ಜ್ಞಾನವಾಪಿ ವಿವಾದ | ನ್ಯಾಯಾಲಯದ ಆದೇಶ ಬಂದ ಕೂಡಲೇ ಮಸೀದಿಯ ನೆಲಮಹಡಿಯಲ್ಲಿ ಪೂಜೆ ಆರಂಭ

Date:

Advertisements

ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿ ಹಿಂದೂ ಭಕ್ತರಿಗೆ ಪ್ರಾರ್ಥನೆಗೆ ವಾರಣಾಸಿ ಜಿಲ್ಲಾ ನ್ಯಾಯಾಲಯ ಅವಕಾಶ ನೀಡಿ ನಿನ್ನೆ ಆದೇಶ ಹೊರಡಿಸಿತ್ತು. ಈ ಆದೇಶ ಬಂದ ಕೆಲವೇ ಗಂಟೆಗಳಲ್ಲಿ ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿ ಪೂಜೆ ಪ್ರಾರಂಭಿಸಲಾಗಿದೆ. ಈ ನಡುವೆ ಸಂಘರ್ಷ ಉಂಟಾಗದಂತೆ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಕಾಶಿ ವಿಶ್ವನಾಥ ದೇವಸ್ಥಾನದ ಟ್ರಸ್ಟ್‌ನ ಅಧ್ಯಕ್ಷ ನಾಗೇಂದ್ರ ಪಾಂಡೆ, “ವಾರಾಣಸಿ ಜಿಲ್ಲಾ ನ್ಯಾಯಾಲಯ ನೀಡಿದ ಆದೇಶದ ಮೇರೆಗೆ ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿ ಬುಧವಾರ (ಜನವರಿ 31) ರಾತ್ರಿ ಪೂಜೆ ಸಲ್ಲಿಸಲಾಯಿತು” ಎಂದು  ತಿಳಿಸಿದ್ದಾರೆ.

Gyanvapi Case

ಕಾನೂನು ಹೋರಾಟದ ಮಹತ್ವದ ಬೆಳವಣಿಗೆಯಲ್ಲಿ ವಿವಾದಿತ ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿರುವ ವಿಗ್ರಹಗಳಿಗೆ ಅರ್ಚಕರು ಪೂಜೆ ಸಲ್ಲಿಸಬಹುದು ಎಂದು ಜಿಲ್ಲಾ ನ್ಯಾಯಾಲಯ ಬುಧವಾರ (ಜನವರಿ 31) ತೀರ್ಪು ನೀಡಿತ್ತು.

Advertisements

ವಾರಣಾಸಿ ಮಸೀದಿಯ ಬೀಗ ಮುದ್ರೆ ಹಾಕಿರುವ ನೆಲ ಮಹಡಿ ‘ವ್ಯಾಸ್ ಕಾ ಠಿಕಾಣಾ’ದಲ್ಲಿ ಹಿಂದೂ ಭಕ್ತರು ಪ್ರಾರ್ಥನೆ ಸಲ್ಲಿಸಬಹುದಾಗಿದೆ. ಹಿಂದೂಗಳಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸುವುದಕ್ಕಾಗಿ ಇನ್ನು ಒಂದು ವಾರದೊಳಗಾಗಿ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ನ್ಯಾಯಾಲಯವು ತನ್ನ ವಿಚಾರಣೆಯ ಸಂದರ್ಭದಲ್ಲಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿತ್ತು.

“ಬುಧವಾರ ರಾತ್ರಿ 10.30ಕ್ಕೆ ಸುಮಾರು 31 ವರ್ಷಗಳ ನಂತರ ವ್ಯಾಸ್ ಅವರ ನೆಲಮಹಡಿಯನ್ನು ಪ್ರಾರ್ಥನೆಗಾಗಿ ತೆರೆಯಲಾಯಿತು. ನ್ಯಾಯಾಲಯದ ಆದೇಶದಂತೆ ಜಿಲ್ಲಾಡಳಿತವು ಪೂಜೆ ಸಲ್ಲಿಸಲು ಅಗತ್ಯವಾದ ಎಲ್ಲ ವ್ಯವಸ್ಥೆಗಳನ್ನು ಅತ್ಯಂತ ತ್ವರಿತವಾಗಿ ಮಾಡಿದೆ” ಎಂದು ನಾಗೇಂದ್ರ ಪಾಂಡೆ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಕೇಂದ್ರ ಸರ್ಕಾರದ ಬಜೆಟ್‌ ನಡುವೆಯೇ ವಾಣಿಜ್ಯ ಬಳಕೆಯ ಎಲ್​​ಪಿಜಿ ಸಿಲಿಂಡರ್ ಬೆಲೆ ಹೆಚ್ಚಳ

