗಮನಿಸಬಹುದು.

ಮಣಿಪುರದ ವಿಚಾರವನ್ನು ಪ್ರಸ್ತಾಪಿಸಿ ಕಳೆದ ಮಂಗಳವಾರ ರಾಜ್ಯಸಭೆಯಲ್ಲಿ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡುವ ವೇಳೆ ಮೈಕ್​ ಆಫ್​​ ಮಾಡಲಾಗಿತ್ತು. ಇದನ್ನು ಪ್ರತಿಭಟಿಸಿ ವಿಪಕ್ಷಗಳು ಸಭಾತ್ಯಾಗ ಕೂಡ ಮಾಡಿದ್ದವು.

ಈ ಬಗ್ಗೆ ರಾಜ್ಯಸಭೆಯಲ್ಲೇ ಮಾತನಾಡಿದ್ದ ಖರ್ಗೆ, ‘ಮೈಕ್ ಆಫ್ ಮಾಡುವ ಮೂಲಕ ನನ್ನ ಸ್ವಾಭಿಮಾನಕ್ಕೆ ಸವಾಲು ಹಾಕಲಾಗಿದೆ. ಅವಮಾನ ಮಾಡಲಾಗಿದೆ’ ಎಂದು ಖಂಡಿಸಿದ್ದರು.

ಆಗ ಮೈಕ್, ಈಗ ಕ್ಯಾಮರಾ- ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅನಧಿಕೃತ ಕೋಚಿಂಗ್‌ ಕೇಂದ್ರಗಳ ವಿರುದ್ಧ ಕ್ರಮಕ್ಕೆ ದಲಿತ ಸೇನೆ ಆಗ್ರಹ

ಔರಾದ ತಾಲೂಕಿನಾದ್ಯಂತ ನಿಯಮಬಾಹಿರವಾಗಿ ನಡೆಯುತ್ತಿರುವ ಕೋಚಿಂಗ್ ಕೇಂದ್ರಗಳು ಹಾಗೂ ಅನಧಿಕೃತ ವಸತಿ...

ಡಿಸೆಂಬರ್‌ 20, 21, 22 ರಂದು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್‌ 20,...

ಬಾಲಸೋರ್‌ ದುರಂತ ಮಾಸುವ ಮುನ್ನವೇ ಮತ್ತೊಂದು ರೈಲು ಅಪಘಾತ | Railway accident | West Bengal

ಒಡಿಶಾದ ಬಾಲಸೋರ್‌ ನಲ್ಲಿ ನಡೆದ ಭೀಕರ ದುರಂತ ಮಾಸುವ ಮುನ್ನವೇ ಮತ್ತೊಂದು...

ಪರ್ಯಾಯ ಮಾಧ್ಯಮಗಳತ್ತ ಜನರ ಚಿತ್ತ

2024ರ ಲೋಕಸಭಾ ಚುನಾವಣೆಯ ವರದಿ ಮತ್ತು ವೀಕ್ಷಣೆಯಲ್ಲಿ ಮುಖ್ಯವಾಹಿನಿ ಮಾಧ್ಯಮಗಳಿಗಿಂತ ಪರ್ಯಾಯ...