ನ್ಯಾಯಾಲಯದ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಹಿಂದೂ ಭಕ್ತಾದಿಗಳಿಗೆ ‘ವ್ಯಾಸ್ ಕಾ ಠಿಕಾಣಾ’ದಲ್ಲಿ ಪೂಜೆಗೆ ಅವಕಾಶ ಕಲ್ಪಿಸಲಾಗದೆ. ಜೊತೆಗೆ ಸೂಕ್ತ ಪೊಲೀಸ್ ಭದ್ರತೆಯನ್ನು ಕೂಡ ಏರ್ಪಡಿಸಲಾಗಿದೆ. ನ್ಯಾಯಾಲಯದ ಆದೇಶವನ್ನು ಪಾಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್‌. ರಾಜಲಿಂಗಂ ತಿಳಿಸಿದ್ದಾರೆ.

ಹೈಕೋರ್ಟ್‌ ಮೊರೆ ಹೋಗಲು ತೀರ್ಮಾನಿಸಿದ ಮುಸ್ಲಿಂ ಪರ ಅರ್ಜಿದಾರರು

ವಾರಣಾಸಿ ನ್ಯಾಯಾಲಯದ ಈ ಆದೇಶದ ಕುರಿತು ಪ್ರತಿಕ್ರಿಯಿಸಿದ ಮುಸ್ಲಿಂ ಪರ ವಕೀಲ ಅಖ್ಲಾಕ್ ಅಹ್ಮದ್, ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‌ಗೆ ಮೊರೆ ಹೋಗುವುದಾಗಿ ಹೇಳಿದ್ದಾರೆ.

“ಈ ಆದೇಶವು 2022ರ ಅಡ್ವೊಕೇಟ್ ಕಮಿಷನರ್ ವರದಿ, 1937ರ ಎಎಸ್‌ಐ ವರದಿಯನ್ನು ಕಡೆಗಣಿಸಿದೆ. 1993ರ ಮೊದಲು ಪ್ರಾರ್ಥನೆಗಳನ್ನು ನಡೆಸಿರುವ ಬಗ್ಗೆ ಹಿಂದೂ ಕಡೆಯವರು ಯಾವುದೇ ಸಾಕ್ಷ್ಯವನ್ನು ನೀಡಿಲ್ಲ. ಸ್ಥಳದಲ್ಲಿ ಅಂತಹ ಯಾವುದೇ ವಿಗ್ರಹವಿರಲಿಲ್ಲ” ಎಂದು ಹೇಳಿದ್ದಾರೆ.

ಈ ಆದೇಶದ ಬಗ್ಗೆ ಮಾತನಾಡಿರುವ ವಕೀಲ ಮೆರಾಜುದ್ದೀನ್ ಸಿದ್ದಿಕಿ, “ಆದೇಶದ ವಿರುದ್ಧ ಉನ್ನತ ನ್ಯಾಯಾಲಯಗಳ ಮೊರೆ ಹೋಗುತ್ತೇವೆ. ನಾನು ಅಂತಹ ಯಾವುದೇ ಆದೇಶವನ್ನು ಸ್ವೀಕರಿಸುವುದಿಲ್ಲ, ನಾವು ಕಾನೂನು ಹೋರಾಟ ಮಾಡುತ್ತೇವೆ, ರಾಜಕೀಯ ಲಾಭ ಪಡೆಯಲು ಇದು ನಡೆಯುತ್ತಿದೆ, ಬಾಬರಿಯಲ್ಲಿ ಮಾಡಿದ ಅದೇ ವಿಧಾನವನ್ನು ಇಲ್ಲಿ ಅಳವಡಿಸಿಕೊಳ್ಳಲಾಗುತ್ತಿದೆ. ಈ ಮೊದಲು ಕಮಿಷನರ್ ವರದಿ ಮತ್ತು ಎಎಸ್‌ಐ ವರದಿಯು ಒಳಗೆ ಏನೂ ಇಲ್ಲ ಎಂದು ಹೇಳಿತ್ತು. ನ್ಯಾಯಾಲಯದ ಆದೇಶದಿಂದ ನಮಗೆ ತುಂಬಾ ಅಸಮಾಧಾನವಾಗಿದೆ. 1993ಕ್ಕಿಂತ ಮೊದಲು ಅಲ್ಲಿ ಪ್ರಾರ್ಥನೆಗಳು ನಡೆದಿವೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X